WhatsApp Ban: ಶಾಕಿಂಗ್: ಭಾರತದ ಬರೋಬ್ಬರಿ 74 ಲಕ್ಷಕ್ಕೂ ಅಧಿಕ ಅಕೌಂಟ್ ಬ್ಯಾನ್ ಮಾಡಿದ ವಾಟ್ಸ್‌ಆ್ಯಪ್
WhatsApp Banned 7,420,748 accounts: ಆಗಸ್ಟ್ 01-31ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್‌ಆ್ಯಪ್ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 7,420,748 ವಾಟ್ಸ್‌ಆ್ಯಪ್ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಜುಲೈ ತಿಂಗಳಲ್ಲಿ ಕೂಡ 72 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿಷೇಧಿಸಲಾಗಿತ್ತು.
1 / 6
ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸ್‌ಆ್ಯಪ್ (WhatsApp) ಕಳೆದ ಆಗಸ್ಟ್ ತಿಂಗಳಲ್ಲಿ ಬರೋಬ್ಬರಿ 74 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿರ್ಬಂಧಿಸಿದೆ. 2021 ಬಳಕೆದಾರರ ಸುರಕ್ಷತ ಕಾಯಿದೆ 4(1)(D) ಅಡಿಯಲ್ಲಿ ವಾಟ್ಸ್‌ಆ್ಯಪ್ ಈ ನಿರ್ಧಾರವನ್ನು ತೆಗೆದುಕೊಂಡಿದೆ.
2 / 6
ಆಗಸ್ಟ್ 01-31ರ ಅವಧಿಯಲ್ಲಿ ಅನೇಕ ದೂರುಗಳನ್ನು ಸ್ವೀಕರಿಸಲಾಗಿದೆ. ವಾಟ್ಸ್‌ಆ್ಯಪ್ ಸೇವಾ ಷರತ್ತುಗಳ ಉಲ್ಲಂಘನೆ ಮತ್ತು ಬಳಕೆದಾರರ ದೂರುಗಳನ್ನು ಆಧರಿಸಿ ಈ ಕ್ರಮ ಕೈಗೊಳ್ಳಲಾಗಿದ್ದು, ಅದರಂತೆ 7,420,748 ವಾಟ್ಸ್‌ಆ್ಯಪ್ ಖಾತೆಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಮೆಟಾ ತಿಳಿಸಿದೆ. ಈ ಹಿಂದೆ ಜುಲೈ ತಿಂಗಳಲ್ಲಿ ಕೂಡ 72 ಲಕ್ಷಕ್ಕೂ ಅಧಿಕ ಭಾರತೀಯರ ಖಾತೆಗಳನ್ನು ನಿಷೇಧಿಸಲಾಗಿತ್ತು.
3 / 6
ವಾಟ್ಸ್‌ಆ್ಯಪ್ ಭಾರತದಲ್ಲಿ ಹೆಚ್ಚು ವ್ಯಾಪಕವಾಗಿ ಬಳಸಲಾಗುವ ಸಂದೇಶ ಕಳುಹಿಸುವ ಅಪ್ಲಿಕೇಶನ್ ಆಗಿದೆ. 500 ಮಿಲಿಯನ್ ಬಳಕೆದಾರರನ್ನು ಹೊಂದಿರುವ ಈ ಆ್ಯಪ್ ಕೇವಲ ಆಗಸ್ಟ್ ತಿಂಗಳಿನಲ್ಲಿ ಭಾರತೀಯ ಗ್ರಾಹಕರಿಂದ ಆಶ್ಚರ್ಯಕರವಾದ 14,767 ದೂರು ವರದಿಗಳನ್ನು ಸ್ವೀಕರಿಸಿದೆ. ಇವುಗಳಲ್ಲಿ 71 ವರದಿಗಳಿಗೆ ಪ್ರತಿಕ್ರಿಯೆಯಾಗಿ, ವಾಟ್ಸ್‌ಆ್ಯಪ್ ಖಾತೆಯನ್ನು ಬ್ಯಾನ್ ಮಾಡಿದೆ.
4 / 6
ಬ್ಯಾನ್ ಆಗಿರುವ ಖಾತೆಗಳು ಕಿರುಕುಳ, ನಕಲಿ ಮಾಹಿತಿಯನ್ನು ಫಾರ್ವರ್ಡ್ ಮಾಡುವುದು, ಇತರ ಬಳಕೆದಾರರನ್ನು ವಂಚಿಸಿರುವುದು ಕಂಡುಬಂದಿದೆ. ಇದಲ್ಲದೆ ಹಾನಿಕಾರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಈ ಖಾತೆಗಳನ್ನು ನಿಷೇಧಿಸಲಾಗಿದೆ.
5 / 6
ವಾಟ್ಸ್‌ಆ್ಯಪ್ ತನ್ನ ಬಳಕೆದಾರರ ಸುರಕ್ಷತೆಗೆ ಹೆಚ್ಚು ಗಮನ ಹರಿಸುತ್ತಿದೆ. ಆದರೆ ಇದಕ್ಕೆ ವಿರುದ್ಧವಾಗಿ ಕಾರ್ಯನಿರ್ವಹಿಸುವ ಚಂದಾದಾರರ ಮೇಲೆ ವಿಷೇಧ ವಿಧಿಸುತ್ತದೆ. ಈ ಬಗ್ಗೆ ವಕ್ತಾರರೊಬ್ಬರು ಮಾತನಾಡಿ, ವಾಟ್ಸ್‌ಆ್ಯಪ್ ನಿಂದನೆಯನ್ನು ತಡೆಗಟ್ಟುವ ಉದ್ಯಮದ ಮುಂಚೂಣಿಯಲ್ಲಿದೆ, ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶ ಸೇವೆಗಳ ಬಗ್ಗೆ ಹೆಚಚಿನ ಗಮನ ಹರಿಸುತ್ತಿದೆ ಎಂದಿದ್ದಾರೆ.
6 / 6
ವಾಟ್ಸ್‌ಆ್ಯಪ್ ನಿಯಮಗಳು ಮತ್ತು ಷರತ್ತುಗಳ ಪ್ರಕಾರ, ಕಾನೂನು ಬಾಹಿರ, ಅಶ್ಲೀಲ, ಮಾನಹಾನಿಕರ, ಬೆದರಿಕೆಯ, ಕಿರುಕುಳದ, ದ್ವೇಷಪೂರಿತ ಸಂದೇಶಗಳನ್ನು ಕಳುಹಿಸಿದರೆ ನಿಮ್ಮನ್ನು ವಾಟ್ಸ್‌ಆ್ಯಪ್ ಬ್ಯಾನ್ ಮಾಡುತ್ತದೆ. ಹಿಂಸಾತ್ಮಕ ಅಪರಾಧಗಳನ್ನು ಪ್ರಚೋದಿಸುವ ಅಥವಾ ಉತ್ತೇಜಿಸುವ ಸಂದೇಶಗಳನ್ನು ಕಳುಹಿಸಿದರೂ ವಾಟ್ಸ್‌ಆ್ಯಪ್ ನಿಮ್ಮನ್ನು ಬ್ಯಾನ್ ಮಾಡಬಹುದು.