ಆದರೆ ದುರಾದೃಷ್ಟ, ಅಂತಿಮ ಹಣಾಹಣಿಗೂ ಮುನ್ನ ನಡೆದ ದೇಹ ತೂಕದ ಪರೀಕ್ಷೆಯಲ್ಲಿ ಅನುಮತಿಸಲಾದ ತೂಕಕ್ಕಿಂತ 100 ಗ್ರಾಂ ಹೆಚ್ಚಿರುವುದು ಕಂಡುಬಂದಿದೆ. ಒಲಂಪಿಕ್ಸ್‌ನಲ್ಲಿ ಕುಸ್ತಿ ನಿಯಮಗಳ ಪ್ರಕಾರ, ಯಾವುದೇ ಕುಸ್ತಿಪಟು ಹೆಚ್ಚಿನ ತೂಕವನ್ನು ಹೊಂದಿದ್ದರೆ ಅವರನ್ನು ಇಡೀ ಪಂದ್ಯಾವಳಿಯಿಂದ ಅನರ್ಹಗೊಳಿಸಲಾಗುತ್ತದೆ. ಅದರಂತೆ 50 ಕೆ.ಜಿ ವಿಭಾಗದಲ್ಲಿ 100 ಗ್ರಾಂ ಹೆಚ್ಚು ತೂಕ ಹೊಂದಿದ್ದ ವಿನೇಶ್ ಫೋಗಟ್ ಅವರನ್ನು ಫೈನಲ್ ಪಂದ್ಯಕ್ಕೂ ಮುನ್ನ ಅನರ್ಹಗೊಳಿಸಲಾಗಿತ್ತು.