ಪರಸ್ಪರ ಪ್ರೀತಿಸುತ್ತಿದ್ದ ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರು ಇಂದು (ಜ.26) ಸಪ್ತಪದಿ ತುಳಿದಿದ್ದಾರೆ. ಈ ಜೋಡಿಯ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ.
ಮೈಸೂರಿನ ಶ್ರೀಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಸ್ಯಾಂಡಲ್ವುಡ್ನ ಅನೇಕರು ಬಂದು ನವ ದಂಪತಿಗೆ ಶುಭ ಹಾರೈಸಿದರು.
ಸಿಂಹಪ್ರಿಯಾ ವಿವಾಹಕ್ಕೆ ಕೆಲವೇ ಕೆಲವು ಮಂದಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ವಸಿಷ್ಠ ಸಿಂಹ ಅವರ ಗೆಳೆಯ ಡಾಲಿ ಧನಂಜಯ್ ಅವರು ಈ ಶುಭ ಕಾರ್ಯಕ್ಕೆ ಸಾಕ್ಷಿಯಾದರು.
ಶಿವರಾಜ್ಕುಮಾರ್ ಅವರು ಮೈಸೂರಿಗೆ ತೆರಳಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಮದುವೆಗೆ ಹಾಜರಿ ಹಾಕಿದ್ದಾರೆ. ಹೊಸ ಬಾಳಿಗೆ ಕಾಲಿಟ್ಟ ಜೋಡಿಗೆ ಶಿವಣ್ಣ ಮನಸಾರೆ ಹರಸಿದ್ದಾರೆ.
ಚಿತ್ರರಂಗದಲ್ಲಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರಿಗೆ ಬೇಡಿಕೆ ಇದೆ. ಇಬ್ಬರೂ ಬೇರೆ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಮದುವೆ ಸಲುವಾಗಿ ನಟನೆಯಿಂದ ಕೊಂಚ ಬ್ರೇಕ್ ಪಡೆದಿದ್ದಾರೆ.
ಮದುವೆಗೂ ಮುನ್ನ ಜನವರಿ 25ರಂದು ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರ ಅರಿಶಿಣ ಶಾಸ್ತ್ರ ನೆರವೇರಿತು. ಆ ಕ್ಷಣದ ಪೋಟೋಗಳನ್ನು ಈ ಜೋಡಿ ಹಂಚಿಕೊಂಡಿತ್ತು. ಅವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಮದುವೆ ಬಳಿಕ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರು ಬೆಂಗಳೂರಿನಲ್ಲಿ ರಿಸೆಪ್ಷನ್ ಏರ್ಪಡಿಸಲಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಆರತಕ್ಷತೆ ಕಾರ್ಯಕ್ರಮಕ್ಕೆ ಬಂದು ಅಭಿನಂದನೆ ಸಲ್ಲಿಸಲಿದ್ದಾರೆ.
Published On - 3:57 pm, Thu, 26 January 23