ಇಂದು ಬಿಡುಗಡೆ: ಭಾರತದಲ್ಲಿ ಧೂಳೆಬ್ಬಿಸಲು ಬರುತ್ತಿದೆ ವಿವೋ Y200 ಸ್ಮಾರ್ಟ್ಫೋನ್
Vivo Y200 launch Today in India: ಭಾರತೀಯ ಮಾರುಕಟ್ಟೆಯಲ್ಲಿ ವಿವೋ Y200 ಫೋನ್ ಇದೇ ಅಕ್ಟೋಬರ್ 23 ರಂದು ಇಂದು ಮಧ್ಯಾಹ್ನ 12 ಗಂಟೆಗೆ ಅನಾವರಣಗೊಳ್ಳಲಿದೆ.ಈ ಫೋನ್ ಡ್ಯುಯಲ್-ಕ್ಯಾಮೆರಾ ಸೆಟಪ್ ಮತ್ತು ಗೋಲ್ಡ್ ಕಲರ್ ಆಯ್ಕೆಯನ್ನು ಹೊಂದಿದೆ ಎಂದು ಕಂಪನಿ ಖಚಿತಪಡಿಸಿದೆ. ಈ ಸ್ಮಾರ್ಟ್ಫೋನ್ ಫೀಚರ್ಸ್ ಕುರಿತ ಕೆಲ ಮಾಹಿತಿ ಕೂಡ ಸೋರಿಕೆ ಆಗಿದೆ.
Updated on: Oct 23, 2023 | 6:55 AM

ಕಳೆದ ಕೆಲವು ವಾರಗಳಿಂದ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೂ ಮುನ್ನ ಸಾಕಷ್ಟು ಸದ್ದು ಮಾಡುತ್ತಿರುವ ಫೋನ್ ಎಂದರೆ ಅದು ವಿವೋ ಕಂಪನಿಯ ವಿವೋ Y200 (Vivo Y200). ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿರುವ ಈ ಸ್ಮಾರ್ಟ್ಫೋನ್ ಇಂದು ದೇಶದಲ್ಲಿ ಬಿಡುಗಡೆ ಆಗಲಿದೆ.

ಭಾರತೀಯ ಮಾರುಕಟ್ಟೆಯಲ್ಲಿ ವಿವೋ Y200 ಫೋನ್ ಇದೇ ಅಕ್ಟೋಬರ್ 23 ರಂದು ಇಂದು ಮಧ್ಯಾಹ್ನ 12 ಗಂಟೆಗೆ ಅನಾವರಣಗೊಳ್ಳಲಿದೆ.ಈ ಫೋನ್ ಡ್ಯುಯಲ್-ಕ್ಯಾಮೆರಾ ಸೆಟಪ್ ಮತ್ತು ಗೋಲ್ಡ್ ಕಲರ್ ಆಯ್ಕೆಯನ್ನು ಹೊಂದಿದೆ ಎಂದು ಕಂಪನಿ ಖಚಿತಪಡಿಸಿದೆ. ಈ ಸ್ಮಾರ್ಟ್ಫೋನ್ ಫೀಚರ್ಸ್ ಕುರಿತ ಕೆಲ ಮಾಹಿತಿ ಕೂಡ ಸೋರಿಕೆ ಆಗಿದೆ.

ಈ ಫೋನ್ ಡೆಸರ್ಟ್ ಗೋಲ್ಡ್ ಮತ್ತು ಜಂಗಲ್ ಗ್ರೀನ್ ಬಣ್ಣದ ಆಯ್ಕೆಗಳಲ್ಲಿ ಲಭ್ಯವಿರುತ್ತದೆ. ಹಿಂಭಾಗದಲ್ಲಿ ಡ್ಯುಯಲ್ ಕ್ಯಾಮೆರಾ ಸಂವೇದಕಗಳನ್ನು ಹೊಂದಿರುತ್ತದೆ. ಇದರಲ್ಲಿರುವ ಕ್ಯಾಮೆರಾ ಕಡಿಮೆ-ಬೆಳಕಿನಲ್ಲಿ ಕೂಡ ಅತ್ಯುತ್ತಮ ಫೋಟೋ ಸೆರೆ ಹಿಡಿಯುತ್ತದೆ. ಇದಕ್ಕಾಗಿ ಸ್ಮಾರ್ಟ್ ಔರಾ ಲೈಟ್ ಅನ್ನು ಅಳವಡಿಸಲಾಗಿದೆ.

ವಿವೋ Y200 ಸ್ಮಾರ್ಟ್ಫೋನ್ 6.67-ಇಂಚಿನ FHD+ AMOLED ಡಿಸ್‌ಪ್ಲೇ, 120Hz ರಿಫ್ರೆಶ್ ರೇಟ್ ಮತ್ತು ಇನ್-ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್‌ನೊಂದಿಗೆ ಬರುವ ನಿರೀಕ್ಷೆಯಿದೆ. ಕ್ವಾಲ್ಕಂ ಸ್ನಾಪ್ಡ್ರಾಗನ್ 4 Gen 1 ಪ್ರೊಸೆಸರ್‌ನಿಂದ ಚಾಲಿತವಾಗುತ್ತದೆ. ಈ ಚಿಪ್‌ಸೆಟ್ ಅನ್ನು 8GB RAM ಮತ್ತು 256GB ಸಂಗ್ರಹಣೆಯೊಂದಿಗೆ ಜೋಡಿಸಬಹುದು. ಜೊತೆಗೆ ಮತ್ತಷ್ಟು ವಿಸ್ತರಿಸಬಹುದು ಆಯ್ಕೆ ಇರುತ್ತದೆ.

ವಿವೋ Y200 OIS ಜೊತೆಗೆ 64MP ಪ್ರೈಮರಿ ಕ್ಯಾಮೆರಾ ಮತ್ತು 2MP ಡೆಪ್ತ್ ಸೆನ್ಸಾರ್ ಅನ್ನು ಒಳಗೊಂಡಿರಲಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಳಿಗಾಗಿ 16MP ಕ್ಯಾಮೆರಾ ಆಯ್ಕೆ ಇರಲಿದೆ. 44W ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ 4,800mAh ಬ್ಯಾಟರಿಯನ್ನು ಹೊಂದಿರಬಹುದು. ಈ ಫೋಣ್ 5ಜಿ ಸಪೋರ್ಟ್ ಮಾಡುತ್ತದೆ.
























