
ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಶೀಘ್ರದಲ್ಲೇ ಮದುವೆ ಆಗಲಿದ್ದಾರೆ ಎನ್ನಲಾಗಿದೆ. ಸದ್ಯಕ್ಕಂತೂ ಈ ಜೋಡಿ ಈ ಬಗ್ಗೆ ಸ್ಪಷ್ಟನೆ ನೀಡುವ ಕೆಲಸ ಮಾಡಿಲ್ಲ.

ಈಗ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ವಿಮಾನ ನಿಲ್ದಾಣದಲ್ಲಿ ಒಟ್ಟೊಟ್ಟಿಗೆ ಕಾಣಿಸಿಕೊಂಡಿದ್ದಾರೆ. ಇಬ್ಬರೂ ಕೈ ಕೈ ಹಿಡಿದು ಸಾಗಿದ್ದಾರೆ.

ಡಿಸೆಂಬರ್ ಅಂತ್ಯಕ್ಕೆ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ನಿಶ್ಚಿತಾರ್ಥ ನಡೆಯಲಿದೆ ಎನ್ನಲಾಗಿದೆ. ಅದಕ್ಕೂ ಮೊದಲು ಶಾಪಿಂಗ್ಗಾಗಿ ದುಬೈಗೆ ತೆರಳಿದ್ದಾರೆ ಎಂದು ವರದಿ ಆಗಿದೆ.

ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹಗೆ ಎಲ್ಲ ಕಡೆಗಳಿಂದ ಶುಭಾಶಯ ತಿಳಿಸಲಾಗುತ್ತಿದೆ. ಫ್ಯಾನ್ಸ್ ಪಾಲಿಗೆ ಈ ವಿಚಾರ ಖುಷಿ ನೀಡಿದೆ.
Published On - 11:35 am, Tue, 29 November 22