‘ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು’ ಸಿನಿಮಾಗೆ ವೀರೇಂದ್ರ ಹೆಗ್ಗಡೆ ಬೆಂಬಲ

Updated on: Oct 13, 2024 | 7:30 PM

‘ಸಮರ್ಥ ಸದ್ಗುರು ಶ್ರೀಸಂಗಮೇಶ್ವರ ಮಹಾರಾಜರು’ ಸಿನಿಮಾದ ಲಿರಿಕಲ್​ ವಿಡಿಯೋ ಪೋಸ್ಟರ್​ ಅನ್ನು ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಬಿಡುಗಡೆ ಮಾಡಿದರು. ಬಳಿಕ ಅವರು ಚಿತ್ರತಂಡಕ್ಕೆ ಶುಭ ಹಾರೈಸಿದರು. ಭಕ್ತಿಪ್ರಧಾನ ಕಥಾಹಂದರ ಹೊಂದಿರುವ ಈ ಸಿನಿಮಾ ತಂಡದ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ..

1 / 5
‘ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು’ ಸಿನಿಮಾವನ್ನು ಮಾಧವಾನಂದ ವೈ. ಅವರು ‘ಶ್ರೀ ಗಿರಿಮಲ್ಲೇಶ್ವರ ಕಂಬೈನ್ಸ್’ ಮೂಲಕ ನಿರ್ಮಾಣ ಮಾಡುತ್ತಿದ್ದಾರೆ. ಶ್ರೀ ಸ. ಸ. ಪ್ರಭೂಜೀ ಮಹಾರಾಜರ ಮಾರ್ಗದರ್ಶನದಲ್ಲಿ ರಾಜಾ ರವಿಶಂಕರ್ ಅವರು ನಿರ್ದೇಶನದ ಮಾಡುತ್ತಿದ್ದಾರೆ.

2 / 5
ಈ ಸಿನಿಮಾದ ಹಾಡುಗಳು ಸಿದ್ಧವಾಗಿವೆ. ಸಿನಿಮಾ ತಂಡದ ಸದಸ್ಯರು ಧರ್ಮಸ್ಥಳಕ್ಕೆ ತೆರಳಿ ಶ್ರೀಮಂಜನಾಥ ಸ್ವಾಮಿಯ ದರ್ಶನ ಪಡೆದಿದ್ದಾರೆ. ಈ ವೇಳೆ ‌ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಿಂದ ಲಿರಿಕಲ್​ ವಿಡಿಯೋದ ಪೋಸ್ಟರ್ ಬಿಡುಗಡೆ ಮಾಡಿಸಲಾಯಿತು. ಎ.ಟಿ. ರವೀಶ್ ಸಂಗೀತ ನಿರ್ದೇಶನ ಮಾಡಿದ್ದಾರೆ.

3 / 5
‘ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು’ ಸಿನಿಮಾ ಯಶಸ್ವಿ ಆಗಲಿ ಎಂದು ವೀರೇಂದ್ರ ಹೆಗ್ಗಡೆ ಅವರು ಹಾರೈಸಿದರು. ಅಲ್ಲದೇ, ಇಂಚಗೇರಿ ಆಧ್ಯಾತ್ಮ ಸಂಪ್ರದಾಯ ಹಾಗೂ ಸಿನಿಮಾದ ಬಗ್ಗೆ ಅನೇಕ ವಿಷಯಗಳನ್ನು ಅವರು ಚರ್ಚಿಸಿದರು. ಸಿ. ನಾರಾಯಣ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ.

4 / 5
ಖ್ಯಾತ ಗಾಯಕ ರವೀಂದ್ರ ಸೊರಗಾವಿ ಅವರು ಹಾಡಿದ ಇಂಚಗೇರಿ ಆಧ್ಯಾತ್ಮಿಕ ಸಂಪ್ರದಾಯ ಗುರುಲಿಂಗ ಜಂಗಮ ಮಹಾರಾಜ ಭಕ್ತಿ ಪ್ರಧಾನ ಗೀತೆಯನ್ನು ಪ್ರಶಂಸಿಸಿದರು. ಚಿತ್ರದ ಹಾಡುಗಳು ಮತ್ತು ಸಿನಿಮಾ ಭರ್ಜರಿ ಯಶಸ್ಸು ಕಾಣಲಿ ಎಂದು ವೀರೇಂದ್ರ ಹೆಗ್ಗಡೆ ಅವರು ಹಾರೈಸಿದರು.

5 / 5
ರವಿ ನಾರಾಯಣ್ ಅವರು ಶ್ರೀಸಂಗಮೇಶ್ವರರ ಪಾತ್ರ ಮಾಡುತ್ತಿದ್ದಾರೆ. ರಾಮಕೃಷ್ಣ, ವಿನಯಾ ಪ್ರಸಾದ್, ವಿಜಯಕಾಶಿ, ಸಂದೀಪ್ ಮಲಾನಿ, ತುಷಾರ್ ಮಲಗೊಂಡ, ಭವ್ಯಶ್ರೀ ರೈ, ನಾರಾಯಣ ಸ್ವಾಮಿ ಮುಂತಾದವರು ನಟಿಸಿದ್ದಾರೆ. ಡಿ. ರವಿ ಅವರ ಸಂಕಲನ, ಕುಮಾರ್ ನೊಣವಿನಕೆರೆ ಅವರ ಪ್ರಸಾದನ ಈ ಸಿನಿಮಾಗಿದೆ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us