ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾವೇರಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಮೊದಲ ಬಾರಿಗೆ ಸಂಸತ್ತು ಪ್ರವೇಶಿಸಿದ್ದಾರೆ. ಹಾವೇರಿ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ.
2023ರ ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದ ಮಾಜಿ ಸಚಿವ ಕೆ. ಸುಧಾಕರ್ ಅವರಿಗೆ ಬಿಜೆಪಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿತ್ತು. ಈ ಅವಕಾಶವನ್ನು ಸದುಪಯೋಪಡಿಸಿಕೊಂಡ ಕೆ. ಸುಧಾಕರ್ ಅವರು ಜಯಭೇರಿ ಬಾರಿಸಿದ್ದಾರೆ.
ರಾಜ್ಯ ಬಿಜೆಪಿಯ ಹಿರಿಯ ನಾಯಕ ಮಾಜಿ ಸಚಿವ ಗೋವಿಂದ ಕಾರ್ಜೋಳ ಚಿತ್ರದುರ್ಗ ಲೋಕಸಭಾದಿಂದ ಸ್ಪರ್ಧಿಸಿ ಗೆಲುವಿನ ನಗೆ ಬೀರಿದಿದ್ದಾರೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಸ್ಪರ್ಧಿಸಿ ವಿಶ್ವೇಶ್ವರ ಹೆಗಡೆ ಕಾಗೇರಿ ಗೆಲುವು ಸಾಧಿಸಿದ್ದಾರೆ. ಇವರು ಈ ಹಿಂದೆ ಬಿಜೆಪಿ ಸರ್ಕಾರದಲ್ಲಿ ವಿಧಾನಸಭೇ ಸಭಾಪತಿಯಾಗಿದ್ದರು. ಇದೀಗ ರಾಷ್ಟ್ರ ರಾಜಕಾರಣದತ್ತ ಮುಖ ಮಾಡಿದ್ದಾರೆ.
ಕಳೆದ ವಿಧಾನಸಭೆಯಲ್ಲಿ ಸೋತು ಸುಣ್ಣಾಗಿದ್ದ ಮಾಜಿ ಸಚಿವ ವಿ ಸೋಮಣ್ಣ ಅವರಿಗೆ ಬಿಜೆಪಿ ಲೋಕಸಭಾ ಟಿಕೆಟ್ ನೀಡಿತ್ತು. ವಿ. ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಅಭೂತ ಪೂರ್ವ ಗೆಲುವು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ರಾಜಕೀಯ ಪುನರ್ಜನ್ಮ ಸಿಕ್ಕಿದೆ.
ಬಿಜೆಪಿಯ ಹಿರಿನಾಯಕ ಜಗದೀಶ್ ಶೆಟ್ಟರ ಅವರು ರಾಜ್ಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ಇದೀಗ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಗೆಲ್ಲುವ ಮೂಲಕ ಮೊದಲ ಬಾರಿಗೆ ಸಂಸತ್ತು ಪ್ರವೇಶಿಸಿದ್ದಾರೆ.
ಮೈಸೂರು ಸಂಸ್ಥಾನದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮೊದಲ ಬಾರಿಗೆ ಮೈಸೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ವಿಜಯಪತಾಕೆ ಹಾರಿಸಿದ್ದಾರೆ. ಈ ಮೂಲಕ ರಾಷ್ಟ್ರ ರಾಜಕಾರಣಕ್ಕೆ ಕಾಲಿಟ್ಟಿದ್ದಾರೆ.
ಹೃದಯವಂತ ವೈದ್ಯ ಎಂದು ಹೆಸರಿನಿಂದ ಖ್ಯಾತಿ ಪಡೆದಿರುವ ಡಾ. ಸಿಎನ್ ಮಂಜುನಾಥ್ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿಕೆ ಸುರೇಶ್ ಅವರನ್ನು ಸೋಲಿಸಿ ವಿಜಯಶಾಲಿಯಾಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ವಿರುದ್ಧ ಬಿಜೆಪಿಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಬರೋಬ್ಬರಿ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಳೆದ ಮೂರ್ನಾಲ್ಕು ಅವಧಿಗಳಿಂದಲೂ ಈ ಕ್ಷೇತ್ರದಲ್ಲಿ ಬಿಜೆಪಿಯೇ ಗೆದ್ದು ಬೀಗಿದೆ.
ಬಿಜೆಪಿ ಅಭ್ಯರ್ಥಿ ಹಾಲಿ ಸಂಸದ ರಾಜಾ ಅಮರೇಶ್ವರ ನಾಯಕ್ಗೆ ಸೋಲಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ನಿವೃತ್ತ ಐಎಎಸ್ ಅಧಿಕಾರಿ ಜಿ ಕುಮಾರ್ ನಾಯ್ಕ್ 75,930 ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು ತಮ್ಮ ತವರು ಕ್ಷೇತ್ರವಾದ ಕಲಬುರಗಿ ಲೋಕಸಭಾ ಅಖಾಡಿದಲ್ಲಿ ಅಳಿಯ ರಾಧಾಕೃಷ್ಣ ದೊಡ್ಡಮನಿಯವರನ್ನು ಕಣಕ್ಕೆ ಇಳಿಸಿ, ಗೆಲ್ಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಿಳಾ ಮತದಾರರೇ ನಿರ್ಣಾಯಕವಾಗಿರುವ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿಯೇ ವಿಜಯಶಾಲಿಯಾಗಿದ್ದಾರೆ. ಶಾಮನೂರು ಕುಟುಂಬದ ಸೊಸೆ, ಸಚಿವ ಎಸ್ಎಸ್ ಮಲ್ಲಿಕಾರ್ಜುನ್ ಪತ್ನಿ ಡಾ. ಪ್ರಭಾ ಮಲ್ಲಿಕಾರ್ಜುನ್ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್‌ನಿಂದ ಸಮಾಜ ಕಲ್ಯಾಣ ಖಾತೆ ಸಚಿವ ಎಚ್.ಸಿ. ಮಹದೇವಪ್ಪ ಅವರ ಮಗ ಸುನೀಲ್ ಬೋಸ್ ಸ್ಪರ್ಧಿಸಿ ಗೆಲುವು ಸಾಧಿಸಿದ್ದಾರೆ.
ಸಚಿವ ಸತೀಶ್ ಜಾರಕಿಹೊಳಿ ಪುತ್ತಿ, ಪ್ರಿಯಾಂಕಾ ಜಾರಿಕಿಹೊಳಿ ತಾವು ಸ್ಪರ್ಧಿಸಿದ ಮೊದಲ ಚುನಾವಣೆಯಲ್ಲೇ ಗೆದ್ದಿದ್ದಾರೆ. ಹೌದು ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಗೆಲ್ಲುವ ಮೂಲಕ ಚಿಕ್ಕೋಡಿಯನ್ನು ಮತ್ತೆ ಕಾಂಗ್ರೆಸ್ ತೆಕ್ಕೆಗೆ ಹಾಕಿದ್ದಾರೆ.
ಸಚಿವ ಈಶ್ವರ್ ಖಂಡ್ರೆ ಪುತ್ರ ಸಾಗರ ಖಂಡ್ರೆ ಬೀದರ್ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿಗೆ ಸ್ಪರ್ಧಿಸಿ ಗೆಲವು ಸಾಧಿಸಿದ್ದಾರೆ. ಈ ಮೂಲಕ ಕರ್ನಾಟಕದ ಅತ್ಯಂತ ಕಿರಿಯ ಸಂಸದರಾಗಿ ಸಂಸತ್ತು ಪ್ರವೇಶಿಸಿದ್ದಾರೆ.
Published On - 4:51 pm, Tue, 4 June 24