Kannada News Photo gallery Vasishta Simha and Haripriya Wedding photos: Fans and celebrities wish SimhaPriya happy married life
Haripriya Marriage: ಹರಿಪ್ರಿಯಾ-ವಸಿಷ್ಠ ಸಿಂಹ ಶುಭ ವಿವಾಹ; ಇಲ್ಲಿದೆ ಸೆಲೆಬ್ರಿಟಿ ಮದುವೆಯ ಫೋಟೋ ಗ್ಯಾಲರಿ
Vasishta Simha Marriage photos: ಮೈಸೂರಿನಲ್ಲಿ ಹರಿಪ್ರಿಯಾ ಮತ್ತು ವಸಿಷ್ಠ ಸಿಂಹ ಮದುವೆ ಅದ್ದೂರಿಯಾಗಿ ನಡೆದಿದೆ. ಶಿವರಾಜ್ಕುಮಾರ್, ಡಾಲಿ ಧನಂಜಯ್ ಮುಂತಾದವರು ವಿವಾಹ ಸಮಾರಂಭದಲ್ಲಿ ಭಾಗಿ ಆಗಿದ್ದಾರೆ.
1 / 7
ಪರಸ್ಪರ ಪ್ರೀತಿಸುತ್ತಿದ್ದ ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಅವರು ಇಂದು (ಜ.26) ಸಪ್ತಪದಿ ತುಳಿದಿದ್ದಾರೆ. ಈ ಜೋಡಿಯ ಬದುಕಿನಲ್ಲಿ ಹೊಸ ಅಧ್ಯಾಯ ಆರಂಭ ಆಗಿದೆ.
2 / 7
ಮೈಸೂರಿನ ಶ್ರೀಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಸ್ಯಾಂಡಲ್ವುಡ್ನ ಅನೇಕರು ಬಂದು ನವ ದಂಪತಿಗೆ ಶುಭ ಹಾರೈಸಿದರು.
3 / 7
ಸಿಂಹಪ್ರಿಯಾ ವಿವಾಹಕ್ಕೆ ಕೆಲವೇ ಕೆಲವು ಮಂದಿಗೆ ಮಾತ್ರ ಆಹ್ವಾನ ನೀಡಲಾಗಿತ್ತು. ವಸಿಷ್ಠ ಸಿಂಹ ಅವರ ಗೆಳೆಯ ಡಾಲಿ ಧನಂಜಯ್ ಅವರು ಈ ಶುಭ ಕಾರ್ಯಕ್ಕೆ ಸಾಕ್ಷಿಯಾದರು.
4 / 7
ಶಿವರಾಜ್ಕುಮಾರ್ ಅವರು ಮೈಸೂರಿಗೆ ತೆರಳಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಮದುವೆಗೆ ಹಾಜರಿ ಹಾಕಿದ್ದಾರೆ. ಹೊಸ ಬಾಳಿಗೆ ಕಾಲಿಟ್ಟ ಜೋಡಿಗೆ ಶಿವಣ್ಣ ಮನಸಾರೆ ಹರಸಿದ್ದಾರೆ.
5 / 7
ಚಿತ್ರರಂಗದಲ್ಲಿ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರಿಗೆ ಬೇಡಿಕೆ ಇದೆ. ಇಬ್ಬರೂ ಬೇರೆ ಬೇರೆ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಮದುವೆ ಸಲುವಾಗಿ ನಟನೆಯಿಂದ ಕೊಂಚ ಬ್ರೇಕ್ ಪಡೆದಿದ್ದಾರೆ.
6 / 7
ಮದುವೆಗೂ ಮುನ್ನ ಜನವರಿ 25ರಂದು ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಅವರ ಅರಿಶಿಣ ಶಾಸ್ತ್ರ ನೆರವೇರಿತು. ಆ ಕ್ಷಣದ ಪೋಟೋಗಳನ್ನು ಈ ಜೋಡಿ ಹಂಚಿಕೊಂಡಿತ್ತು. ಅವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
7 / 7
ಮದುವೆ ಬಳಿಕ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ಅವರು ಬೆಂಗಳೂರಿನಲ್ಲಿ ರಿಸೆಪ್ಷನ್ ಏರ್ಪಡಿಸಲಿದ್ದಾರೆ. ಕನ್ನಡ ಚಿತ್ರರಂಗದ ಅನೇಕರು ಆರತಕ್ಷತೆ ಕಾರ್ಯಕ್ರಮಕ್ಕೆ ಬಂದು ಅಭಿನಂದನೆ ಸಲ್ಲಿಸಲಿದ್ದಾರೆ.
Published On - 3:57 pm, Thu, 26 January 23