Kannada News » Photo gallery » Vijay devarakonda And Ananya Panday Chemistry in Liger Movie Song Akdi Pakdi
ಹೇಗಿದೆ ನೋಡಿ ವಿಜಯ್ ದೇವರಕೊಂಡ-ಅನನ್ಯಾ ಪಾಂಡೆ ಕೆಮಿಸ್ಟ್ರಿ
TV9kannada Web Team | Edited By: Rajesh Duggumane
Updated on: Jul 11, 2022 | 6:56 PM
‘ಲೈಗರ್’ ಚಿತ್ರದ ‘ಅಕ್ಡಿ ಪಕ್ಡಿ..’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ವಿಜಯ್ ಹಾಗೂ ಅನನ್ಯಾ ಸಖತ್ ಮಾಸ್ ಆಗಿ ಸ್ಟೆಪ್ ಹಾಕಿದ್ದಾರೆ. ಅನನ್ಯಾ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.
Jul 11, 2022 | 6:56 PM
ವಿಜಯ್ ದೇವರಕೊಂಡ ಅವರು ಟಾಲಿವುಡ್ನಲ್ಲಿ ಹೆಸರು ಮಾಡಿದವರು. ಅನನ್ಯಾ ಪಾಂಡೆ ಈಗತಾನೇ ಬಾಲಿವುಡ್ನಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಇಬ್ಬರೂ ‘ಲೈಗರ್’ ಚಿತ್ರಕ್ಕಾಗಿ ಇದೇ ಮೊದಲ ಬಾರಿಗೆ ಒಂದಾಗಿದ್ದಾರೆ.
1 / 5
ಈ ಸಿನಿಮಾ ಪ್ರಮುಖವಾಗಿ ಹಿಂದಿ ಹಾಗೂ ತೆಲುಗಿನಲ್ಲಿ ಸಿದ್ಧಗೊಳ್ಳುತ್ತಿದ್ದು, ಕನ್ನಡ, ತಮಿಳು ಹಾಗೂ ಮಲಯಾಳಂ ಭಾಷೆಗೆ ಡಬ್ ಆಗುತ್ತಿದೆ. ಈ ಚಿತ್ರದಿಂದ ವಿಜಯ್ ದೇವರಕೊಂಡ ಬಾಲಿವುಡ್ಗೆ ಕಾಲಿಟ್ಟರೆ, ಅನನ್ಯಾ ಪಾಂಡೆ ಟಾಲಿವುಡ್ಗೆ ಎಂಟ್ರಿ ಕೊಡಲಿದ್ದಾರೆ.
2 / 5
‘ಲೈಗರ್’ ಚಿತ್ರದ ‘ಅಕ್ಡಿ ಪಕ್ಡಿ..’ ಹಾಡು ರಿಲೀಸ್ ಆಗಿದೆ. ಈ ಹಾಡಿನಲ್ಲಿ ವಿಜಯ್ ಹಾಗೂ ಅನನ್ಯಾ ಸಖತ್ ಮಾಸ್ ಆಗಿ ಸ್ಟೆಪ್ ಹಾಕಿದ್ದಾರೆ. ಅನನ್ಯಾ ಅವರು ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ.
3 / 5
‘ಅಕ್ಡಿ ಪಕ್ಡಿ..’ ಹಾಡು ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಲಕ್ಷಾಂತರ ಬಾರಿ ವೀಕ್ಷಣೆ ಕಂಡಿದೆ. ಈ ಹಾಡಿನಲ್ಲಿ ವಿಜಯ್ ದೇವರಕೊಂಡ ಹಾಗೂ ಅನನ್ಯಾ ಕೆಮಿಸ್ಟ್ರಿ ಹೇಗಿರಲಿದೆ ಎಂಬ ಸೂಚನೆ ಸಿಕ್ಕಿದೆ.
4 / 5
ಪುರಿ ಜಗನ್ನಾಥ್ ಅವರು ‘ಲೈಗರ್’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಕರಣ್ ಜೋಹರ್ ಮೊದಲಾದವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈ ಸಿನಿಮಾದಲ್ಲಿ ಬಾಕ್ಸರ್ ಪಾತ್ರದಲ್ಲಿ ವಿಜಯ್ ದೇವರಕೊಂಡ ಕಾಣಿಸಿಕೊಂಡಿದ್ದಾರೆ.