Updated on:Jan 24, 2022 | 12:09 PM
ಹಸಿ ಬಾಳೆಹಣ್ಣನ್ನು ತಿನ್ನುವುದು ಅಷ್ಟು ಸುಲಭವಲ್ಲ. ಆದರೆ ಕೆಲವೊಂದು ಖಾದ್ಯ ಮತ್ತು ಬೇರೆ ವಿಧಾನಗಳಿಂದ ಇದನ್ನು ತಿನ್ನಬಹುದು. ಇದರಲ್ಲಿ ಗ್ಲೈಸೆಮಿಕ್ ಇಂಡೆಕ್ಸ್ ತುಂಬಾ ಕಡಿಮೆ ಇದೆ. ಗ್ಲೂಕೋಸ್ ಆಗಿ ಪರಿವರ್ತನೆ ಆಗುವಂತಹ ಅಂಶವು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡುತ್ತದೆ.
ಹಸಿ ಬಾಳೆಹಣ್ಣು ಪೊಟ್ಯಾಸಿಯಮ್, ಮೆಗ್ನೀಸಿಯಮ್, ವಿಟಮಿನ್ B6 ಮತ್ತು C ನಂತಹ ಪೋಷಕಾಂಶಗಳನ್ನು ಹೊಂದಿದೆ. ಫೈಬರ್ ಅಂಶ ಕೂಡಾ ಹೆಚ್ಚಿನ ಪ್ರಮಾಣದಲ್ಲಿರುತ್ತದೆ.
ಹಸಿ ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್ ಇದ್ದು, ಇದು ಮೂತ್ರಪಿಂಡಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಆದ್ದರಿಂದ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಾಪಾಡಲು ಸಹಾಯ ಮಾಡುತ್ತದೆ. ಇದು ಹೃದಯವನ್ನು ಆರೋಗ್ಯವಾಗಿರಿಸಲು ಸಹಾಯ ಮಾಡುತ್ತದೆ.
ಹಸಿ ಬಾಳೆಹಣ್ಣನ್ನು ಒಂದು ಚಿಟಿಕೆ ಉಪ್ಪಿನೊಂದಿಗೆ ಕುದಿಸಿ ಕುಡಿಯುವುದರಿಂದ ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಹಸಿ ಬಾಳೆಹಣ್ಣುಗಳು ಬಹಳಷ್ಟು ಆಹಾರದ ಫೈಬರ್‌ಗಳನ್ನು ಹೊಂದಿರುತ್ತವೆ. ಅದು ನಮ್ಮನ್ನು ಸಂತೃಪ್ತವಾಗಿರಿಸಲು ಸಹಾಯ ಮಾಡುತ್ತದೆ. ಆದ್ದರಿಂದ, ಇದು ಅತಿಯಾಗಿ ತಿನ್ನುವುದನ್ನು ತಡೆಯುವುದರೊಂದಿಗೆ, ತೂಕವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
Published On - 12:04 pm, Mon, 24 January 22