Virat Kohli: ಗೆದ್ದು ಸೋತ ವಿರಾಟ್ ಕೊಹ್ಲಿ: ರಾಜೀನಾಮೆ ನೀಡಿದ ಟೀಮ್ ಇಂಡಿಯಾದ ಯಶಸ್ವಿ ನಾಯಕ

| Updated By: ಝಾಹಿರ್ ಯೂಸುಫ್

Updated on: Jan 15, 2022 | 8:01 PM

Virat Kohli Test Captaincy Record: 68 ಟೆಸ್ಟ್ ಪಂದ್ಯಗಳಲ್ಲಿ ತಂಡದ ಸಾರಥ್ಯವಹಿಸಿದ್ದ ವಿರಾಟ್ ಕೊಹ್ಲಿ 40 ಟೆಸ್ಟ್‌ಗಳಲ್ಲಿ ಟೀಮ್ ಇಂಡಿಯಾವನ್ನು ಗೆಲುವಿನತ್ತ ಮುನ್ನಡೆಸಿದ್ದಾರೆ. ಇನ್ನು 17 ಟೆಸ್ಟ್‌ಗಳಲ್ಲಿ ಸೋತರೆ 11 ಪಂದ್ಯಗಳು ಡ್ರಾ ಆಗಿವೆ. ಈ ಮೂಲಕ ಟೀಮ್ ಇಂಡಿಯಾ ಇತಿಹಾಸದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ ಎನಿಸಿಕೊಂಡಿದ್ದಾರೆ ವಿರಾಟ್ ಕೊಹ್ಲಿ.

1 / 6
 ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವವನ್ನೂ ತೊರೆದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಸೋತ ನಂತರ ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಂ ಇಂಡಿಯಾ ಅನೇಕ  ಸಾಧನೆಗಳನ್ನು ಮಾಡಿದೆ. ಅಂದರೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ವಿದೇಶದಲ್ಲಿ ಯಶಸ್ಸಿನ ಪತಾಕೆ ಹಾರಿಸಿತ್ತು. ತವರು ನೆಲದಲ್ಲಿ ಟೀಮ್ ಇಂಡಿಯಾವನ್ನು ಸೋಲಿಸುವುದು ಅಸಾಧ್ಯವಾಯಿತು. ವಿರಾಟ್ ಕೊಹ್ಲಿ ಐಸಿಸಿ ಟೂರ್ನಮೆಂಟ್ ಗೆಲ್ಲದಿದ್ದರೂ, ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾಗೆ ಹಲವು ಮಹತ್ವದ ಟ್ರೋಫಿಗಳನ್ನು ಗೆದ್ದುಕೊಟ್ಟಿದ್ದರು.

2 / 6
ವಿರಾಟ್ ಕೊಹ್ಲಿ ಭಾರತದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕ.  ಅವರ ನಾಯಕತ್ವದಲ್ಲಿ ಟೀಂ ಇಂಡಿಯಾ 40 ಪಂದ್ಯಗಳನ್ನು ಗೆದ್ದಿದೆ.  ಅಷ್ಟೇ ಅಲ್ಲದೆ ಕೇವಲ 17 ಟೆಸ್ಟ್‌ಗಳಲ್ಲಿ ಮಾತ್ರ ಸೋತಿದ್ದು, 11 ಪಂದ್ಯಗಳು ಡ್ರಾ ಆಗಿವೆ. ಅಂದರೆ ವಿರಾಟ್ ಕೊಹ್ಲಿ ಗೆಲುವಿನ ಶೇಕಡಾವಾರು ಶೇಕಡಾ 58.82.  ಈ ಮೂಲಕ ಟೀಮ್ ಇಂಡಿಯಾ ಪರ ಮಾತ್ರವಲ್ಲದೆ ಏಷ್ಯಾದಲ್ಲೇ ಟೆಸ್ಟ್ ಗೆಲುವಿನಲ್ಲಿ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ.

3 / 6
ಇನ್ನು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ವಿದೇಶದಲ್ಲಿ 16 ಟೆಸ್ಟ್ ಪಂದ್ಯಗಳನ್ನು ಗೆದ್ದಿದೆ. ಇಂತಹ ಸಾಧನೆ ಮಾಡಿದ ಏಷ್ಯಾದ ಏಕೈಕ ನಾಯಕ ಹೆಗ್ಗಳಿಕೆ ಕೊಹ್ಲಿದು. ಹಾಗೆಯೇ ಗ್ರೇಮ್ ಸ್ಮಿತ್ ಮತ್ತು ಕ್ವಾಯ್ ಲಾಯ್ಡ್ (23), ಪಾಂಟಿಂಗ್ ಮತ್ತು ಸ್ಟೀವ್ ವಾ (19) ನಂತರ ವಿದೇಶದಲ್ಲಿ ಅತೀ ಹೆಚ್ಚು ಟೆಸ್ಟ್​ಗಳನ್ನು ಗೆದ್ದ ನಾಯಕ ಎಂಬ ದಾಖಲೆ ಕೂಡ ಕೊಹ್ಲಿ ಹೆಸರಿನ್ಲಲಿದೆ.

4 / 6
ಇನ್ನು ಸತತ 11 ಟೆಸ್ಟ್ ಸರಣಿಗಳಲ್ಲಿ 11 ಗೆಲುವು ದಾಖಲಿಸುವ ಮೂಲಕ ಕೊಹ್ಲಿ ವಿಶೇಷ ದಾಖಲೆಯನ್ನೂ ಕೂಡ ಬರೆದಿದ್ದಾರೆ.  ತವರಿನಲ್ಲಿ ವಿರಾಟ್ ಇಂಗ್ಲೆಂಡ್, ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಬಲಿಷ್ಠ ತಂಡಗಳ ವಿರುದ್ದ ಸರಣಿ ಗೆದ್ದ ದಾಖಲೆ ಕೂಡ ಕೊಹ್ಲಿ ಹೆಸರಿನಲ್ಲಿದೆ.

5 / 6
 ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿ ಗೆದ್ದ ಭಾರತದ ಮೊದಲ ನಾಯಕ ಎಂಬ ದಾಖಲೆ ಕೂಡ ಕೊಹ್ಲಿ ಹೆಸರಿನಲ್ಲಿದೆ.  ವಿರಾಟ್ ನಾಯಕನಾಗಿ ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್‌ನಲ್ಲಿ ಟೆಸ್ಟ್ ಸರಣಿಗಳನ್ನು ಗೆದ್ದಿದ್ದಾರೆ. ಅಲ್ಲದೆ ಇಂಗ್ಲೆಂಡ್ ವಿರುದ್ದ 2-1 ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

6 / 6
ಇನ್ನು ನಾಯಕನಾಗಿ ವಿರಾಟ್ ಕೊಹ್ಲಿ ಅವರ ಬ್ಯಾಟಿಂಗ್ ಕೂಡ ಅದ್ಭುತವಾಗಿತ್ತು.   68 ಟೆಸ್ಟ್‌ಗಳಲ್ಲಿ ತಂಡದ ನಾಯಕನಾಗಿ ಕಣಕ್ಕಿಳಿದ ಕೊಹ್ಲಿ 54.80 ಸರಾಸರಿಯಲ್ಲಿ 20 ಶತಕಗಳು ಮತ್ತು 18 ಅರ್ಧ ಶತಕಗಳನ್ನು ಒಳಗೊಂಡಂತೆ 5864 ರನ್ ಗಳಿಸಿದ್ದಾರೆ. ಈ ಮೂಲಕ ಅತ್ಯಂತ ಯಶಸ್ವಿ ಟೆಸ್ಟ್ ತಂಡದ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಇಷ್ಟೆಲ್ಲಾ ಸಾಧನೆ ಮಾಡಿದ ಕೊಹ್ಲಿ ಒಂದು ಸರಣಿ ಸೋಲಿನ ಬೆನ್ನಲ್ಲೇ ರಾಜೀನಾಮೆ ನೀಡಿರುವುದೇ ಅಚ್ಚರಿ.