ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ನಿವೃತ್ತಿ: ಭಾರತ ತಂಡಕ್ಕೆ ಹೊಸ ನಾಯಕ ಆಯ್ಕೆ

Updated on: May 12, 2025 | 2:32 PM

Rohit Sharma - Virat Kohli: ಭಾರತ ಟೆಸ್ಟ್ ತಂಡದಲ್ಲಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿಯ ಯುಗಾಂತ್ಯವಾಗಿದೆ. ದಶಕಗಳ ಕಾಲ ಟೀಮ್ ಇಂಡಿಯಾ ಪರ ಆಡಿದ್ದ ಈ ಇಬ್ಬರು ಆಟಗಾರರು ಇನ್ಮುಂದೆ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕೂ ಮುನ್ನ 2024ರ ಟಿ20 ವಿಶ್ವಕಪ್​ ಬೆನ್ನಲ್ಲೇ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತರಾಗಿದ್ದರು. ಇದೀಗ ಟೆಸ್ಟ್​ ಕ್ರಿಕೆಟ್​ಗೂ ಗುಡ್ ಬೈ ಹೇಳಿದ್ದಾರೆ.

1 / 5
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಟೀಮ್ ಇಂಡಿಯಾ ದಿಗ್ಗಜರಾದ ರೋಹಿತ್ ಶರ್ಮಾ (Rohit Sharma) ಹಾಗೂ ವಿರಾಟ್ ಕೊಹ್ಲಿ (Virat Kohli) ನಿವೃತ್ತಿ ಘೋಷಿಸಿದ್ದಾರೆ. ಕೆಲ ದಿನಗಳ ಹಿಂದೆಯಷ್ಟೇ ಹಿಟ್​ಮ್ಯಾನ್ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಇದೀಗ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ಕ್ರಿಕೆಟ್ ಕೆರಿಯರ್ ಅನ್ನು ಅಂತ್ಯಗೊಳಿಸಿರುವುದಾಗಿ ತಿಳಿಸಿದ್ದಾರೆ.

2 / 5
ಇದರೊಂದಿಗೆ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ತಂಡದ ಪರ ರೋ-ಕೊ ಜೋಡಿ ಕಾಣಿಸಿಕೊಳ್ಳುವುದಿಲ್ಲ ಎಂಬುದು ಸಹ ಖಚಿತವಾಗಿದೆ. ಇತ್ತ ರೋಹಿತ್ ಶರ್ಮಾ ನಿವೃತ್ತಿ ಬೆನ್ನಲ್ಲೇ ಬಿಸಿಸಿಐ ಭಾರತ ಟೆಸ್ಟ್ ತಂಡಕ್ಕೆ ಹೊಸ ನಾಯಕನನ್ನು ಆಯ್ಕೆ ಮಾಡಿಕೊಂಡಿದೆ.

3 / 5
ಬಿಸಿಸಿಐ ಮೂಲಗಳ ಮಾಹಿತಿ ಪ್ರಕಾರ, ಶುಭ್​ಮನ್ ಗಿಲ್ ಭಾರತ ಟೆಸ್ಟ್ ತಂಡದ ನೂತನ ನಾಯಕರಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ ಗಿಲ್ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ಅವರನ್ನು ಭೇಟಿಯಾಗಿ ಮುಂಬರುವ ಸರಣಿ ಬಗ್ಗೆ ಚರ್ಚಿಸಿದ್ದಾರೆ.

4 / 5
ಹೀಗಾಗಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ಶುಭ್​ಮನ್ ಗಿಲ್ ಮುನ್ನಡೆಸುವುದು ಖಚಿತ ಎನ್ನಬಹುದು. ಇನ್ನು ಉಪನಾಯಕನಾಗಿ ರಿಷಭ್ ಪಂತ್ ಹೆಸರು ಚಾಲ್ತಿಯಲ್ಲಿದ್ದು, ಹೀಗಾಗಿ ವಿಕೆಟ್​ ಕೀಪರ್ ಬ್ಯಾಟರ್​ಗೆ ವೈಸ್​ ಕ್ಯಾಪ್ಟನ್ ಪಟ್ಟ ಸಿಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ.

5 / 5
ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯು ಜೂನ್ 20 ರಿಂದ ಶುರುವಾಗಲಿದೆ. ಈ ಸರಣಿಯ ಮೂಲಕ ಗುಜರಾತ್ ಟೈಟಾನ್ಸ್ ತಂಡದ ನಾಯಕ ಶುಭ್​ಮನ್ ಗಿಲ್ ಭಾರತ ಟೆಸ್ಟ್ ತಂಡದ ನಾಯಕರಾಗಿ ಪಾದಾರ್ಪಣೆ ಮಾಡಲಿದ್ದಾರೆ. ಅಲ್ಲದೆ ಈ ಸರಣಿಯೊಂದಿಗೆ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ 4ನೇ ಆವೃತ್ತಿಯ ಸರಣಿ ಕೂಡ ಶುರುವಾಗುತ್ತಿದೆ. ಹೀಗಾಗಿ 2027 ರಲ್ಲಿ ಶುಭ್​ಮನ್ ಗಿಲ್ ಮುಂದಾಳತ್ವದಲ್ಲಿ ಭಾರತ ತಂಡ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಆಡಲಿದೆಯಾ ಕಾದು ನೋಡಬೇಕಿದೆ.

Published On - 12:48 pm, Mon, 12 May 25