ವೈಕುಂಠ ಏಕಾದಶಿ: ನಾಡಿನ ತಿಮ್ಮಪ್ಪನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಫೋಟೋಸ್​​ ನೋಡಿ

| Updated By: Digi Tech Desk

Updated on: Jan 10, 2025 | 9:39 AM

ವೈಕುಂಠ ಏಕಾದಶಿ, ಹಿಂದೂ ಧರ್ಮದ ಪವಿತ್ರ ದಿನ, ಮಾರ್ಗಶಿರ ಮಾಸದ ಶುಕ್ಲ ಪಕ್ಷದಲ್ಲಿ ಆಚರಿಸಲಾಗುತ್ತದೆ. ಈ ದಿನ ಶ್ರೀ ವಿಷ್ಣುವಿಗೆ ಸಮರ್ಪಿತವಾಗಿದೆ. ರಾಜ್ಯದ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳು, ಹವನಗಳು ನಡೆಯುತ್ತವೆ. ಲಕ್ಷಾಂತರ ಭಕ್ತರು ದೇವರ ದರ್ಶನ ಪಡೆಯಲು ಸಾಲುಗಟ್ಟಿ ನಿಂತಿದ್ದಾರೆ. ವೈಕುಂಠ ದ್ವಾರದ ಮೂಲಕ ದೇವರ ದರ್ಶನ ಪಡೆಯುವುದು ವಿಶೇಷವಾಗಿದೆ.

1 / 5
ವೈಕುಂಠ ಏಕಾದಶಿ, ಹಿಂದೂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದು. ಏಕಾದಶಿಯು ತಿಂಗಳಿನಲ್ಲಿ ಎರಡು ಬಾರಿ ಬರುತ್ತದೆ. ಆದರೆ ಮಾರ್ಗಶಿರ ಮಾಸದಲ್ಲಿ (ಡಿಸೆಂಬರ್-ಜನವರಿ), ಶುಕ್ಲ ಪಕ್ಷದಲ್ಲಿ ಬರುವ ಏಕಾದಶಿಯು ವಿಶೇಷವಾಗಿದ್ದು ಅದನ್ನು ವೈಕುಂಠ ಏಕಾದಶಿ ಎನ್ನುತ್ತಾರೆ.ಈ ದಿನ ಶ್ರೀವಿಷ್ಣುವಿಗೆ ಸಮರ್ಪಿತವಾಗಿದೆ.

2 / 5
ವೈಕುಂಠ ಏಕಾದಶಿ ನಿಮಿತ್ತ ವಿಷ್ಣುವಿನ ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹವನ, ಯಜ್ಞ ಮತ್ತು ಭಜನೆಗಳು ನಡೆಯುತ್ತಿವೆ. ನಸುಕಿನ ಜಾವದಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಗಳಿಗೆ ತೆರಳುತ್ತಿದ್ದಾರೆ. ಬೆಂಗಳೂರಿನ ತಿರುಮಲಗಿರಿ ಲಕ್ಷ್ಮಿ ವೆಂಕಟೇಶ್ವರಸ್ವಾಮಿ ದೇವಸ್ಥಾನ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ತೆರಳುತ್ತಿದ್ದು, ಭಗವಂತನ ದರ್ಶನ ಪಡೆಯುತ್ತಿದ್ದಾರೆ.

3 / 5
ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಚಿಕ್ಕತಿರುಪತಿ ಶ್ರೀ ಪ್ರಸನ್ನ ವೆಂಕಟರಮಣಸ್ವಾಮಿ ದೇವಾಲಯಕ್ಕೆ ಮುಂಜಾನೆಯಿಂದಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಕೋಲಾರ, ಬೆಂಗಳೂರು, ಆಂದ್ರ, ತಮಿಳುನಾಡು ಸೇರಿದಂತೆ ಹಲವೆಡೆಯಿಂದ ಭಕ್ತರು ಬರುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತು ವೈಕುಂಠ ದ್ವಾರ ಪ್ರವೇಶ ಮಾಡಿ ದೇವರ ದರ್ಶನ ಪಡೆದರು. ಎಲ್ಲೆಲ್ಲೂ ಗೋವಿಂದಾ ಗೋವಿಂದಾ ಅನ್ನೋ ನಾಮ ಸ್ಮರಣೆ ಕೇಳುತ್ತಿದೆ.

4 / 5
ಮೈಸೂರಿನ ಗಣಪತಿ ಆಶ್ರಮದಲ್ಲಿ ದತ್ತ ವೆಂಕಟೇಶ್ವರ ಉತ್ಸವಮೂರ್ತಿಗೆ ಆಶ್ರಮದ ಕಿರಿಯ ಸ್ವಾಮೀಜಿ ವಿಜಯಾನಂದ ತೀರ್ಥರು ಪೂಜೆ ಸಲ್ಲಿಸಿದರು. ವೈಕುಂಠ ದ್ವಾರದ ಮೂಲಕ ದತ್ತ ಶ್ರೀನಿವಾಸನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಮೈಸೂರಿನ ಒಂಟಿಕೊಪ್ಪಲು ಬಡಾವಣೆಯಲ್ಲಿರುವ ಲಕ್ಷ್ಮೀ ವೆಂಕಟೇಶ್ವರ ದೇವಸ್ಥಾನದಲ್ಲೂ ವಿಶೇಷ ಪೂಜೆಗಳು ನಡೆಯುತ್ತಿವೆ.

5 / 5
ಚಾಮರಾಜಪೇಟೆಯ ಕೋಟೆ ವೆಂಕಟರಮಣ ದೇವಾಲಯಕ್ಕೆ ನಸುಕಿನ ಜಾವ 4 ಗಂಟೆಯಿಂದಲೇ ಅಪಾರ ಸಂಖ್ಯೆಯಲ್ಲಿ ಭಕ್ತರು ಭೇಟಿ ನೀಡುತ್ತಿದ್ದಾರೆ. ಸರತಿ ಸಾಲಿನಲ್ಲಿ ನಿಂತು ಭಕ್ತರು ಭಗವಂತನ ದರ್ಶನ ಪಡೆಯುತ್ತಿದ್ದಾರೆ.

Published On - 9:26 am, Fri, 10 January 25