ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ: ಭಾರತ ತಂಡಕ್ಕೆ ಹೊಸ ನಾಯಕ ಆಯ್ಕೆ
Rohit Sharma - Virat Kohli: ಭಾರತ ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಯುಗಾಂತ್ಯವಾಗಿದೆ. ದಶಕಗಳ ಕಾಲ ಟೀಮ್ ಇಂಡಿಯಾ ಪರ ಆಡಿದ್ದ ಈ ಇಬ್ಬರು ಆಟಗಾರರು ಇನ್ಮುಂದೆ ಏಕದಿನ ಕ್ರಿಕೆಟ್ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ 2024ರ ಟಿ20 ವಿಶ್ವಕಪ್ ಬೆನ್ನಲ್ಲೇ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತರಾಗಿದ್ದರು. ಇದೀಗ ಟೆಸ್ಟ್ ಕ್ರಿಕೆಟ್ಗೂ ಗುಡ್ ಬೈ ಹೇಳಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ನಿವೃತ್ತಿ ಘೋಷಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಹಿಟ್ಮ್ಯಾನ್ ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದರು. ಇದೀಗ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸಿರುವುದಾಗಿ ತಿಳಿಸಿದ್ದಾರೆ.
1 / 5
ಇದರೊಂದಿಗೆ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡದ ಪರ ರೋ-ಕೊ ಜೋಡಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಸಹ ಖಚಿತವಾಗಿದೆ. ಇತ್ತ ರೋಹಿತ್ ಶರ್ಮಾ ನಿವೃತ್ತಿ ಬೆನ್ನಲ್ಲೇ ಬಿಸಿಸಿಐ ಭಾರತ ಟೆಸ್ಟ್ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಿಕೊಂಡಿದೆ.
2 / 5
ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, ಶುಭ್ಮನ್ ಗಿಲ್ ಭಾರತ ಟೆಸ್ಟ್ ತಂಡದ ನೂತನ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಗಿಲ್ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರನ್ನು ಭೇಟಿಯಾಗಿ ಮುಂಬರುವ ಸರಣಿ ಬಗ್ಗೆ ಚರ್ಚಿಸಿದ್ದಾರೆ.
3 / 5
ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಶುಭ್ಮನ್ ಗಿಲ್ ಮುನ್ನಡೆಸುವುದು ಖಚಿತ ಎನ್ನಬಹುದು. ಇನ್ನು ಉಪನಾಯಕನಾಗಿ ರಿಷಭ್ ಪಂತ್ ಹೆಸರು ಚಾಲ್ತಿಯಲ್ಲಿದ್ದು, ಹೀಗಾಗಿ ವಿಕೆಟ್ ಕೀಪರ್ ಬ್ಯಾಟರ್ಗೆ ವೈಸ್ ಕ್ಯಾಪ್ಟನ್ ಪಟ್ಟ ಸಿಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.
4 / 5
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಈ ಸರಣಿಯ ಮೂಲಕ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್ಮನ್ ಗಿಲ್ ಭಾರತ ಟೆಸ್ಟ್ ತಂಡದ ನಾಯಕರಾಗಿ ಪಾದಾರ್ಪಣೆ ಮಾಡಲಿದ್ದಾರೆ. ಅಲ್ಲದೆ ಈ ಸರಣಿಯೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ 4ನೇ ಆವೃತ್ತಿಯ ಸರಣಿ ಕೂಡ ಶುರುವಾಗುತ್ತಿದೆ. ಹೀಗಾಗಿ 2027 ರಲ್ಲಿ ಶುಭ್ಮನ್ ಗಿಲ್ ಮುಂದಾಳತ್ವದಲ್ಲಿ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಆಡಲಿದೆಯಾ ಕಾದು ನೋಡಬೇಕಿದೆ.