- TV9 Kannada Kannada News Photos Upendra's Brother son Niranjan Sudhindra Engaged to Dr. Sanjana B Raj
ಉಪೇಂದ್ರ ಅಣ್ಣನ ಮಗ ನಿರಂಜನ್ ನಿಶ್ಚಿತಾರ್ಥ; ಹುಡುಗಿ ಬಗ್ಗೆ ಇಲ್ಲಿದೆ ಮಾಹಿತಿ
ಸ್ಯಾಂಡಲ್‌ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆಮಾಡಿದೆ. ಅವರ ಅಣ್ಣನ ಮಗ, ನಟ ನಿರಂಜನ್ ಸುಧೀಂದ್ರ ಅವರು ವೈದ್ಯೆ ಸಂಜನಾ ಬಿ ರಾಜ್ ಅವರೊಂದಿಗೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಈ ಸಮಾರಂಭದಲ್ಲಿ ಆಪ್ತರು ಮಾತ್ರ ಭಾಗಿಯಾಗಿದ್ದರು. ಸಂಜನಾ ಬಿ ರಾಜ್ ಸ್ತ್ರೀರೋಗ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
Updated on:May 26, 2026 | 7:25 AM

ಸ್ಯಾಂಡಲ್‌ವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರ ಕುಟುಂಬದಲ್ಲಿ ಈಗ ಮದುವೆ ಸಂಭ್ರಮ ಮನೆಮಾಡಿದೆ. ಅವರ ಮನೆಯಲ್ಲಿ ಸದ್ಯ ನಿಶ್ಚಿತಾರ್ಥದ ಸಡಗರ ಜೋರಾಗಿ ನಡೆಯುತ್ತಿದೆ.

ಉಪೇಂದ್ರ ಅವರ ಅಣ್ಣನ ಮಗ, ನಟ ನಿರಂಜನ್ ಸುಧೀಂದ್ರ ಅವರು ತಮ್ಮ ಹೊಸ ಜೀವನದ ಮಹತ್ವದ ಹೆಜ್ಜೆಯನ್ನು ಇಟ್ಟಿದ್ದಾರೆ. ಅವರು ಗೃಹಸ್ಥಾಶ್ರಮಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.

ನಟ ನಿರಂಜನ್ ಸುಧೀಂದ್ರ ಅವರು ಸಂಜನಾ ಬಿ ರಾಜ್ ಎಂಬುವವರ ಜೊತೆ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇಬ್ಬರ ಉಂಗುರ ಬದಲಾವಣೆ ಶಾಸ್ತ್ರ ಶಾಸ್ತ್ರೋಕ್ತವಾಗಿ ನೆರವೇರಿದೆ.

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಈ ಪ್ರಮುಖ ನಿಶ್ಚಿತಾರ್ಥ ಕಾರ್ಯಕ್ರಮ ನಡೆದಿದೆ. ಈ ಸಮಾರಂಭದಲ್ಲಿ ಕೇವಲ ಆಪ್ತರು ಮತ್ತು ಕುಟುಂಬಸ್ಥರು ಭಾಗವಹಿಸಿ ಶುಭ ಹಾರೈಸಿದ್ದಾರೆ.

ನಟ ನಿರಂಜನ್ ಕೈಹಿಡಿಯಲಿರುವ ಸಂಜನಾ ಬಿ ರಾಜ್ ಅವರು ವೃತ್ತಿಯಲ್ಲಿ ವೈದ್ಯೆಯಾಗಿದ್ದಾರೆ. ಅವರು ಪ್ರಸ್ತುತ ಗೈನಕಾಲಜಿಸ್ಟ್ (ಸ್ತ್ರೀರೋಗ ತಜ್ಞೆ) ಆಗಿ ಸೇವೆ ಸಲ್ಲಿಸುತ್ತಿದ್ದಾರೆ.
Published On - 7:00 am, Tue, 26 May 26

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.
Read More



