ಕುಮಾರಸ್ವಾಮಿಗೆ ಕೃಷಿ ಖಾತೆ ಮಿಸ್​: ಜೋಶಿ, ಶೋಭಾ, ಸೋಮಣ್ಣಗೆ ಯಾವ ಖಾತೆ? ಇಲ್ಲಿದೆ ವಿವರ

ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿದ್ದಾರೆ. ನಿನ್ನೆ(ಜೂನ್ 09) ಪ್ರಮಾಣವಚನ ಸ್ವೀಕರಿಸಿದರು. ಇದೇ ವೇಳೆ ಕ್ಯಾಬಿನೆಟ್ ಹಾಗೂ ರಾಜ್ಯ ಖಾತೆ ಸಚಿವರೂ ಸಹ ಪ್ರಮಾಣವಚನ ಸ್ವೀಕರಿಸಿದ್ದರು. ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್​ ಸೇರಿದಂತೆ ಐವರು ಮೋದಿ ಸಂಪುಟದಲ್ಲಿದ್ದಾರೆ. ಇದೀಗ ಅವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಎಚ್​ಡಿ ಕುಮಾರಸ್ವಾಮಿಗೆ ಬಯಸಿದ್ದ ಖಾತೆ ಮಿಸ್ ಆಗಿದೆ. ಇದರಿಂದ ಎಚ್​​ಡಿಕೆಗೆ ನಿರಾಸೆಯಾಗಿದೆ. ಇನ್ನು ಕರ್ನಾಟಕದಿಂದ ಕ್ಯಾಬಿನೆಟ್ ಸಚಿವರಾಗಿರುವ ಪ್ರಹ್ಲಾದ್ ಜೋಶಿ, ನಿರ್ಮಾಲಾ ಸೀತಾರಾಮನ್, ರಾಜ್ಯ ಖಾತೆ ಸಚಿವರಾದ ಶೋಭಾ ಕರಂದ್ಲಾಜೆ, ವಿ ಸೋಮಣ್ಣ ಅವರಿಗೆ ಯಾವ-ಯಾವ ಖಾತೆ ನೀಡಲಾಗಿದೆ ಎನ್ನುವ ವಿವರ ಇಲ್ಲಿದೆ.

ರಮೇಶ್ ಬಿ. ಜವಳಗೇರಾ
|

Updated on:Jun 10, 2024 | 8:12 PM

ನರೇಂದ್ರ ಮೋದಿ ಸಂಪುಟದಲ್ಲಿ ಈ ಬಾರಿ ಕರ್ನಾಟಕದಿಂದ ಆಯ್ಕೆಯಾದ ಐವರಿಗೆ ಮಂತ್ರಿ ಸ್ಥಾನ ಸಿಕ್ಕಿದೆ. ಮೂವರಿಗೆ ಕ್ಯಾಬಿನೆಟ್​ ದರ್ಜೆ ಸಚಿವ ಸ್ಥಾನ ಸಿಕ್ಕರೆ, ಇನ್ನುಳಿದ ಇಬ್ಬರಿಗೆ ರಾಜ್ಯ ಖಾತೆ ಸಿಕ್ಕಿದೆ.

1 / 7
ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್, ಧಾರವಾಡದ ಪ್ರಲ್ಹಾದ್ ಜೋಶಿ, ಮಂಡ್ಯದ ಎಚ್​ಡಿ ಕುಮಾರಸ್ವಾಮಿ ಅವರಿಗೆ ಕ್ಯಾಬಿನೆಟ್​ ದರ್ಜೆ ಸಚಿವ ಸ್ಥಾನ ಸಿಕ್ಕಿದ್ದರೆ, ಬೆಂಗಳೂರು ಉತ್ತರ ಕ್ಷೇತ್ರದ ಶೋಭಾ ಕರಂದ್ಲಾಜೆ ಹಾಗೂ ತುಮಕೂರು ಕ್ಷೇತ್ರದ ವಿ ಸೋಮಣ್ಣ ಅವರಿಗೆ ರಾಜ್ಯ ಖಾತೆ ಸಚಿವ ಸ್ಥಾನ ದೊರೆತಿದೆ.

2 / 7
ಮಂಡ್ಯದಿಂದ ಗೆದ್ದು ಸಂಸತ್ ಪ್ರವೇಶ ಮಾಡಿರುವ ಜೆಡಿಎಸ್​-ಬಿಜೆಪಿ ಮೈತ್ರಿ ಸಂಸದ ಎಚ್​ಡಿ ಕುಮಾರಸ್ವಾಮಿ ಅವರು ಮೋದಿ ಸರ್ಕಾರದಲ್ಲಿ ಕ್ಯಾಬಿನೆಟ್​ ದರ್ಜೆ ಸಚಿವರಾಗಿದ್ದಾರೆ. ಆದ್ರೆ, ಕುಮಾರಸ್ವಾಮಿ ಬಯಸಿದ್ದ ಖಾತೆ ಮಿಸ್ ಆಗಿದೆ. ಕೃಷಿ ಖಾತೆ ಮೇಲೆ ಕಣ್ಣಿಟ್ಟಿದ್ದ ಕುಮಾರಸ್ವಾಮಿ ಅವರಿಗೆ  ಉಕ್ಕು ಮತ್ತು ಬೃಹತ್ ಕೈಗಾರಿಕೆ ಖಾತೆ ನೀಡಲಾಗಿದೆ. ಇನ್ನು ಕೃಷಿ ಖಾತೆ ಶಿವರಾಜ್ ಸಿಂಗ್ ಚೌಹಾಣ್ ಪಾಲಾಗಿದೆ.

3 / 7
ಕರ್ನಾಟಕ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರೂ ಸಹ ಎರಡನೇ ಬಾರಿಗೆ ಮೋದಿ ಸಂಪುಟದಲ್ಲಿ ಅವಕಾಶ ಗಿಟ್ಟಿಸಿಕೊಂಡಿದ್ದು, ಈ ಬಾರಿಯೂ ಸಹ ಅವರಿಗೆ ಹಣಕಾಸು ಇಲಾಖೆ ನೀಡಲಾಗಿದೆ. ಕಳೆದ ಬಾರಿ ಸರ್ಕಾರದಲ್ಲೂ ನಿರ್ಮಲಾ ಸೀತಾರಾಮಾನ್ ಅವರು ಹಣಕಾಸು ಇಲಾಖೆ ಖಾತೆ ಸಚಿವೆಯಾಗಿದ್ದರು.

4 / 7
ಕಳೆದ ಬಾರಿ ಸಂಸದೀಯ ವ್ಯವಹಾರ ಖಾತೆ ಸಚಿವರಾಗಿದ್ದ ಪ್ರಹ್ಲಾದ್ ಜೋಶಿ ಅವರಿಗೆ ಈ ಬಾರಿ ಬದಲಾವಣೆ ಮಾಡಲಾಗಿದ್ದು, ಇದೀಗ ಅವರಿಗೆ  ಮಹತ್ವದ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ನೀಡಲಾಗಿದೆ. ಇದರ ಜೊತೆಗೆ ನವೀಕರಿಸಬಹುದಾದ ಇಂಧನ ಇಲಾಖೆಯ ಜವಾಬ್ದಾರಿ ಸಹ ನೀಡಲಾಗಿದೆ.

5 / 7
ಬೆಂಗಳೂರು ಉತ್ತರದಿಂದ ಗೆದ್ದು ಮೋದಿ ಸರ್ಕಾರದಲ್ಲಿ ರಾಜ್ಯ ಖಾತೆ ಸಚಿವೆಯಾಗಿರುವ ಶೋಭಾ ಕರಂದ್ಲಾಜೆ ಅವರಿಗೆ ಈ ಬಾರಿ ಸೂಕ್ಷ್ಮ, ಸಣ್ಣ ,ಮಧ್ಯಮ ಕೈಗಾರಿಕೆ ರಾಜ್ಯ ಖಾತೆ ನೀಡಲಾಗಿದೆ. ಕಳೆದ ಬಾರಿ ಸರ್ಕಾರದಲ್ಲಿ ರಾಜ್ಯ ಕೃಷಿ ಖಾತೆ ನೀಡಲಾಗಿತ್ತು.

6 / 7
ಜಲ ಶಕ್ತಿ ರಾಜ್ಯ ಖಾತೆ ಮತ್ತು ರೈಲ್ವೆ ಸಚಿವಾಲಯದ ರಾಜ್ಯ ಖಾತೆ ನೀಡಲಾಗಿದೆ. ಸೋಮಣ್ಣ ಅವರಗೆ ಎರೆಡೆರಡು ರಾಜ್ಯ ಖಾತೆ ನೀಡುವುದು ವಿಶೇಷವಾಗಿದೆ.

7 / 7

Published On - 7:56 pm, Mon, 10 June 24

Follow us
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು

ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್

ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ

ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್

'ಹರೇ ರಾಮ, ಹರೇ ಕೃಷ್ಣ' ಮಂತ್ರ ಜಪಿಸಿದ ಸಾಂತಾಕ್ಲಾಸ್

ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ

ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ

ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್

ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ: ಸಿಎಂ