ವಿಶ್ವ ಚೆಸ್ ಚಾಂಪಿಯನ್‌ಶಿಪ್ ಗೆದ್ದ ಗುಕೇಶ್ ಯಾರು? ಚೆಸ್ ಚತುರನಿಗೆ ಗುರು ಯಾರು?

|

Updated on: Dec 12, 2024 | 9:42 PM

Gukesh Wins World Chess Championship: ಭಾರತದ ಗ್ರ್ಯಾಂಡ್ ಮಾಸ್ಟರ್ ಡಿ. ಗುಕೇಶ್ ಅವರು ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿ ವಿಶ್ವ ಚೆಸ್ ಚಾಂಪಿಯನ್‌ಶಿಪ್ ಗೆದ್ದಿದ್ದಾರೆ.ತಮಿಳುನಾಡು ಮೂಲದ ಗುಕೇಶ್ ಮೇ 7, 2006 ರಂದು ಜನಿಸಿದರು. ಅವರ ಪೂರ್ಣ ಹೆಸರು ದೋಮರಾಜು ಗುಕೇಶ್. ಗುಕೇಶ್ ಅವರ ತಂದೆ ವೈದ್ಯರಾಗಿದ್ದರೆ, ಅವರ ತಾಯಿ ವೃತ್ತಿಯಲ್ಲಿ ಮೈಕ್ರೋಬಯಾಲಜಿಸ್ಟ್ ಆಗಿದ್ದಾರೆ.

1 / 5
ಗುರುವಾರ ನಡೆದ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನ 14ನೇ ಮತ್ತು ಅಂತಿಮ ಸುತ್ತಿನ ಪಂದ್ಯದಲ್ಲಿ ಭಾರತದ ಗ್ರ್ಯಾಂಡ್‌ಮಾಸ್ಟರ್ ಡಿ.ಗುಕೇಶ್ ಅವರು ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ಚೆಸ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಇದರ ಜೊತೆಗೆ 18ನೇ ವಯಸ್ಸಿಗೆ ಚಾಂಪಿಯನ್ ಆಗುವ ಮೂಲಕ ಚೆಸ್ ಇತಿಹಾಸದಲ್ಲಿ ಈ ಸಾಧನೆ ಮಾಡಿದ ಅತ್ಯಂತ ಕಿರಿಯ ಚೆಸ್ ಪಟು ಎಂಬ ದಾಖಲೆಯನ್ನು ಸೃಷ್ಟಿಸಿದ್ದಾರೆ.

2 / 5
18 ವರ್ಷದ ಗುಕೇಶ್ 7.5-6-5 ಅಂಕಗಳ ಅಂತರದಿಂದ ಲಿರೆನ್ ಅವರನ್ನು ಸೋಲಿಸುವ ಮೂಲಕ ವಿಶ್ವ ಪ್ರಶಸ್ತಿಯನ್ನು ಗೆದ್ದುಕೊಂಡರು. ಇದರೊಂದಿಗೆ ಬರೋಬ್ಬರಿ 12 ವರ್ಷಗಳ ಬಳಿಕ ಭಾರತೀಯ ಚೆಸ್ ಆಟಗಾರನೊಬ್ಬ ಈ ಪ್ರಶಸ್ತಿಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

3 / 5
ತನ್ನ ಐತಿಹಾಸಿಕ ಸಾಧನೆಯ ಮೂಲಕ ಇಡೀ ಭಾರತವೇ ಹೆಮ್ಮೆ ಪಡುವಂತೆ ಮಾಡಿರುವ ಗುಕೇಶ್ ಯಾರು ಎಂಬುದನ್ನು ನೋಡುವುದಾದರೆ... ತಮಿಳುನಾಡಿನ ಗುಕೇಶ್ ಅವರು ಮೇ 7, 2006 ರಂದು ಜನಿಸಿದರು. ಅವರ ಪೂರ್ಣ ಹೆಸರು ದೋಮರಾಜು ಗುಕೇಶ್. ಗುಕೇಶ್ ಅವರ ತಂದೆ ವೈದ್ಯರಾಗಿದ್ದರೆ, ಅವರ ತಾಯಿ ವೃತ್ತಿಯಲ್ಲಿ ಮೈಕ್ರೋಬಯಾಲಜಿಸ್ಟ್ ಆಗಿದ್ದಾರೆ.

4 / 5
ತನ್ನ ಏಳನೇ ವಯಸ್ಸಿನಲ್ಲಿ ಚೆಸ್ ಆಡಲು ಪ್ರಾರಂಭಿಸಿದ ಗುಕೇಶ್ ಅವರಿಗೆ ಆರಂಭದಲ್ಲಿ ಭಾಸ್ಕರ್ ತರಬೇತಿ ನೀಡುತ್ತಿದ್ದರು. ಇದಾದ ನಂತರ ಐದು ಬಾರಿಯ ವಿಶ್ವ ಚೆಸ್ ಚಾಂಪಿಯನ್‌ ವಿಶ್ವನಾಥನ್ ಆನಂದ್, ಗುಕೇಶ್ ಅವರಿಗೆ ತರಬೇತಿ ನೀಡಿದ್ದರು.

5 / 5
2015 ರಲ್ಲಿ ನಡೆದ ಏಷ್ಯನ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನ 9 ವರ್ಷದೊಳಗಿನವರ ವಿಭಾಗದಲ್ಲಿ ಮತ್ತು 2018 ರಲ್ಲಿ ನಡೆದ 12 ವರ್ಷದೊಳಗಿನವರ ವಿಭಾಗದಲ್ಲಿ ವಿಶ್ವ ಯೂತ್ ಚೆಸ್ ಚಾಂಪಿಯನ್‌ಶಿಪ್ ಗೆದ್ದಿಕೊಂಡಿದ್ದ ಗುಕೇಶ್ ಇದುವರೆಗೆ ಏಷ್ಯನ್ ಯೂತ್ ಚಾಂಪಿಯನ್‌ಶಿಪ್​ನಲ್ಲಿ ಐದು ಚಿನ್ನದ ಪದಕಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.

Published On - 9:42 pm, Thu, 12 December 24