ಮೊನ್ನೆ ರಶ್ಮಿಕಾ, ನಿನ್ನೆ ಸಮಂತಾ; ದಕ್ಷಿಣ ಭಾರತದ ಬೆಡಗಿಯರ ಜತೆ ವರುಣ್ ಧವನ್ ಸುತ್ತಾಟ
ವರುಣ್ ಧವನ್ಗೆ ಬಾಲಿವುಡ್ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ‘ಸ್ಟುಡೆಂಟ್ ಆಫ್ ದಿ ಇಯರ್’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಅವರು ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ಈಗ ಅವರು ದಕ್ಷಿಣ ಭಾರತದ ನಟಿಯರ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.
Updated on: Mar 12, 2022 | 9:08 AM

ವರುಣ್ ಧವನ್ಗೆ ಬಾಲಿವುಡ್ನಲ್ಲಿ ದೊಡ್ಡ ಮಟ್ಟದ ಬೇಡಿಕೆ ಇದೆ. ‘ಸ್ಟುಡೆಂಟ್ ಆಫ್ ದಿ ಇಯರ್’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ಅವರು ಹಲವು ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿದ್ದಾರೆ. ಈಗ ಅವರು ದಕ್ಷಿಣ ಭಾರತದ ನಟಿಯರ ಜತೆ ಕಾಣಿಸಿಕೊಳ್ಳುತ್ತಿದ್ದಾರೆ.

ಇತ್ತೀಚೆಗೆ ವರುಣ್ ಧವನ್ ಅವರು ನಟಿ ರಶ್ಮಿಕಾ ಮಂದಣ್ಣ ಜತೆ ಕಾಣಿಸಿಕೊಂಡಿದ್ದರು. ‘ಬೀಸ್ಟ್’ ಸಿನಿಮಾದ ಸೂಪರ್ ಹಿಟ್ ಹಾಡಿಗೆ ಸಮುದ್ರ ತೀರದಲ್ಲಿ ಇಬ್ಬರೂ ಹೆಜ್ಜೆ ಹಾಕಿದ್ದರು. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ. ಈ ವಿಡಿಯೋ ನೋಡಿ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

ಈಗ ಸಮಂತಾ ಜತೆ ವರುಣ್ ಧವನ್ ಕಾಣಿಸಿಕೊಂಡಿದ್ದಾರೆ. ಮುಂಬೈನಲ್ಲಿ ವರುಣ್ ಹಾಗೂ ಸಮಂತಾ ಒಟ್ಟಾಗಿ ತಿರುಗಾಟ ನಡೆಸಿದ್ದಾರೆ. ಈ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ವರುಣ್ ಹಾಗೂ ರಶ್ಮಿಕಾ ಒಟ್ಟಾಗಿ ಕಾಣಿಸಿಕೊಂಡಿದ್ದೇಕೆ ಎನ್ನುವ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಜಾಹೀರಾತಿನ ಶೂಟಿಂಗ್ಗಾಗಿ ಇಬ್ಬರೂ ಸೇರಿದ್ದಾರೆ ಎನ್ನಲಾಗುತ್ತಿದೆ. ಆದರೆ, ಈ ಬಗ್ಗೆ ಯಾರಿಂದಲೂ ಸ್ಪಷ್ಟನೆ ಸಿಕ್ಕಿಲ್ಲ.

ವರುಣ್ ಹಾಗೂ ಸಮಂತಾ ಒಂದು ಕಡೆ ಸೇರಿದ್ದಕ್ಕೂ ಕಾರಣ ಇದೆ. ‘ಸಿಟಾಡೆಲ್’ ವೆಬ್ ಸರಣಿಯಲ್ಲಿ ಇಬ್ಬರೂ ನಟಿಸುತ್ತಿದ್ದಾರೆ ಎನ್ನಲಾಗಿದೆ. ಈ ವೆಬ್ ಸರಣಿ ಬಗ್ಗೆ ದೊಡ್ಡ ಮಟ್ಟದ ನಿರೀಕ್ಷೆ ಇದೆ. ‘ದಿ ಫ್ಯಾಮಿಲಿ ಮ್ಯಾನ್’ ಸರಣಿ ನಿರ್ದೇಶಿಸಿರುವ ರಾಜ್ ಮತ್ತು ಡಿಕೆ ಇದಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

TV9 Kannada
Read More