‘45’ ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹಾರಿದ ಶಿವಣ್ಣ, ಉಪೇಂದ್ರ, ಅರ್ಜುನ್ ಜನ್ಯ

Updated on: Apr 15, 2025 | 10:42 AM

ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ‘ಕಬ್ಜ’ ಚಿತ್ರದಲ್ಲಿ ಒಟ್ಟಾಗಿ ನಟಿಸಿದ್ದರು. ಈಗ ಇವರು ‘45’ ಚಿತ್ರದಲ್ಲಿ ಮತ್ತೆ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರ್ಪಡೆ ಆಗಿದ್ದಾರೆ. ಸಂಗೀತ ಸಂಯೋಜಕ ಅರ್ಜುನ್ ಜನ್ಯ ಅವರು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.

1 / 5
ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ಅವರದ್ದು ಹಿಟ್ ಕಾಂಬಿನೇಷನ್. ಶಿವರಾಜ್ಕುಮಾರ್ ನಟನೆಯ ‘ಓಂ’ ಚಿತ್ರವನ್ನು ಉಪೇಂದ್ರ ನಿರ್ದೇಶನ ಮಾಡಿದ್ದರು. ಇವರು ಈಗ ‘45’ ಸಿನಿಮಾಗಾಗಿ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರಿಕೊಂಡಿದ್ದಾರೆ ಅನ್ನೋದು ವಿಶೇಷ.

ಶಿವರಾಜ್​ಕುಮಾರ್ ಹಾಗೂ ಉಪೇಂದ್ರ ಅವರದ್ದು ಹಿಟ್ ಕಾಂಬಿನೇಷನ್. ಶಿವರಾಜ್ಕುಮಾರ್ ನಟನೆಯ ‘ಓಂ’ ಚಿತ್ರವನ್ನು ಉಪೇಂದ್ರ ನಿರ್ದೇಶನ ಮಾಡಿದ್ದರು. ಇವರು ಈಗ ‘45’ ಸಿನಿಮಾಗಾಗಿ ಒಂದಾಗಿದ್ದಾರೆ. ಇವರ ಜೊತೆ ರಾಜ್ ಬಿ. ಶೆಟ್ಟಿ ಕೂಡ ಸೇರಿಕೊಂಡಿದ್ದಾರೆ ಅನ್ನೋದು ವಿಶೇಷ.

2 / 5

‘45’ ಚಿತ್ರದ ವಿವಿಧ ಪೋಸ್ಟರ್​ಗಳು ಗಮನ ಸೆಳೆದಿವೆ. ಈಗ ಚಿತ್ರದ ಟೀಸರ್ ಕೂಡ ಬಂದಿದ್ದು, ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸಿನಿಮಾ ರಿಲೀಸ್ ಆಗೋದು ಆಗಸ್ಟ್​ 15ಕ್ಕೆ. ಅದಕ್ಕೂ ಕೆಲವು ತಿಂಗಳು ಮೊದಲೇ ತಂಡದವರು ಸಿನಿಮಾ ಪ್ರಚಾರ ಆರಂಭಿಸಿದ್ದಾರೆ.

3 / 5

ಉಪೇಂದ್ರ, ಶಿವರಾಜ್​ಕುಮಾರ್, ಗೀತಾ ಶಿವರಾಜ್​ಕುಮಾರ್, ಅನುಶ್ರೀ, ನಿರ್ಮಾಪಕ ಎಂ. ರಮೇಶ್ ರೆಡ್ಡಿ 45 ಚಿತ್ರದ ಪ್ರಚಾರಕ್ಕಾಗಿ ಮುಂಬೈಗೆ ಹೊರಟಿದ್ದಾರೆ. ಆ ಬಳಿಕ ಕೇರಳ ಮೊದಲಾದ ಕಡೆಗಳಲ್ಲಿ ತಂಡ ಸಿನಿಮಾ ಪ್ರಚಾರ ಮಾಡಲಿದೆ ಎಂದು ತಿಳಿದು ಬಂದಿದೆ.

4 / 5

ಉಪೇಂದ್ರ, ಶಿವಣ್ಣ ಹಾಗೂ ಮೊದಲಾದವರು ಬೆಂಗಳೂರು ಎಚ್​ಎಎಲ್ ವಿಮಾನ ನಿಲ್ದಾಣದಿಂದ ಖಾಸಗಿ ಜೆಟ್​ನಲ್ಲಿ ಮುಂಬೈಗೆ ಪ್ರಯಾಣ ಬೆಳೆಸಿದಿದೆ. ಇದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ತೆಲುಗು ಹಾಗೂ ಹಿಂದಿ ಭಾಷೆಗಳಲ್ಲೂ ಸಿನಿಮಾ ರಿಲೀಸ್ ಆಗಲಿದೆ.

5 / 5

ಎಂ. ರಮೇಶ್ ರೆಡ್ಡಿ ಅವರು ತಮ್ಮ ‘ಸೂರಜ್ ಪ್ರೊಡಕ್ಷನ್ ’ ಬ್ಯಾನರ್ ಅಡಿಯಲ್ಲಿ ‘45’ ಚಿತ್ರ ನಿರ್ಮಾಣ ಮಾಡಿದ್ದಾರೆ. ಅವರು ಸಿನಿಮಾ ಅದ್ದೂರಿತನಕ್ಕೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳುತ್ತಾ ಇದ್ದಾರೆ. ಚಿತ್ರಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ.

Published On - 10:40 am, Tue, 15 April 25

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us