ಇನ್ಮುಂದೆ ಬೆಂಗಳೂರಿನಿಂದ ಮಂಗಳೂರಿಗೆ ಕೇವಲ 5 ಗಂಟೆಗಳಲ್ಲಿ ತಲುಪಬಹುದು! ಅದು ಹೇಗೆ ಗೊತ್ತಾ?
ದಕ್ಷಿಣ ಕನ್ನಡ ಜನರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ! ಬಹುನಿರೀಕ್ಷಿತ ವಂದೇ ಭಾರತ್ ರೈಲು ಬೆಂಗಳೂರು ಮತ್ತು ಮಂಗಳೂರು ನಡುವೆ ಶೀಘ್ರದಲ್ಲೇ ಸಂಚರಿಸಲಿದೆ. ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದ ವಿದ್ಯುದ್ದೀಕರಣ ಪೂರ್ಣಗೊಂಡ ನಂತರ ಈ ಅರೆ-ಹೈ-ಸ್ಪೀಡ್ ರೈಲು ಸೇವೆ ಆರಂಭವಾಗಲಿದ್ದು, 9-10 ಗಂಟೆಗಳ ಪ್ರಯಾಣವನ್ನು 5 ಗಂಟೆಗೆ ಇಳಿಸಲಿದೆ. ಇದು ಕರಾವಳಿ, ವ್ಯಾಪಾರ ಮತ್ತು ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿದೆ.
Updated on:Jan 01, 2026 | 12:08 PM

ದಕ್ಷಿಣ ಕನ್ನಡ ಜಿಲ್ಲೆಯ ಜನರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಹುನಿರೀಕ್ಷಿತ ವಂದೇ ಭಾರತ್ ರೈಲು ಬೆಂಗಳೂರು ಮತ್ತು ಮಂಗಳೂರು ಸಂಚಾರಿಸಲಿದೆ. ಈ ಮೂಲಕ ಕರಾವಳಿ ಪ್ರದೇಶಗಳ ಪುಣ್ಯಕ್ಷೇತ್ರಕ್ಕೆ ಹೋಗುವವರಿಗೆ ಇದು ಒಳ್ಳೆಯ ಪ್ರಯಾಣ ನೀಡಲಿದೆ.

ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆಯ ನಡುವಿನ 55 ಕಿ.ಮೀ ಘಾಟ್ ವಿಭಾಗದಲ್ಲಿ ವಿದ್ಯುದ್ದೀಕರಣ ಪೂರ್ಣಗೊಂಡ ನಂತರ ಯೋಜನೆಗೆ ಚಾಲನೆ ನೀಡಲಾಗುವುದು. ಈಗಾಗಲೇ ಈ ವಿದ್ಯುದ್ದೀಕರಣ ಕಾಮಗಾರಿ ಪೂರ್ಣಗೊಳ್ಳುತ್ತ ಬಂದಿದೆ. ಅದಷ್ಟು ಬೇಗ ಈ ರೈಲು ಸಂಚಾರ ಮಾಡಲಿದೆ ಎಂದು ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

ಸೆಮಿ ಹೈ-ಸ್ಪೀಡ್ ರೈಲು ಸಂಪೂರ್ಣವಾಗಿ ವಿದ್ಯುತ್ ಶಕ್ತಿಯಿಂದ ಚಲಿಸುವ ಕಾರಣ, ಇದು ಪ್ರಯಾಣದ ವೇಗವನ್ನು ಹೆಚ್ಚಿಸುತ್ತದೆ. ಜತೆಗೆ, ಸ್ವಚ್ಛವಾದ ಗಾಳಿ, ಮಾಲಿನ್ಯರಹಿತ ಪರಿಸರವನ್ನು ಉಂಟು ಮಾಡುತ್ತದೆ. ಜತೆಗೆ ಇಂಧನ ಬಳಕೆಯನ್ನು ಕಡಿಮೆ ಮಾಡುತ್ತದೆ.

ಮಂಗಳೂರು ಪ್ರದೇಶದ ಜನರ ಬಹುದಿನಗಳ ಬೇಡಿಕೆಯಾಗಿರುವ ವಂದೇ ಭಾರತ್ ರೈಲು ಓಡಾಟ ಆರಂಭಿಸುವ ಸಮಯ ಹತ್ತಿರವಾಗಿದೆ ಎಂದು ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.

ಸಾಮಾನ್ಯ ರೈಲುಗಳು ಈ ಮಾರ್ಗವನ್ನು ಕ್ರಮಿಸಲು ಸರಿಸುಮಾರು 9 ರಿಂದ 10 ಗಂಟೆಗಳನ್ನು ತೆಗೆದುಕೊಳ್ಳುತ್ತದೆ, ಹಿಂದೂಸ್ತಾನ್ ಟೈಮ್ಸ್ ವರದಿಯ ಪ್ರಕಾರ ವಂದೇ ಭಾರತ್ ರೈಲು ಅದನ್ನು ಕೇವಲ 5 ಗಂಟೆಗಳವರೆಗೆ ಕಡಿಮೆ ಮಾಡಬಹುದು, ಇದು ವ್ಯಾಪಾರ ಪ್ರಯಾಣಿಕರು ಮತ್ತು ರಜಾದಿನಗಳಲ್ಲಿ ಈ ರೈಲು ಹೆಚ್ಚು ಸಹಾಯವಾಗಲಿದೆ.

ಸೆಮಿ ಹೈ-ಸ್ಪೀಡ್ ಸೇವೆಯು ದೈನಂದಿನ ಪ್ರಯಾಣಿಕರಿಗೆ ಹೆಚ್ಚು ಪ್ರಯೋಜನವನ್ನು ನೀಡುತ್ತದೆ, ಪ್ರವಾಸೋದ್ಯಮ, ವ್ಯಾಪಾರ ಪ್ರವಾಸಗಳಿಗೆ ಇದೊಂದು ಉತ್ತಮ ಆಯ್ಕೆಯಾಗಿರುತ್ತದೆ

ಬೆಂಗಳೂರು, ತುಮಕೂರು, ಹಾಸನ ಮತ್ತು ಮಂಗಳೂರು ಎಂಬ ನಾಲ್ಕು ಜಿಲ್ಲೆಗಳಿಗೆ ಇದು ಅನುಕೂಲವಾಗಲಿದೆ. ಇದಕ್ಕೆ 50,000 ಕೋಟಿ ರೂ. ಬಜೆಟ್ ನೀಡಲಾಗಿದೆ
Published On - 11:32 am, Thu, 1 January 26




