ಇಂದು ಮಹಾನ್ ಋಷಿ ಕವಿ ಮಹರ್ಷಿ ವಾಲ್ಮೀಕಿಯವರ ಜನ್ಮದಿನವಾಗಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ ವಾಲ್ಮೀಕಿ ಜಯಂತಿಯನ್ನು ವಾರ್ಷಿಕವಾಗಿ ಹುಣ್ಣಿಮೆಯ ರಾತ್ರಿ ಅಥವಾ ಅಶ್ವಿನ್ ತಿಂಗಳ ಪೂರ್ಣಿಮೆಯಂದು ಆಚರಿಸಲಾಗುತ್ತದೆ. ಈ ವರ್ಷ ಅಕ್ಟೋಬರ್ 17 ರಂದು ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ. ವಾಲ್ಮೀಕಿಯು ಗುರುವಾಗಿ ಹಲವಾರು ಕವಿಗಳು ಹಾಗೂ ಸಾಹಿತಿಗಳಿಗೆ ಸ್ಫೂರ್ತಿಯಾಗಿದ್ದಾರೆ. ಅವರ ಒಂದೊಂದು ನುಡಿಮುತ್ತುಗಳು ಜೀವನ ಸಂದೇಶವನ್ನು ಸಾರುತ್ತದೆ. ಹಾಗಾದ್ರೆ ವಾಲ್ಮೀಕಿಯವರ ಸ್ಫೂರ್ತಿದಾಯಕ ನುಡಿಮುತ್ತುಗಳು ಇಲ್ಲಿವೆ.