ವಿಧಾನಸಭೆಯಲ್ಲಿ ಸೋತು ಲೋಕಸಭೆಯಲ್ಲಿ ಗೆದ್ದು ರಾಜಕೀಯ ಪುನರ್ಜನ್ಮ ಪಡೆದ ರಾಜ್ಯದ ಬಿಜೆಪಿ ನಾಯಕರು

ತೀವ್ರ ಕುತೂಹಲ ಮೂಡಿಸಿದ್ದ ಲೋಕಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಕಳೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿ ಸೋಲುಕಂಡಿರುವ ನಾಯಕರು ಇದೀಗ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದಾರೆ. ಈ ಮೂಲಕ ತಮ್ಮ ರಾಜ್ಯದ ಐವರು ಬಿಜೆಪಿ ನಾಯಕರು ರಾಜಕೀಯವಾಗಿ ಪುನರ್ಜನ್ಮ ಪಡೆದುಕೊಂಡಿದ್ದಾರೆ. ಹಾಗಾದ್ರೆ, ವಿಧಾನಸಭೆ ಚುನಾವಣೆಯಲ್ಲಿ ಸೋತು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಿಜೆಪಿ ನಾಯಕರು ಯಾರ್ಯಾರು ಎನ್ನುವ ವಿವರ ಇಲ್ಲಿದೆ.

|

Updated on:Jun 04, 2024 | 3:38 PM

ಇನ್ನು ಜಗದೀಶ್ ಶೆಟ್ಟರ್ ಗೆಲವು ಅವರ ರಾಜಕೀಯ ಜೀವನಕ್ಕೆ ತಿರುವು ಕೊಟ್ಟಿದೆ. ಹೌದು...ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್​ ಬಿಜೆಪಿಗೆ ಶಾಕ್ ಕೊಟ್ಟಿದ್ದರು. ಬಳಿಕ ಬದಲಾದ ರಾಜಕೀಯ ವಿದ್ಯಮಾನಗಳಿಂದ ಕಾಂಗ್ರೆಸ್​ ತೊರೆದು ಬಿಜೆಪಿಗೆ ವಾಪಸ್​ ಆಗಿದ್ದ ಶೆಟ್ಟರ್​ಗೆ ಬೆಳಗಾವಿ ಲೋಕಸಭಾ ಟಿಕೆಟ್ ನೀಡಲಾಗಿತ್ತು, ಇದೀಗ ಶೆಟ್ಟರ್ (ಪಡೆದ ಒಟ್ಟು ಮತ  7,56,471), ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಪುತ್ರ ಮೃಣಾಲ್ ಹೆಬ್ಬಾಳ್ಕರ್​ (ಪಡೆದ ಒಟ್ಟು ಮತ 5,80,897) ವಿರುದ್ಧ ಗೆದ್ದು ರಾಜಕೀಯ ನೆಲೆ ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. 1,75,574 ಮತಗಳಿಂದ ಗೆದ್ದಿದ್ದಾರೆ.

1 / 5
ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಸೋಲುಕಂಡಿದ್ದ ಡಾ ಕೆ ಸುಧಾಕರ್ ಇದೀಗ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬೀಗಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಡಾ ಕೆ ಸುಧಾಕರ್,  ಕಾಂಗ್ರೆಸ್​​ನ ರಕ್ಷಾ ರಾಮಯ್ಯ ಅವರನ್ನು ಮಣಿಸಿ ಸಂಸತ್​ ಪ್ರವೇಶಿಸಿದ್ದಾರೆ. ಈ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಸೋತು ಲೋಕಸಭಾ ಎಲೆಕ್ಷನ್​ನಲ್ಲಿ ಗೆದ್ದು ರಾಜಕೀಯ ಪುನರ್ಜನ್ಮ ಪಡೆದಿದ್ದಾರೆ.

2 / 5
ಹಿರಿಯ ರಾಜಕಾರಣಿ ವಿ ಸೋಮಣ್ಣ ಅವರ ರಾಜಕೀಯ ಜೀವನ ಇನ್ನೇನು ಮುಗಿತು ಎನ್ನುವಷ್ಟರಲ್ಲೇ ಲೋಕಸಭೆ ಚುನಾವಣೆ ಅವರ ಕೈ ಹಿಡಿದಿದೆ. ಹೌದು...ಈ ಹಿಂದೆ ಹಾಲಿ ಸಚಿವರಾಗಿದ್ದ ಸೋಮಣ್ಣ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ವಪಕ್ಷ ಬಿಟ್ಟು ಸಿದ್ದರಾಮಯ್ಯ ವಿರುದ್ಧ ವರುಣಾ ಹಾಗೂ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಕಂಡಿದ್ದರು. ಇದರೊಂದಿಗೆ ಸೋಮಣ್ಣ ರಾಜಕೀಯ ಅಂತ್ಯವಾಯ್ತು ಎನ್ನುವಾಗಲೇ ಹೈಕಮಾಂಡ್​ ಲೋಕಸಭಾ ಟಿಕೆಟ್ ನೀಡಿ ಕಾಪಾಡಿದೆ. ಈ ಮೂಲಕ ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದಿಮದ ಗೆದ್ದು ಸಂಸತ್ ಪ್ರವೇಶ ಮಾಡಿದ್ದಾರೆ.

3 / 5
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಶಿರಸಿ ಕ್ಷೇತ್ರದಿಂದ ಸೋಲುಕಂಡಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಬಾರಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಗೆಲುವು ಕಂಡಿದ್ದಾರೆ.  ಬಿಜೆಪಿಯ ಭದ್ರಕೋಟೆಯಾದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ನ ಡಾ ಅಂಜಲಿ ನಿಂಬಾಳ್ಕರ್​ ಅವರನ್ನು ಮಣಿಸಿ ಸಂಸತ್​ಗೆ ಪ್ರವೇಶಿಸಿದ್ದಾರೆ. ಈ ಮೂಲಕ ವಿಧಾನಸಭೆಯಲ್ಲಿ ಸೋಲುಕಂಡಿದ್ದ ಕಾಗೇರಿ ಲೋಕಸಭಾ ಚುನಾವಣೆಯಲ್ಲಿ ಗೆದ್ದು ರಾಜಕೀಯವಾಗಿ ಪುಟಿದೆದ್ದಿದ್ದಾರೆ.

4 / 5
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಾಗಲಕೋಟೆ ಜಿಲ್ಲೆ ಮುಧೋಳ್ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಕಂಡಿದ್ದ ಗೋವಿಂದ್  ಕಾರಜೋಳ ಇದೀಗ ಸಂಸತ್​ಗೆ  ಪ್ರವೇಶ ಮಾಡಿದ್ದಾರೆ. ಬಾಗಲಕೋಟೆಯಿಂದ ಚಿತ್ರದುರ್ಗಕ್ಕೆ ವಲಸೆ ಹೋಗಿ ಗೆಲುವುಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಎನ್ ಚಂದ್ರಪ್ಪ ( ಒಟ್ಟು 636332 ) ವಿರುದ್ಧ ಬಿಜೆಪಿಯ ಗೋವಿಂದ ಕಾರಜೋಳ(ಪಡೆದ ಒಟ್ಟು ಮತ  684290)  ಅವರು  47958 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ. ಈ ಮೂಲಕ ರಾಜಕೀಯ ಪುನರ್ಜನ್ಮ ಪಡೆದುಕೊಂಡಿದ್ದಾರೆ.

5 / 5

Published On - 3:35 pm, Tue, 4 June 24

Follow us
MLC 2024: ಅದ್ಭುತ... ಅತ್ಯದ್ಭುತ ಕ್ಯಾಚ್ ಹಿಡಿದ ಕೋರಿ ಅ್ಯಂಡರ್ಸನ್

ಜಿಯೋ ಏರ್​ಫೈಬರ್ ಗ್ರಾಹಕರಿಗೆ ಶೇ 30 ಡಿಸ್ಕೌಂಟ್ ಆಫರ್

ಮೊದಲ ಮಳೆ,ಕತ್ತೆಗಳಿಗೆ ಗುಲಾಬ್​​​ ಜಾಮೂನು ತಿನಿಸಿ ಸಂಭ್ರಮಿಸಿದ ಗ್ರಾಮಸ್ಥರು

ಬೂಜು ಕುಂಬಳಕಾಯಿ ಆರೋಗ್ಯ ಪ್ರಯೋಜನಗಳು ತಿಳಿದರೆ ಇಂದಿನಿಂದ ಬಳಸುತ್ತೀರಿ!

ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್

Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?

Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ

Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ

ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ