ಸಿದ್ದರಾಮಯ್ಯ ತವರು ವರುಣಾ ಕ್ಷೇತ್ರದ ಗ್ರಾಮಸ್ಥರಿಂದ ಕಾಂಗ್ರೆಸ್ ಮುಖಂಡರಿಗೆ ಬಹಿಷ್ಕಾರ
ಸಿದ್ದರಾಮಯ್ಯ ತವರು ಕ್ಷೇತ್ರ ವರುಣಾದ ನಗರ್ಲೆ ಗ್ರಾಮ ಪ್ರವೇಶಕ್ಕೆ ಕಾಂಗ್ರೆಸ್ ಮುಖಂಡರಿಗೆ ನಿಷೇಧ ಹೇರಲಾಗಿದೆ. ಅನುದಾನದ ವಿಳಂಬದಿಂದ ಬೇಸತ್ತ ಗ್ರಾಮಸ್ಥರು ಕಾಂಗ್ರೆಸ್ ಮುಖಂಡರಿಗೆ ನಮ್ಮ ಗ್ರಾಮದ ಒಳಗೆ ಪ್ರವೇಶವಿಲ್ಲ ಎಂದು ಬ್ಯಾನರ್ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ವೈರಲ್ ಆಗಿದ್ದು, ನಂತರ ಗ್ರಾಮಸ್ಥರು ಬ್ಯಾನರ್ಗಳನ್ನು ತೆಗೆದು ಹಾಕಿದ್ದಾರೆ.
Updated on:Jan 22, 2025 | 2:58 PM

2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸಿದ್ದರಾಮಯ್ಯ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿ, ಮುಖ್ಯಮಂತ್ರಿಯಾಗಿದ್ದಾರೆ. ಮುಖ್ಯಮಂತ್ರಿಗಳ ತವರು ಕ್ಷೇತ್ರ ಎಂದರೇ ಸಹಜವಾಗಿ ಅಭಿವೃದ್ಧಿಯನ್ನು ಕಂಡಿರುತ್ತದೆ ಎಂಬ ಮಾತಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿನ ಒಂದು ಗ್ರಾಮದಲ್ಲಿ ಇದು ತದ್ವಿರುದ್ಧವಾಗಿದೆ.

ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ನಗರ್ಲೆ ಗ್ರಾಮದ ಜನರು ಕಾಂಗ್ರೆಸ್ ಕಾಂಗ್ರೆಸ್ ಮುಖಂಡಿರಿಗೆ ಭಹಿಷ್ಕಾರ ಹಾಕಿದ್ದಾರೆ. ಗ್ರಾಮದ ನಾಲ್ಕು ಕಡೆ ಬ್ಯಾನರ್ ಹಾಕಲಾಗಿದೆ. ಬ್ಯಾನರ್ನಲ್ಲಿ ಕಾಂಗ್ರೆಸ್ ಮುಖಂಡರನ್ನು ಗ್ರಾಮದ ಒಳಗೆ ನಿಷೇಧಿಸಲಾಗಿದೆ ಎಂದು ಬರೆಸಲಾಗಿದೆ.

ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು (ನಾಮರ್ದರು), ಆದ ಕಾರಣ ಯಾವುದೇ ಕಾಂಗ್ರೆಸ್ ಮುಖಂಡರನ್ನು ಗ್ರಾಮಕ್ಕೆ ನಿಷೇಧಿಸಲಾಗಿದೆ ಎಂದು ಫ್ಲೆಕ್ಸ್ ಹಾಕಿದ್ದಾರೆ.

ಗ್ರಾಮಕ್ಕೆ ನೀಡುವ ಅನುದಾನ ವಿಚಾರವಾಗಿ ಬೇಸರಪಟ್ಟುಕೊಂಡು ಗ್ರಾಮದ ಯುವಕರು ಈ ರೀತಿ ಫ್ಲೆಕ್ಸ್ ಹಾಕಿದ್ದಾರೆ ಎಂದು ತಿಳಿದುಬಂದಿದೆ. ಫ್ಲೆಕ್ಸ್ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

ಫ್ಲೆಕ್ಸ್ ಫೋಟೋಗಳು ಭಾರಿ ವೈರಲ್ ಆಗುತ್ತಿದ್ದಂತೆ ಗ್ರಾಮಸ್ಥರು ತೆರವುಗೊಳಿಸಿದರು.
Published On - 8:26 am, Tue, 21 January 25

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.
Read More



