- Kannada News Photo gallery Vidhana Sabha Deputy Speaker rudrappa Lamani injured in road accident at Chitradruga News In Kannada
ರಸ್ತೆ ಅಪಘಾತದಲ್ಲಿ ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿಗೆ ಗಾಯ, ಆಸ್ಪತ್ರೆಗೆ ದಾಖಲು
ಚಿತ್ರದುರ್ಗದ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಇಂದು (ಮಾರ್ಚ್ 14) ಸಂಭವಿಸಿದ ರಸ್ತ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷರೂ ಆಗಿರುವ ಶಾಸಕ ರುದ್ರಪ್ಪ ಲಮಾಣಿ ಗಾಯಗೊಂಡಿದ್ದಾರೆ. ಅಧಿವೇಶನ ಮುಗಿಸಿಕೊಂಡು ಬೆಂಗಳೂರಿನಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂಬ ಮಾಹಿತಿ ಲಭ್ಯವಾಗಿದ್ದು, ಸದ್ಯ ಅವರನ್ನು ದಾವಣಗೆರೆಯ ಎಸ್‌ಎಸ್ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Updated on:Mar 14, 2025 | 9:33 PM

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಶುಕ್ರವಾರ ಸಂಭವಿಸಿದ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಧ್ಯಕ್ಷರೂ ಆಗಿರುವ ಶಾಸಕ ರುದ್ರಪ್ಪ ಲಮಾಣಿ ಗಾಯಗೊಂಡಿದ್ದಾರೆ.

Vidhana Sabha Deputy Speaker rudrappa Lamani Who Injured In Accident Shifts To Bengaluru From Davanagere News in kannada

ಬೈಕ್ ಡಿಕ್ಕಿ ಹೊಡೆದ ರಭಸಕ್ಕೆ ನೆಲಕ್ಕೆ ಬಿದ್ದ ಪರಿಣಾಮ ರುದ್ರಪ್ಪ ಲಮಾಣಿ ಅವರ ಹಣೆ, ಹಲ್ಲು ಮತ್ತು ಬಲ ಮೊಣಕಾಲಿಗೆ ಗಾಯವಾಗಿದ್ದು, ಕೂಡಲೇ ಅವರನ್ನು ಹಿರಿಯೂರಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ದಾವಣಗೆರೆ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಎಸ್ ಎಸ್ ಆಸ್ಪತ್ರೆ ಗೆ ಆಗಮಿಸಿದ ರುದ್ರಪ್ಪ ಲಮಾಣಿ. ಚಿಕಿತ್ಸೆ ಆರಂಭವಾಗಿದ್ದು, ಗದ್ದಕ್ಕೆ ಪೆಟ್ಟಾಗಿ ಸ್ವಲ್ಪ ಪ್ರಮಾಣದಲ್ಲಿ ರಕ್ತಸ್ರಾವಾಗಿದೆ. ಹಾಗೇ ಬಿಪಿ ನಾರ್ಮಲ್ ಇದೆ.

ಅಧಿವೇಶನ ಮುಗಿಸಿಕೊಂಡು ಬೆಂಗಳೂರಿಂದ ಹಾವೇರಿಗೆ ತೆರಳುತ್ತಿದ್ದ ವೇಳೆ ರುದ್ರಪ್ಪ ಲಮಾಣಿ ಅವರು ಮೂತ್ರ ವಿಸರ್ಜನೆಗೆಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರಿನಿಂದ ಕೆಳಗಿಳಿದಿದ್ದಾರೆ. ಈ ವೇಳೆ ಬೈಕ್ ಬಂದು ಡಿಕ್ಕಿ ಹೊಡೆದಿದೆ.

ಮೂತ್ರ ವಿಸರ್ಜನೆಗೆಂದು ತಮ್ಮ ಕಾರಿನಿಂದ ಇಳಿದಾಗ ರಸ್ತೆಯಲ್ಲಿ ಹೋಗುತ್ತಿದ್ದ ಬೈಕ್ ಸಡನ್ ಆಗಿ ಬಂದು ಅವರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರುದ್ರಪ್ಪ ಲಮಾಣಿಯವರ ತಲೆ, ಕೈಕಾಲುಗಳಿಗೆ ಗಾಯವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಶಿಗ್ಗಾಂವ್ ಶಾಸಕ ಯಾಸೀರ್ ಖಾನ್ ಪಠಾಣ್ ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಸೇರಿದಂತೆ ಪ್ರಮುಖರು ಆಸ್ಪತ್ರೆಯಲ್ಲಿದ್ದಾರೆ. ಇನ್ನು ಆಸ್ಪತ್ರೆಯ ಎದುರು ಬೆಂಬಲಿಗರು ಸಹ ಜಮಾಯಿಸಿದ್ದಾರೆ.

ಇನ್ನು ಈ ಬಗ್ಗೆ ದಾವಣಗೆರೆ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಪ್ರತಿಕ್ರಿಯಿಸಿದ್ದು, ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅವರಿಗೆ ಯಾವುದೇ ಸಮಸ್ಯೆಯಿಲ್ಲ. ತಲೆ, ಗದ್ದಕ್ಕೆ ಪೆಟ್ಟಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಗ್ಗಾಂವ್ ಶಾಸಕ ಯಾಸೀನ್ ಖಾನ್ ಪಠಾಣ ಅವರಿಗೆ ದೂರವಾಣಿ ಕರೆ ಮಾಡಿ ರುದ್ರಪ್ಪ ಲಮಾಣಿ ಆರೋಗ್ಯ ವಿಚಾರಿಸಿದ್ದಾರೆ. ಹಾಗೇ ಖುದ್ದು ರುದ್ರಪ್ಪ ಲಮಾಣಿ ಸಹ ಸಿಎಂ ಜೊತೆ ಮಾತನಾಡಿದ್ದು, ಸದ್ಯ ವೈದ್ಯರು ರುದ್ರಪ್ಪ ಲಮಾಣಿ ಅವರನ್ನು ಸಿಟಿ ಸ್ಕ್ಯಾನ್ ಗೆ ಕರೆದುಕೊಂಡು ಹೋಗಿದ್ದಾರೆ.
Published On - 9:16 pm, Fri, 14 March 25
























