ಇನ್ನು ವಿನೇಶ್ ಫೋಗಟ್ ಬರೆದಿರುವ ರಾಜೀನಾಮೆ ಪತ್ರದ ಸಾರಾಂಶವನ್ನು ನೋಡುವುದಾದರೆ.. ‘ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ನನ್ನ ಜೀವನದಲ್ಲಿ ಸ್ಮರಣೀಯ ಮತ್ತು ಹೆಮ್ಮೆಯ ಸಮಯವಾಗಿದೆ. ನನ್ನ ಜೀವನದ ಈ ಹಂತದಲ್ಲಿ, ನಾನು ರೈಲ್ವೆ ಸೇವೆಯಿಂದ ಹೊರಬರಲು ನಿರ್ಧರಿಸಿದ್ದು, ನನ್ನ ರಾಜೀನಾಮೆ ಪತ್ರವನ್ನು ಭಾರತೀಯ ರೈಲ್ವೆಯ ಸಕ್ಷಮ ಅಧಿಕಾರಿಗಳಿಗೆ ಸಲ್ಲಿಸಿದ್ದೇನೆ. ರಾಷ್ಟ್ರದ ಸೇವೆಯಲ್ಲಿ ರೈಲ್ವೆ ನನಗೆ ನೀಡಿದ ಈ ಅವಕಾಶಕ್ಕಾಗಿ ನಾನು ಭಾರತೀಯ ರೈಲ್ವೆ ಕುಟುಂಬಕ್ಕೆ ಯಾವಾಗಲೂ ಕೃತಜ್ಞರಾಗಿರುತ್ತೇನೆ ಎಂದು ಬರೆದುಕೊಂಡಿದ್ದಾರೆ.