- Kannada News Photo gallery Varun Tej and Lavanya Tripathi Engagement ring cost 25 Lakh Each per Piece
ಲಾವಣ್ಯ ತ್ರಿಪಾಠಿ-ವರುಣ್ ತೇಜ್ ನಿಶ್ಚಿತಾರ್ಥ ಉಂಗುರದ ಬೆಲೆ ಇಷ್ಟೊಂದಾ?
ಹೈದರಾಬಾದ್ನಲ್ಲಿ ಎಂಗೇಜ್ಮೆಂಟ್ ಸಮಾರಂಭ ನಡೆದಿದೆ. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.
Updated on: Jun 15, 2023 | 6:30 AM

ಹಲವು ಕಾಲದಿಂದ ಪ್ರೀತಿಸುತ್ತಿದ್ದ ಲಾವಣ್ಯ ತ್ರಿಪಾಠಿ-ವರುಣ್ ತೇಜ್ ಪರಸ್ಪರ ಪ್ರೀತಿಸುತ್ತಿದ್ದರು. ಈಗ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇತ್ತೀಚೆಗೆ ಅದ್ದೂರಿಯಾಗಿ ಎಂಗೇಜ್ಮೆಂಟ್ ನಡೆದಿದೆ.

ಹೈದರಾಬಾದ್ನಲ್ಲಿ ಎಂಗೇಜ್ಮೆಂಟ್ ಸಮಾರಂಭ ನಡೆದಿದೆ. ಹಲವು ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈಗ ಇವರ ಉಂಗುರುದ ಬೆಲೆ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ತಮ್ಮ ನಿಶ್ಚಿತಾರ್ಥದ ಉಂಗುರಕ್ಕೆ ತಲಾ 25 ಲಕ್ಷ ರೂಪಾಯಿ ನೀಡಿದ್ದಾರೆ. ಈ ವಿಚಾರ ಕೇಳಿ ಅನೇಕರಿಗೆ ಅಚ್ಚರಿ ಆಗಿದೆ.

ವರುಣ್ ತೇಜ್ ತಂದೆ ನಾಗ ಬಾಬು, ಸಹೋದರಿ ನಿಹಾರಿಕಾ, ಚಿರಂಜೀವಿ, ಪವನ್ ಕಲ್ಯಾಣ್ ಸೇರಿದಂತೆ ಅನೇಕರು ಈ ನಿಶ್ಚಿತಾರ್ಥದಲ್ಲಿ ಭಾಗಿ ಆಗಿದ್ದರು.

ಲಾವಣ್ಯ ಹಾಗೂ ವರುಣ್ ತೇಜ್ ಸಿನಿಮಾದಲ್ಲಿ ಒಟ್ಟಾಗಿ ನಟಿಸಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಪ್ರೀತಿ ಮೂಡಿದೆ ಎನ್ನಲಾಗುತ್ತಿದೆ.

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.
Read More




