ಬೇರೆ ಲುಕ್​ನಲ್ಲಿ ಬಂದ ವಿಜಯ್ ದೇವರಕೊಂಡ; ಹೊಸ ಚಿತ್ರಕ್ಕೆ ಮುಹೂರ್ತ

Updated on: Oct 12, 2025 | 12:53 PM

ತೆಲುಗಿನ ಬೇಡಿಕೆಯ ನಟ ವಿಜಯ್ ದೇವರಕೊಂಡ ಅವರು ಕೊನೆಯದಾಗಿ ಕಾಣಿಸಿಕೊಂಡಿದ್ದು ‘ಕಿಂಗ್​ಡಮ್’ ಚಿತ್ರದಲ್ಲಿ. ಇದಾದ ಬಳಿಕ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಈ ಚಿತ್ರದ ಮುಹೂರ್ತ ಕೂಡ ನೆರವೇರಿದೆ. ಈ ಸಿನಿಮಾದ ಮುಹೂರ್ತದ ಫೋಟೋಗಳು ಗಮನ ಸೆಳೆದಿವೆ. ಈ ಚಿತ್ರಕ್ಕೆ ಕೀರ್ತಿ ಸುರೇಶ್ ನಾಯಕಿ.

1 / 5
ವಿಜಯ್ ದೇವರಕೊಂಡ ಹಾಗೂ ಕೀರ್ತಿ ಸುರೇಶ್ ಅವರು ಒಟ್ಟಾಗಿ ನಟಿಸುತ್ತಿರುವ ಹೊಸ ಸಿನಿಮಾ ಸೆಟ್ಟೇರಿದೆ. ಈ ಸಿನಿಮಾದ ಮುಹೂರ್ತದ ಫೋಟೋಗಳು ವೈರಲ್ ಆಗಿವೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ.

ವಿಜಯ್ ದೇವರಕೊಂಡ ಹಾಗೂ ಕೀರ್ತಿ ಸುರೇಶ್ ಅವರು ಒಟ್ಟಾಗಿ ನಟಿಸುತ್ತಿರುವ ಹೊಸ ಸಿನಿಮಾ ಸೆಟ್ಟೇರಿದೆ. ಈ ಸಿನಿಮಾದ ಮುಹೂರ್ತದ ಫೋಟೋಗಳು ವೈರಲ್ ಆಗಿವೆ. ಈ ಸಿನಿಮಾ ಬಗ್ಗೆ ನಿರೀಕ್ಷೆ ಮೂಡಿದೆ.

2 / 5

ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಚಿತ್ರಕ್ಕೆ ಕ್ಲಾಪ್ ಮಾಡಿದ್ದಾರೆ. ನಿರ್ಮಾಪಕ ನಿರಂಜನ್ ರೆಡ್ಡಿ ಕ್ಯಾಮೆರಾ ಆನ್ ಮಾಡಿದರು. ನಿರ್ದೇಶಕ ಹನು ರಾಘವಪುಡಿ ಮೊದಲ ದೃಶ್ಯವನ್ನು ನಿರ್ದೇಶಿಸಿದರು ಅನ್ನೋದು ವಿಶೇಷ.  

3 / 5

ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಪಕ ದಿಲ್ ರಾಜು ಮತ್ತು ಶಿರೀಶ್ ಈ ಸಿನಿಮಾನ ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ತಾತ್ಕಾಲಿಕವಾಗಿ SVC 59 ಎಂದು ಶೀರ್ಷಿಕೆ ಇಡಲಾಗಿದೆ. ಈ ಸಿನಿಮಾದಿಂದ ವಿಜಯ್​ಗೆ ಗೆಲುವು ಸಿಗುತ್ತದೆಯೇ ಎನ್ನುವ ಕುತೂಹಲ ಮೂಡಿದೆ.

4 / 5

ರವಿಕಿರಣ್ ಕೋಲಾ ಈ ಪ್ರಾಜೆಕ್ಟ್ ನಿರ್ದೇಶ ಮಾಡುತ್ತಿದ್ದಾರೆ. ವೆಂಕಟೇಶ್ವರ ಕ್ರಿಯೇಷನ್ಸ್ ನಿರ್ಮಾಣ ಸಂಸ್ಥೆ  ಅಡಿಯಲ್ಲಿ ಮೂಡಿಬರುತ್ತಿರುವ 59 ಚಿತ್ರ ಇದು ಅನ್ನೋದು ವಿಶೇಷ. ವಿಜಯ್ ಹಾಗೂ ಕೀರ್ತಿ ಸುರೇಶ್ ಅವರನ್ನು ದೊಡ್ಡ ಪರದೆಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ.

5 / 5

ಸಿನಿಮಾದ ಕಥೆ ಗ್ರಾಮೀಣ ಕಥೆಯನ್ನು ಹೊಂದಿದೆ. ಆ್ಯಕ್ಷನ್ ಡ್ರಾಮಾ ಇರಲಿದೆ. ಅಕ್ಟೋಬರ್ 16ರಿಂದ ಶೂಟಿಂಗ್ ಆರಂಭ ಆಗಲಿದೆ. ವಿಜಯ್ ದೇವರಕೊಂಡ ಅವರ ಲುಕ್ ಗಮನ ಸೆಳೆಯುವ ರೀತಿಯಲ್ಲಿ ಇದೆ.

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us