AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಸ್ಮಶಾನದಲ್ಲಿ ದೀಪಾವಳಿ ಹಬ್ಬ ಆಚರಣೆ, ಈ ವಿಚಿತ್ರ ಆಚರಣೆ ಯಾಕೆ ಗೊತ್ತಾ?

ಕರೀಂನಗರದಲ್ಲಿ, ಸ್ಮಶಾನದಲ್ಲಿ ದೀಪಾವಳಿಯನ್ನು ಆಚರಿಸುವ ಸಂಪ್ರದಾಯವು ಆರು ದಶಕಗಳಿಂದ ನಡೆದುಕೊಂಡು ಬಂದ ಪದ್ಧತಿ. ಪೂರ್ವಜರನ್ನು ಸ್ಮರಿಸುತ್ತಾ ಕುಟುಂಬದ ಸದಸ್ಯರನ್ನು ಸಮಾಧಿಯಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಆಚರಣೆಯನ್ನು ನಡೆಸಲಾಗುತ್ತದೆ.

TV9 Web
| Edited By: |

Updated on:Oct 24, 2022 | 1:14 PM

Share
ದೀಪಾವಳಿ ಹಬ್ಬವು ಎಲ್ಲರ ಜೀವನದಲ್ಲಿ  ಕತ್ತಲೆಯನ್ನು ಹೋಗಲಾಡಿಸಿ ಸಂತೋಷದ ಬೆಳಕನ್ನು ತರಲು ಆಚರಿಸುವ ಹಬ್ಬ.  ಎಲ್ಲರೂ ಮನೆಯ ಬಳಿ ದೀಪ ಹಚ್ಚುವುದು, ಪಟಾಕಿ ಸಿಡಿಸುವುದು ವಾಡಿಕೆಯಾಗುತ್ತಿದೆ. ಆದರೆ ಇಲ್ಲೊಂದು ವಿಚಿತ್ರ ಆಚರಣೆ ಇದೆ.

Diwali festival at the cemetery

1 / 7
ದೀಪಾವಳಿಯಂದು ಮನೆಗಳಲ್ಲಿ ದೀಪವನ್ನು ಬೆಳಗಿಸಿ, ಅದ್ಧೂರಿಯಾಗಿ ದೀಪಾವಳಿಯನ್ನು ಆಚರಣೆ ಮಾಡುತ್ತಾರೆ. ಆದರೆ ತೆಲಂಗಾಣದ ಜಿಲ್ಲೆಯಲ್ಲಿ ಇದಕ್ಕೆ ಸಂಪೂರ್ಣ ವ್ಯತಿರಿಕ್ತವಾಗಿದೆ.

Diwali festival at the cemetery

2 / 7
Diwali festival at the cemetery

ತೆಲಂಗಾಣದ ಕರೀಂನಗರದಲ್ಲಿ ಆರು ದಶಕಗಳಿಂದ ಸ್ಮಶಾನದಲ್ಲಿ ದೀಪಾವಳಿ ಆಚರಿಸುವ ಸಂಪ್ರದಾಯ ಇದೆ. ಪೂರ್ವಜರನ್ನು ಸ್ಮರಿಸುತ್ತಾ ಕುಟುಂಬದ ಸದಸ್ಯರನ್ನು ಸಮಾಧಿ ಮಾಡಿದ ಸ್ಥಳದಲ್ಲಿ ದೀಪಗಳನ್ನು ಬೆಳಗಿಸುವ ಮೂಲಕ ಆಚರಣೆಯನ್ನು ನಡೆಸಲಾಗುತ್ತದೆ.

3 / 7
Diwali festival at the cemetery

ಈ ಆಚರಣೆ ತೆಲಂಗಾಣದ ಕರೀಂನಗರ ಸಂಪ್ರದಾಯವಾಗಿದೆ. ಕರೀಂನಗರದ ಕರ್ಜನ ಗಡ್ಡಾದಲ್ಲಿರುವ ಹಿಂದೂ ಸ್ಮಶಾನದಲ್ಲಿ ಪ್ರತಿ ವರ್ಷ ದಲಿತ ಕುಟುಂಬಗಳು ಸ್ಮಶಾನದಲ್ಲಿರುವ ತಮ್ಮ ಸಂಬಂಧಿಕರ ಸಮಾಧಿಯಲ್ಲಿ ದೀಪಾವಳಿ ಆಚರಿಸುತ್ತಾರೆ.

4 / 7
Diwali festival at the cemetery

ಹಬ್ಬಕ್ಕೆ ಒಂದು ವಾರ ಮೊದಲು ಸ್ಮಶಾನವನ್ನು ಸ್ವಚ್ಛಗೊಳಿಸಿ ಸಮಾಧಿಗಳಿಗೆ ಬಣ್ಣ ಬಳಿಯುತ್ತಾರೆ. ಕುಟುಂಬದ ಸದಸ್ಯರೆಲ್ಲರೂ ಸಮಾಧಿಯ ಬಳಿಗೆ ಹೋಗಿ, ಸಮಾಧಿಗಳನ್ನು ಹೂವಿನಿಂದ ಅಲಂಕರಿಸುತ್ತಾರೆ.

5 / 7
Diwali festival at the cemetery

ಹಬ್ಬದ ದಿನದಂದು, ಕುಟುಂಬದ ಸದಸ್ಯರೆಲ್ಲರೂ ಸಂಜೆ ಅಲ್ಲಿಯೇ ಕಳೆಯುತ್ತಾರೆ. ಅಲ್ಲಿಯೇ ದೀಪಾವಳಿಯನ್ನು ಆಚರಣೆ ಮಾಡುತ್ತಾರೆ.

6 / 7
Diwali festival at the cemetery

ತಮ್ಮ ಹಿರಿಯರಿಗೆ ನೈವೇದ್ಯ ಸಲ್ಲಿಸುವ ಮೂಲಕ ಅವರನ್ನು ಸ್ಮರಿಸುತ್ತಾರೆ. ಇದು ಸ್ವಲ್ಪ ವಿಚಿತ್ರ ಎನಿಸಿದರೂ ಸತ್ತವರ ನೆನಪುಗಳನ್ನು ನೆನೆದು ಹಬ್ಬ ಆಚರಿಸುತ್ತಿರುವುದು ಸಂತಸ ತಂದಿದೆ ಎನ್ನುತ್ತಾರೆ.

7 / 7

Published On - 1:14 pm, Mon, 24 October 22

Follow Us
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ