ಕೈ ಶಾಸಕರ ಹೆಸರೇಳಿ ಆತ್ಮಹತ್ಯೆಗೆ ಶರಣಾದ ವಿನಯ್ ಯಾರು? ಬಿಜೆಪಿ ನಾಯಕರು ಸಿಡಿದೇಳಲು ಕಾರಣವೇನು?
Vinay Somaiah Suicide Case: ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ನಾಗವಾರದಲ್ಲಿ ನಡೆದಿದೆ. ವಿನಯ್ ಸೋಮಯ್ಯ (39) ಆತ್ಮಹತ್ಯೆಗೆ ಶರಣಾಗಿರುವ ಬಿಜೆಪಿ ಕಾರ್ಯಕರ್ತ. ಸಾಯುವುದಕ್ಕೂ ಮೊದಲು ವಿನಯ್ ಬರೆದಿದ್ದಾರೆ ಎನ್ನಲಾಗುತ್ತಿರುವ ಡೆತ್ನೋಟ್ನಲ್ಲಿ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಜೊತೆಗೆ ಕಾಂಗ್ರೆಸ್ ಶಾಸಕ ಮಂಥರ್ ಗೌಡ ಹಾಗೂ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ವಿರುದ್ಧ ಆರೋಪಿಸಿದ್ದಾರೆ. ಹೀಗಾಗಿ ವಿನಯ್ ಸೋಮಯ್ಯ ಪ್ರಕರಣ ರಾಜಕೀಯ ಚರ್ಚೆಗೆ ದಾರಿ ಮಾಡಿಕೊಟ್ಟಿದ್ದು, ಎಲ್ಲೆಡೆ ಪ್ರತಿಭಟನೆಗಳು ಶುರುವಾಗಿವೆ. ಅಷ್ಟಕ್ಕೂ ಈ ವಿನಯ್ ಸೋಮಯ್ಯ ಯಾರು? ಆತ್ಮಹತ್ಯೆಗೆ ಕಾರಣವೇನು? ಈತ ಮಾಡಿರುವ ಆರೋಪಗಳೇನು? ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಕೊಡಗು ಜಿಲ್ಲೆಯ ಸೋಮವಾರಪೇಟೆ ಗೋಣಿಮರೂರು ನಿವಾಸಿ ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಎನ್ನುವರು ಇಂದು (ಏಪ್ರಿಲ್ 04) ಬೆಳಗ್ಗೆ 4.30ಕ್ಕೆ ಸಾವಿಗೆ ಶರಣಾಗಿದ್ದಾರೆ. ವಾಟ್ಸಪ್ ಪೋಸ್ಟ್ ಮಾಡಿ ಬಳಿಕ ಬೆಂಗಳೂರಿನ ನಾಗವಾರದ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
1 / 10
ಕೊಡಗು ಜಿಲ್ಲೆಯ ಸೋಮವಾರಪೇಟೆ ಗೋಣಿಮರೂರು ನಿವಾಸಿ ವಿನಯ್ ಸೋಮಯ್ಯ ಬೆಂಗಳೂರಿನ ಖಾಸಗಿ ಕಂಪನಿ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರು ಬಿಜೆಪಿ ಕಾರ್ಯಕರ್ತರಾಗಿದ್ದು, ಇಂದು ಬೆಳಗ್ಗೆ 4.30ಕ್ಕೆ ಸಾವಿಗೆ ಶರಣಾಗಿದ್ದಾರೆ. ಸಾಯುವುದಕ್ಕೂ ಮೊದಲು ವಿನಯ್ ಬರೆದಿದ್ದಾರೆ ಎನ್ನಲಾಗುತ್ತಿರುವ ಡೆತ್ನೋಟ್ನಲ್ಲಿ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಮೇಲೆ ಗಂಭೀರ ಆರೋಪ ಮಾಡಿದ್ದಾರೆ.
2 / 10
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಗೋಣಿಮಾರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಡುಂಡಿ ಗ್ರಾಮದವರಾಗಿದ್ದು, ದೇವತಿ, ಸೋಮಯ್ಯ ದಂಪತಿಯ 3ನೇ ಪುತ್ರನಾಗಿರುವ ವಿನಯ್, 15 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ವಾಸವಾಗಿದ್ದ.
3 / 10
ಇನ್ನು ವಿನಯ್ ಸೋಮಯ್ಯ ಈಗಾಗಲೇ ಮದುವೆಯಾಗಿದ್ದು, ಓರ್ವ ಮಗಳು ಇದ್ದಾಳೆ. ಪತ್ನಿ ಹೆಸರು ಶೋಭಿತಾ, ಪುತ್ರಿ ಹೆಸರು ಸಾಧ್ವಿ ಅಂತ. ಯುಗಾದಿ ಹಬ್ಬಕ್ಕೆ ಹುಟ್ಟೂರು ಎಡುಂಡಿಗೆ ಬಂದಿದ್ದ. ಬೆಂಗಳೂರಿನಲ್ಲಿ ಮ್ಯಾನ್ಪವರ್ ಆಪರೇಟಿಂಗ್ ಕಂಪನಿಯಲ್ಲಿ ಆಪರೇಷನ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು.
4 / 10
ವಿನಯ್ ಸೋಮಯ್ಯ ಬಿಜೆಪಿ ಕಾರ್ಯಕರ್ತನಾಗಿದ್ದ. 12 ವರ್ಷಗಳ ಹಿಂದೆ ಬಿಜೆಪಿ ಹೋಬಳಿ ಅಧ್ಯಕ್ಷರಾಗಿದ್ದರು. ಅಷ್ಟೇ ಅಲ್ಲದೇ ಇವರ ತಂದೆ ಸೋಮಯ್ಯ ಸಹ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿದ್ದರು. ವಿನಯ್ ಸೋಮಯ್ಯ ಕೂಡ ಬಿಜೆಪಿಯನ್ನು ಬೆಂಬಲಿಸುತ್ತಿದ್ದರು.
5 / 10
ವಿನಯ್ ಸೋಮಯ್ಯ ಬಿಜೆಪಿಯನ್ನು ಬೆಂಬಲಿಸುತ್ತಿದ್ದು, ಬಿಜೆಪಿಯ ಸಿದ್ಧಾಂತಗಳು, ವಿಚಾರಧಾರೆ ಬಗ್ಗೆ ಮಾಹಿತಿ ಸಂಗ್ರಹಿಸಿ ಹಂಚಿಕೊಳ್ಳುತ್ತಿದ್ದ. ಸಾಮಾಜಿ ಜಾಲತಾಣಗಳಲ್ಲಿ ಬಿಜೆಪಿಯ ವಿಚಾರಗಳು ಹಾಗೂ ಹಿಂದೂತ್ವದ ಸಿದ್ದಾಂತಗಳನ್ನು ಹಂಚಿಕೊಳ್ಳುತ್ತಿದ್ದ.
6 / 10
ವಿನಯ್ ‘ಕೊಡಗಿನ ಸಮಸ್ಯೆಗಳು ಮತ್ತು ಸಲಹೆ ಸೂಚನೆಗಳು’ ಎಂಬ ಹೆಸರಿನ ವಾಟ್ಸ್ಆ್ಯಪ್ ಗ್ರೂಪ್ನ ಅಡ್ಮಿನ್ ಆಗಿದ್ದರು. ಇತ್ತೀಚೆಗೆ ಇದೇ ಗ್ರೂಪ್ ಮೂಲಕ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡರೊಬ್ಬರ ಆಕ್ಷೇಪಾರ್ಹ ಫೋಸ್ಟ್ ವೈರಲ್ ಆಗಿತ್ತು. ಈ ಸಂಬಂಧ ಅಡ್ಮಿನ್ ಆಗಿದ್ದ ವಿನಯ್ ವಿರುದ್ಧವೇ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿತ್ತು. ಇದರಿಂದ ಮನನೊಂದು ವಿನಯ್ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
7 / 10
ಈ ಹಿಂದೆ ವಿನಯ್ ಸೋಮಯ್ಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ ಎಸ್ ಪೊನ್ನಣ್ಣ ವಿರುದ್ಧ ವಾಟ್ಸಪ್ ಪೋಸ್ಟೊಂದನ್ನು ಮಾಡಿದ್ದರು. ಈ ಪೋಸ್ಟ್ ವಿರುದ್ಧ ಕಾಂಗ್ರೆಸ್ ಮುಖಂಡ ತನ್ನೀರ ಮೈನಾ ಮಡಿಕೇರಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಅವರನ್ನು ಎರಡು ತಿಂಗಳ ಹಿಂದೆ ಬಂಧಿಸಲಾಗಿತ್ತು. ಬಂಧನದ ಬಳಿಕ ಬಹಳ ಮನನೊಂದಿದ್ದ ವಿನಯ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
8 / 10
ಕಾಂಗ್ರೆಸ್ ನಾಯಕರ ದ್ವೇಷ ರಾಜಕಾರಣಕ್ಕೆ ಬಲಿಯಾದ ಮಡಿಕೇರಿ ಬಿಜೆಪಿ ಕಾರ್ಯಕರ್ತರಾದ ವಿನಯ್ ಸೋಮಯ್ಯ ಅವರಿಗೆ ಪ್ರತಿಪಕ್ಷ ನಾಯಕ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕ ನಾರಾಯಣಸ್ವಾಮಿ ಅವರು ಬೆಂಗಳೂರಿನ ಡಾ. ಬಿ. ಆರ್. ಅಂಬೇಡ್ಕರ್ ಆಸ್ಪತ್ರೆಯಲ್ಲಿ ಅಂತಿಮ ನಮನ ಸಲ್ಲಿಸಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
9 / 10
ಇನ್ನು ವಿನಯ್ ಅವರು ಆತ್ಮಹತ್ಯೆಗೆ ಮುನ್ನ ಡೆತ್ನೋಟ್ನಲ್ಲಿ ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಹಾಗೂ ಸಿಎಂ ಕಾನೂನು ಸಲಹೆಗಾರ, ಶಾಸಕ ಪೊನ್ನಣ್ಣ ಹಾಗೂ ಮಂಥರ್ ಗೌಡ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಹೀಗಾಗಿ ಬಿಜೆಪಿ ಕಾರ್ಯಕರ್ತುರ ನಾಯಕರು ಸಿಡಿದೆದ್ದಿದ್ದು, ಕೊಡಗಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇನ್ನೊಂದೆಡೆ ತಮ್ಮ ಕಾರ್ಯಕರ್ತನ ಸಾವಿಗೆ ನ್ಯಾಯ ಕೊಡಿ ಎಂದು ಬಿಜೆಪಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದೆ.