WhatsApp: ವಾಟ್ಸ್​ಆ್ಯಪ್​ನಲ್ಲಿ ಬರುತ್ತಿದೆ ಬಳಕೆದಾರರಿಗೆ ಉಪಯುಕ್ತವಾದ ಅದ್ಭುತ ವೈಶಿಷ್ಟ್ಯ

ವಾಟ್ಸ್​ಆ್ಯಪ್ ಚಾಟ್​ಬಾಕ್ಸ್​ನಲ್ಲಿರುವ ಡಾಕ್ಯುಮೆಂಟ್​​​ ಆಯ್ಕೆಯಲ್ಲಿ ಹೊಸ ಅಪ್ಡೇಟ್ ನೀಡಲು ಮುಂದಾಗಿದೆ. ಇದರ ಹೆಸರು ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್ (Document Preview feature).

Vinay Bhat
|

Updated on:Feb 22, 2022 | 8:35 AM

ಒಂದರ ಹಿಂದೆ ಒಂದರಂತೆ ಹೊಸ ಫೀಚರ್​ಗಳನ್ನು ಬಿಡುಗಡೆ ಮಾಡಲು ಮೆಟಾ (Meta) ಒಡೆತನದ ವಾಟ್ಸ್​ಆ್ಯಪ್​ ತುದಿಗಾಲಿನಲ್ಲಿ ನಿಂತಿದೆ. ಈಗಾಗಲೇ ಅನೇಕ ಅಪ್ಡೇಟ್​ಗಳು ಪರೀಕ್ಷಾ ಹಂತದಲ್ಲಿದ್ದು ವಾಟ್ಸ್​ಆ್ಯಪ್ (WhatsApp)​ ಬೇಟಾ ಇನ್​ಫೋ ಒಂದೊಂದೆ ವರದಿ ಮಾಡುತ್ತಿದೆ. ಇದೀಗ ವಾಟ್ಸ್​ಆ್ಯಪ್ ಚಾಟ್​ಬಾಕ್ಸ್​ನಲ್ಲಿರುವ ಡಾಕ್ಯುಮೆಂಟ್​​​ ಆಯ್ಕೆಯಲ್ಲಿ ಹೊಸ ಅಪ್ಡೇಟ್ ನೀಡಲು ಮುಂದಾಗಿದೆ.

1 / 6
ಇದರ ಹೆಸರು ಡಾಕ್ಯುಮೆಂಟ್​​ ಪ್ರೀವ್ಯೂ ಫೀಚರ್ (Document Preview feature). ಆಂಡ್ರಾಯ್ಡ್ ಬೇಟಾ ಬಳಕೆದಾರರಿಗಾಗಿ ಈ ಫೀಚರ್ ಪರೀಕ್ಷಾ ಹಂತದಲ್ಲಿದೆ. 2.25.5.11 ಬೇಟಾ ವರ್ಷನ್​​ನಲ್ಲಿ ಈ ಆಯ್ಕೆ ಸಿಗಲಿದೆಯಂತೆ.

2 / 6
ವಾಟ್ಸ್​ಆ್ಯಪ್ ಬೇಟಾ ಇನ್​ಫೋ ಫೋಟೋ ಒಂದನ್ನು ಹಂಚಿಕೊಂಡಿದ್ದು ಇದರ ಪ್ರಕಾರ, ಪೋಟೋ ಅಥವಾ ವಿಡಿಯೋ ಡಾಕ್ಯುಮೆಂಟ್​​ ಮೂಲಕ ಸೆಂಡ್ ಮಾಡಿದರೆ ರಿಸಿವರ್​ಗೆ ಪ್ರೀವ್ಯೂನಲ್ಲಿ ಕಾಣಿಸುತ್ತದೆ. ಈಗಾಗಲೇ ಈ ಆಯ್ಕೆ ಫೋಟೋ ಮತ್ತು ವಿಡಿಯೋಕ್ಕೆ ಇದೆ. ಸದ್ಯದಲ್ಲೇ ಇದು ಡಾಕ್ಯುಮೆಂಟ್​​​​ಗೂ ಬರಲಿದೆಯಂತೆ.

3 / 6
ಇನ್ನು ವಾಟ್ಸ್​ಆ್ಯಪ್ ಗ್ರೂಪ್ ಕಾಲ್​​ನಲ್ಲಿ ವಿಶೇಷ ಫೀಚರ್ ಒಂದು ಸೇರ್ಪಡೆಯಾಗಲಿದೆಯಂತೆ. ಅಂದರೆ ಗ್ರೂಪ್ ಕಾಲ್​ನಲ್ಲಿ ಮಾತನಾಡುತ್ತಿರುವಾಗ ಕರೆಯಲ್ಲಿರುವ ಸದಸ್ಯರು ಯಾರು ಯಾರು ಎಂಬುದು ಚೌಕಾಕಾರದ ಬಾಕ್ಸ್​​ನಲ್ಲಿ ಕಾಣಿಸಲಿದೆ.

4 / 6
ಇದರ ಜೊತೆಗೆ ವಾಟ್ಸ್​ಆ್ಯಪ್ ಪರಿಚಯಿಸಲು ಹೊರಟಿರುವ ಮತ್ತೊಂದು ಹೊಸ ಅಪ್ಡೇಟ್ ಕವರ್ ಫೋಟೋ. ಹೌದು, ನೀವು ಫೇಸ್​ಬುಕ್​ನಲ್ಲಿ ಕವರ್ ಫೋಟೋ ಆಯ್ಕೆಯನ್ನು ನೋಡಿರುತ್ತೀರಿ. ಸದ್ಯದಲ್ಲೇ ಇದೇರೀತಿಯ ಆಯ್ಕೆ ವಾಟ್ಸ್​ಆ್ಯಪ್​​ನಲ್ಲೂ ಸಿಗಲಿದೆ.

5 / 6
ವಾಟ್ಸ್​ಆ್ಯಪ್ ಬೇಟಾಇನ್​ಫೋ ವರದಿ ಪ್ರಕಾರ, ಈ ಆಯ್ಕೆ ವಾಟ್ಸ್​ಆ್ಯಪ್ ಪ್ರೊಫೈಲ್​ನಲ್ಲಿ ಕಾಣಲಿದೆಯಂತೆ. ಇದಕ್ಕಾಗಿ ನೀವು ಬಿಸ್ನೆಸ್ ಸೆಟ್ಟಿಂಗ್​ನಲ್ಲಿ ಕೆಲವು ಬದಲಾವಣೆ ಮಾಡಬೇಕಷ್ಟೆ. ಕವರ್ ಫೋಟೋ ಹಾಕಬೇಕೆಂದರೆ ನಿಮ್ಮ ಪ್ರೊಫೈಲ್​ನಲ್ಲಿ ಕ್ಯಾಮೆರಾ ಬಟನ್ ಕಾಣಿಸುತ್ತದಂತೆ.

WhatsApp new feature will allow users to see document preview WhatsApp Latest Updates

6 / 6

Published On - 8:24 am, Tue, 22 February 22

Follow us
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ತನ್ನ ತಂದೆ ಬಗ್ಗೆ ಮಾತಾಡಿದ ಬಿಜೆಪಿ ನಾಯಕನ ಹೇಳಿಕೆಗೆ ಕಣ್ಣೀರು ಹಾಕಿದ ಅತಿಶಿ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ರಾಮಚಂದ್ರಪ್ಪನಿಂದ ಪೀಡಿತ ಮತ್ತೊಬ್ಬ ಮಹಿಳೆ ತನ್ನ ವೇದನೆ ಹೇಳಿಕೊಂಡಿದ್ದಾರೆ
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿವಿ 2001ರಿಂದ ಭಾರತದಲ್ಲಿದೆ, ನಿಶ್ಶಕ್ತರು ಇದರ ಟಾರ್ಗೆಟ್: ದಿನೇಶ್
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಹೆಚ್ಎಂಪಿ ವೈರಸ್ ಯಾವ ವೇರಿಯಂಟ್ ಅಂತ ನಾನು ಹೇಳಲಾಗಲ್ಲ: ಅಶ್ವಥ್ ನಾರಾಯಣ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಸಂತೋಷ್ ಲಾಡ್ ತಮ್ಮ ಪಟಾಲಂನೊಂದಿಗೆ ಅಸ್ಪತ್ರೆಗೆ ಬಂದಿದ್ದು ಸರಿಯಲ್ಲ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ