
66ನೇ ಕನ್ನಡ ರಾಜ್ಯೋತ್ಸವ ಆಚರಣೆಯ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ವಿಶೇಷ ಬೆಳಕಿನ ಅಲಂಕಾರ ಮಾಡಲಾಗಿದೆ. ಬಣ್ಣಬಣ್ಣದಿಂದ ವಿಧಾನಸೌಧ ಕಂಗೊಳಿಸುತ್ತಿದೆ. ಕನ್ನಡ ನಾಡು, ಕರ್ನಾಟಕ ಏಕೀಕರಣ, ಕನ್ನಡ ಭಾಷೆಯ ಅಭಿಮಾನ, ಸಂಭ್ರಮವನ್ನು ಈ ರೀತಿ ಆಚರಿಸಲಾಗುತ್ತಿದೆ.

ನಾಳೆ (ನವೆಂಬರ್ 1) 66 ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ ಹಿನ್ನೆಲೆ ಕಂಠೀರವ ಸ್ಟೇಡಿಯಂನಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ 400 ರಿಂದ 500 ಶಿಕ್ಷಕರಿಗೆ ಮಾತ್ರ ಅವಕಾಶ ಇರಲಿದೆ. ಕೊವಿಡ್ ನಿಯಮಾವಳಿಗಳನ್ನು ಅನುಸರಿಸಿಕೊಂಡು ಕನ್ನಡ ರಾಜ್ಯೋತ್ಸವಕ್ಕೆ ಸಿದ್ಧತೆ ಮಾಡಿದ್ದು, ಎಲ್ಲಾ ಶಾಲೆಗಳಲ್ಲಿ ಸರಳವಾಗಿ ಕನ್ನಡ ರಾಜ್ಯೋತ್ಸವವನ್ನು ಆಚಾರಿಸಲು ಸೂಚನೆ ನೀಡಲಾಗಿದೆ.

ಕನ್ನಡ ರಾಜ್ಯೋತ್ಸವ ಹಿನ್ನೆಲೆ ಬೆಳಗ್ಗೆ 9ಕ್ಕೆ ಕಂಠೀರವ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ರಾಜ್ಯೋತ್ಸವದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ಮಾಡಲಿದ್ದಾರೆ. ಶಿಕ್ಷಣ ಇಲಾಖೆ ವತಿಯಿಂದ ರಾಜ್ಯೋತ್ಸವ ಆಯೋಜನೆ ಮಾಡಲಾಗಿದೆ.

ನಾಳೆ (ನವೆಂಬರ್ 1) ಸಂಜೆ 6 ಗಂಟೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ. ಸಮಾರಂಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಸಚಿವ ಸುನಿಲ್ ಕುಮಾರ್ ಸೇರಿದಂತೆ ಹಲವರು ಭಾಗಿ ಆಗಲಿದ್ದಾರೆ. 66 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ನಡೆಯಲಿದೆ. 10 ಸಂಘ ಸಂಸ್ಥೆಗೆ ಅಮೃತ ಮಹೋತ್ಸವ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ.

ಕನ್ನಡ ರಾಜ್ಯೋತ್ಸವ 2021 ಹಿನ್ನೆಲೆಯಲ್ಲಿ ವಿಧಾನಸೌಧ ವಿಶೇಷ ಬೆಳಕಿನ ಅಲಂಕಾರದಲ್ಲಿ ಕಂಗೊಳಿಸಿದ್ದು ಹೀಗೆ.
Published On - 10:00 pm, Sun, 31 October 21