ಶೃಂಗೇರಿ ಶಾರದಾ ಮಠಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ, ಇಲ್ಲಿದೆ ಫೋಟೋಸ್
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಶಾರದಾ ಮಠಕ್ಕೆ ಭೇಟಿ ನೀಡಿದ್ದರು. ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ದೇವಿ ದರ್ಶನ ಪಡೆದರು. ಬಳಿಕ ಉಭಯ ಜಗದ್ಗುರುಗಳ ಆಶೀರ್ವಾದ ಪಡೆದರು.
Updated on:May 26, 2024 | 10:00 AM

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯಸಭೆಗೆ ಕರ್ನಾಟಕದಿಂದ ಆಯ್ಕೆ ಆಗಿದ್ದಾರೆ. ಏ. 26 ರಂದು ನಡೆದ ಲೋಕಸಭೆ ಚುನಾವಣೆಗೆ ರಾಜ್ಯದ ಮೊದಲ ಹಂತದ ಮತದಾನದಲ್ಲಿ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನಲ್ಲಿ ಮತದಾನ ಮಾಡಿದರು.

ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಭೇಟಿ ನೀಡಿದ್ದರು.

ಖಾಸಗಿ ಕಾರ್ಯಕ್ರಮ ನಿಮಿತ್ತ ನಿರ್ಮಲಾ ಸೀತಾರಾಮನ್ ಅವರು ಕುಟುಂಬ ಸಮೇತ ಶನಿವಾರ ರಾತ್ರಿಯೇ ಶೃಂಗೇರಿಗೆ ಭೇಟಿ ನೀಡಿದ್ದರು. ಶುಕ್ರವಾರ (ಮೇ 24) ರಂದು ಶೃಂಗೇರಿ ಮಠದಲ್ಲೇ ವಾಸ್ತವ್ಯ ಹೂಡಿದ್ದರು.

ಶನಿವಾರ ಬೆಳಗ್ಗೆ ಶೃಂಗೇರಿ ಶಾರದಾ ಮಠಕ್ಕೆ ತೆರಳಿ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿ, ದೇವಿ ದರ್ಶನ ಪಡೆದರು.

ಬಳಿಕ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಉಭಯ ಜಗದ್ಗುರುಗಳ ಆಶೀರ್ವಾದ ಪಡೆದರು.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಶೃಂಗೇರಿಯಲ್ಲಿ ಮಠದ ಕುರಿತು ಅಲ್ಲಿನ ಅರ್ಚಕರಿಂದ ಕನ್ನಡದಲ್ಲೇ ಸಂಪೂರ್ಣವಾಗಿ ಮಾಹಿತಿ ಪಡೆದುಕೊಂಡರು.

ತಾಯಿ ಶಾರದಾಂಬೆ ದರ್ಶನ ಪಡೆದು ಶನಿವಾರ ಸಂಜೆ ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
Published On - 9:54 am, Sun, 26 May 24



















