
ದಕ್ಷಿಣ ಆಫ್ರಿಕಾದಿಂದ 12 ಚೀತಾಗಳು ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಎಂಟ್ರಿ ಕೊಟ್ಟಿವೆ.

ದಕ್ಷಿಣ ಆಫ್ರಿಕಾದ ಜೊಹಾನ್ಸ್‌ಬರ್ಗ್‌ನಿಂದ 12 ಚೀತಾಗಳನ್ನು ಹೊತ್ತ ಭಾರತೀಯ ವಾಯುಪಡೆಯ ಐಎಎಫ್ ಸಿ- 17 ವಿಮಾನವು ಗ್ವಾಲಿಯರ್‌ನ ವಾಯುಪಡೆ ನೆಲೆಗೆ ಶನಿವಾರ ಬೆಳಿಗ್ಗೆ 10 ಗಂಟೆಗೆ ಬಂದಿಳಿಯಿತು.

ಈ ಚೀತಾಗಳನ್ನು ಐಎಎಫ್ ಹೆಲಿಕಾಪ್ಟರ್‌ಗಳ ಮೂಲಕ ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಕೊಂಡೊಯ್ಯಲಾಯಿತು.

ಏಳು ಗಂಡು ಮತ್ತು ಐದು ಹೆಣ್ಣು ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನದಲ್ಲಿ ಕ್ವಾರೆಂಟೈನ್ ಪೂರ್ಣಗೊಳಿಸಿದ ನಂತರ ಅರಣ್ಯದ ಒಳಗೆ ಬಿಡಲಾಗುತ್ತದೆ.

ಮಧ್ಯಪ್ರದೇಶದ ಗ್ವಾಲಿಯರ್‌ಗೆ ವಿಮಾನದಲ್ಲಿ ಬಂದ ಎರಡನೇ ಬ್ಯಾಚ್‌ನ ಚೀತಾಗಳನ್ನು ಕುನೋ ರಾಷ್ಟ್ರೀಯ ಉದ್ಯಾನಕ್ಕೆ ಸಾಗಿಸಲಾಯ್ತು.

ಭಾರತವು ದಕ್ಷಿಣ ಆಫ್ರಿಕಾದಿಂದ ಚೀತಾಗಳನ್ನು ತರಿಸಿಕೊಳ್ಳುವ ಆಲೋಚನೆ ಮಾಡಿದ ಮೂರು ವರ್ಷಗಳ ನಂತರ, ಐದು ಹೆಣ್ಣು ಚೀತಾಗಳನ್ನು ಒಳಗೊಂಡಂತೆ ಒಟ್ಟು 12 ಚೀತಾಗಳನ್ನು ತರಲಾಗಿದೆ.

ಕೇಂದ್ರ ಸಚಿವ ಭೂಪೇಂದರ್ ಯಾದವ್ ಅವರು ಆಫ್ರಿಕನ್ನ 12 ಚೀತಾಗಳನ್ನು ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಬಿಟ್ಟರು.
