ವೈಷ್ಣವಿ ಗೌಡಗೆ ಈ ಮೊದಲು ಬಂದಿತ್ತು 300 ಮದುವೆ ಆಫರ್; ಅನುಕೂಲ್​​ನ ಒಪ್ಪಿದ್ದು ಹೇಗೆ?

Updated on: Apr 15, 2025 | 11:06 AM

ವೈಷ್ಣವಿ ಗೌಡ ಅವರು 300ಕ್ಕೂ ಹೆಚ್ಚು ಮದುವೆ ಪ್ರಸ್ತಾಪಗಳನ್ನು ಪಡೆದ ನಂತರ ಉದ್ಯಮಿ ಅನುಕೂಲ್​ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಬಿಗ್ ಬಾಸ್ ರಿಯಾಲಿಟಿ ಶೋ ನಂತರ ಅವರಿಗೆ ಅಪಾರ ಮದುವೆ ಪ್ರಸ್ತಾಪಗಳು ಬಂದಿದ್ದವು ಎಂದು ವರದಿಯಾಗಿದೆ. ಆದರೆ, ತಮಗೆ ಹೊಂದುವ ವ್ಯಕ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಅವರು ಕಾಯುತ್ತಿದ್ದರು ಎಂದು ತಿಳಿದುಬಂದಿದೆ.

1 / 6
ಕಿರುತೆರೆ ನಟಿ ವೈಷ್ಣವಿ ಗೌಡ ಅವರು ಕೊನೆಗೂ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅನುಕೂಲ್ ಹೆಸರಿನ ಉದ್ಯಮಿ ಜೊತೆ ಅವರ ಎಂಗೇಜ್​ಮೆಂಟ್ ನಡೆದಿದೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

ಕಿರುತೆರೆ ನಟಿ ವೈಷ್ಣವಿ ಗೌಡ ಅವರು ಕೊನೆಗೂ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಅನುಕೂಲ್ ಹೆಸರಿನ ಉದ್ಯಮಿ ಜೊತೆ ಅವರ ಎಂಗೇಜ್​ಮೆಂಟ್ ನಡೆದಿದೆ. ಈ ಸಂದರ್ಭದ ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

2 / 6

ವೈಷ್ಣವಿ ಗೌಡ ಅವರ ಎಂಗೇಜ್​ಮೆಂಟ್ ಗುಟ್ಟಾಗಿ ನಡೆದಿದೆ. ಅವರು ‘ಸೀತಾ ರಾಮ’ ಧಾರಾವಾಹಿ ಕೆಲಸಗಳ ಮಧ್ಯೆ ಬ್ರೇಕ್ ಪಡೆದು ಅದ್ದೂರಿಯಾಗಿ ತಮ್ಮ ವಿಶೇಷ ದಿನವನ್ನು ಆಚರಿಸಿದ್ದಾರೆ. ವೈಷ್ಣವಿ ಹಾಗೂ ಅನುಕೂಲ್​​ಗೆ ಎಲ್ಲ ಕಡೆಗಳಿಂದ ಶುಭಾಶಯ ಬರುತ್ತಿದೆ.

3 / 6

ವೈಷ್ಣವಿ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಮದುವೆ ಆಗುತ್ತಿರುವ ಅನುಕೂಲ್​ ಜೊತೆ ನಿಂತು ಅವರು ಡಿಫರೆಂಟ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಗಳು ಗಮನ ಸೆಳೆದಿವೆ. ಇದಕ್ಕೆ ಭರ್ಜರಿ ಲೈಕ್ಸ್ ಕೂಡ ಸಿಕ್ಕಿದೆ.

4 / 6

ವೈಷ್ಣವಿ ಗೌಡ ಅವರು ಬಿಗ್ ಬಾಸ್​ ಸೀಸನ್ 8ಕ್ಕೆ ಎಂಟ್ರಿ ಕೊಟ್ಟಿದ್ದರು. ಬಿಗ್ ಬಾಸ್​ನಲ್ಲಿ ಅವರ ವ್ಯಕ್ತಿತ್ವ ಎಲ್ಲರಿಗೂ ಇಷ್ಟ ಆಗಿತ್ತು. ಕೊವಿಡ್ ಬಂದ ಕಾರಣ ಬಿಗ್ ಬಾಸ್​ನ ಅರ್ಧಕ್ಕೆ ನಿಲ್ಲಿಸಿ ಆ ಬಳಿಕ ಶುರು ಮಾಡಲಾಯಿತು. ಮನೆಗೆ ಹೋಗಿ ಬಂದ ಗ್ಯಾಪ್​ನಲ್ಲಿ ವೈಷ್ಣವಿಗೆ ಭರ್ಜರಿ ಮದುವೆ ಆಫರ್​ಗಳು ಬಂದಿದ್ದವು.  

5 / 6

‘43 ದಿನ ಹೊರಗಡೆ ಇದ್ರಿ, ಅಂದಾಜು ಎಷ್ಟು ಪ್ರಪೋಸಲ್ ಬಂದಿರಬಹುದು’ ಎಂದು ವೇದಿಕೆ ಮೇಲೆ ಸುದೀಪ್ ಕೇಳಿದ್ದರು. ಆಗ ವೈಷ್ಣವಿ, ‘200ರಿಂದ 300 ಬಂದಿರಬಹುದು. ಒಂದನ್ನೂ ನೋಡಬೇಕು ಅಂತಲೇ ಅನ್ನಿಸಲಿಲ್ಲ ಸಾರ್’ ಎಂದಿದ್ದರು ವೈಷ್ಣವಿ.

6 / 6

ಈ ವೇಳೆ ವೈಷ್ಣವಿ ಮತ್ತೂ ಒಂದು ಮಾತು ಹೇಳಿದ್ದರು. ‘ನಾನು ಯಾವಾಗಲೂ ಮನಸ್ಸಿನ ಮಾತು ಕೇಳುತ್ತೇನೆ. ಸೋ ಯಾವುದು ಕನೆಕ್ಟ್ ಆಗಲೇ ಇಲ್ಲ’ ಎಂದಿದ್ದರು.  ಈಗ ಅವರ ವೈಬ್​ಗೆ ವೈಷ್ಣವಿ ಕನೆಕ್ಟ್ ಆಗಿದ್ದಾರೆ ಎನ್ನಲಾಗಿದೆ. ಹೀಗಾಗಿ, ಈ ಅವರು ಮದುವೆ ಆಗಲು ಒಪ್ಪಿದ್ದಾರೆ.

Published On - 8:44 am, Tue, 15 April 25

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us