AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆಶಿ ಕನಸಿನ ಯೋಜನೆಗೆ ವಿರೋಧ ಏಕೆ? ಏನಿದು ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕ್ ಕೆನಾಲ್?

ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ವಿರೋಧಿಸಿ ನಡೆಯುತ್ತಿರುವ ರೈತರ ಹೋರಾಟ ತೀವ್ರಗೊಂಡಿದೆ. ಇಂದು ತುಮಕೂರಿನ ಗುಬ್ಬಿಯ ಸಂಕಾಪುರದ ಕಾಮಗಾರಿ ಸ್ಥಳಕ್ಕೆ ತೆರಳಲು ಪ್ರತಿಭಟನಾಕಾರರ ದಂಡು ರೆಡಿಯಾಗಿತ್ತು. ಜಿಲ್ಲಾಡಳಿತ 144 ಸೆಕ್ಷನ್ ಜಾರಿ ಮಾಡಿದ್ದರಿಂದ ಕಾಮಗಾರಿ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ನಾವಾ ನೀವಾ ನೋಡಿಯೇ ಬಿಡೋಣ ಎಂದು ಸರ್ಕಾರಕ್ಕೆ ಸೆಡ್ಡು ಹೊಡೆದ ಹೋರಾಟಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ. ಹಾಗಾದ್ರೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಕನಸಿ ಈ ಹೇಮಾವತಿ ಲಿಂಕಿಂಗ್ ಕೆನಾಲ್ ಯೋಜನೆಗೆ ವಿರೋಧ ಏಕೆ? ಏನಿದು ಯೋಜನೆ? ಯಾವಾಗ, ಯಾರು ಕಾಲದಲ್ಲಿ ಆದೇಶವಾಗಿದ್ದು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಜಗದೀಶ ಬಿ.
| Edited By: |

Updated on:May 31, 2025 | 5:52 PM

Share
ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ತುಮಕೂರಲ್ಲಿ ನಡೆಯುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ನಿಟ್ಟೂರಿನಿಂದ ಪಾದಯಾತ್ರೆ ಮೂಲಕ ಕಾಮಗಾರಿ ನಡೆಯುತ್ತಿರುವ ಸುಂಕಾಪುರದತ್ತ ಸಾವಿರಾರು ರೈತರು, ಹೋರಾಟಗಾರರು ಲಗ್ಗೆಯಿಟ್ಟಿದ್ದಾರೆ. ಗುಬ್ಬಿಯ ಸುಂಕಾಪುರದಲ್ಲಿ ಹೇಮಾವತಿ ನೀರಿಗಾಗಿ ಹೋರಾಟ ಕ್ಷಣ ಕ್ಷಣಕ್ಕೂ ಕಾವೇರುತ್ತಿದೆ.

1 / 12
ಉಗ್ರ ಹೋರಾಟ ನಡೆಸುತ್ತಿರುವ ರೈತ ಪರ ಸಂಘಟನೆ ಹಾಗೂ ಬಿಜೆಪಿ ನಾಯಕರು ಹೇಮಾವತಿ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಗೆ ಮುತ್ತಿಗೆ ಹಾಕಲು ಮುಂದಾದರು. ಕಾಮಗಾರಿ ಸಲಕರಣೆಗಳನ್ನ ಕೆನಾಲ್ ಒಳಗೆ ಎಸೆದು ಆಕ್ರೋಶ‌ ವ್ಯಕ್ತಪಡಿಸಿದ್ದು, ಕೆನಾಲ್ ಕಾಮಗಾರಿಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ರೈತರು ನೆರೆದಿರುವುದರಿಂದ ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

2 / 12
ಹಾಸನ ಜಿಲ್ಲೆಯಲ್ಲಿರುವ ಹೇಮಾವತಿ ನದಿ, ಗೊರೂರು ಜಲಾಶಯದಿಂದ ತುಮಕೂರು ಜಿಲ್ಲೆಗೆ ವರ್ಷಕ್ಕೆ 24 ಟಿಎಂಸಿ ನೀರು ಹಂಚಿಕೆ ಆಗಬೇಕು. ಆದರೆ ಯಾವುದೇ ವರ್ಷವೂ 24 ಟಿಎಂಸಿ ನೀರು ಹಾಸನದಿಂದ ತುಮಕೂರಿಗೆ ಹರಿದಿಲ್ಲ.  ಈ ಯೋಜನೆಯಡಿ ಗುಬ್ಬಿ ತಾಲ್ಲೂಕಿನ ಸಂಕಾಪುರದಿಂದ ಪೈಪ್ ಲೇನ್‌ನಲ್ಲಿ ಕುಣಿಗಲ್ ಮಾರ್ಗವಾಗಿ ಮಾಗಡಿಗೆ ನೀರು ಹರಿಸಲಾಗುತ್ತಿದೆ. ಇದಕ್ಕೆ ತುಮಕೂರು ಜಿಲ್ಲೆಯ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

3 / 12
ಗುಬ್ಬಿ, ಕುಣಿಗಲ್ ತಾಲ್ಲೂಕಿನಿಂದ ನೈಸರ್ಗಿಕವಾಗಿ ನಾಲೆಗಳ ಮೂಲಕವೇ ಮಾಗಡಿಗೆ ನೀರು ಹರಿಸಿ. ಅದನ್ನ ಬಿಟ್ಟು ದೊಡ್ಡ ಸ್ಟೀಲ್ ಪೈಪ್ ಬಳಸಿ ಕುಣಿಗಲ್ ಮೂಲಕ ಮಾಗಡಿಗೆ ನೀರು ಹರಿಸುವುದು ಬೇಡ. ಇದರಿಂದ ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್‌ನಿಂದ ತುಮಕೂರು ಜಿಲ್ಲೆಗೆ ಹೇಮಾವತಿ ನೀರು ಸಿಗದಂತೆ ಆಗುತ್ತೆ ಎಂಬುದು ತುಮಕೂರು ರೈತರ ಆತಂಕ .

4 / 12
 ಡಿಸಿಎಂ ಡಿಕೆ ಶಿವಕುಮಾರ್ ಅವರ ಕನಸಿನ ಯೋಜನೆ ಹೇಮಾವತಿ ಲಿಂಕಿಂಗ್ ಕೆನಾಲ್ ಗೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ  ಎಚ್​ ಡಿ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಆದೇಶ ಮಾಡಲಾಗಿತ್ತು. 2019ರಲ್ಲಿ ಆದೇಶಗೊಂಡ ಯೋಜನೆ‌. ಈ ಸಂಬಂಧ 600 ಕೋಟಿ ರೂ. ಅನುದಾನ ಸಹ ಬಿಡುಗಡೆ ಮಾಡಲಾಗಿತ್ತು.

5 / 12
2023ರ ವಿಧಾನಸಭಾ ಚುನಾವನೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆಯೇ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಕೆ ಶಿವಕುಮಾರ್, ನೆನೆಗುದಿಗೆ ಬಿದ್ದಿದ್ದ ಎಕ್ಸ್​ ಪ್ರೆಸ್​ ಲಿಂಕ್​ ಕೆನಾಲ್ ಕಾಮಗಾರಿಗೆ ಮರು ಜೀವ ಕೊಟ್ಟರು. ಇದರೊಂದಿಗೆ 450 ಕೋಟಿ ಇದ್ದ ಕಾಮಗಾರಿ ವೆಚ್ಚವು 900 ಕೋಟಿಗೆ ಏರಿಕೆಯಾಯಿತು

6 / 12
ಅಸಲಿಗೆ ಮೊದಲು ಅಂದರೇ ಹೇಮಾವತಿ ಓಪನ್ ಕೆನಾಲ್ 2005ರಿಂದ ಗೊರೂರು ಜಲಾಶಯದಿಂದ ಓಪನ್ ಕೆನಾಲ್ ನಲ್ಲಿ ಬರುತ್ತಿದೆ. ತುಮಕೂರಿನ ಹಲವು ತಾಲೂಕುಗಳ ಮುಖಾಂತರ ಕುಣಿಗಲ್ ಗೆ ತೆರಳುತಿದ್ದ ಓಪನ್ ಹೇಮಾವತಿ ಕೆನಾಲ್. ಗೊರೂರು ಜಲಾಶಯದಿಂದ ತುರುವೇಕೆರೆಗೆ ಎಂಟ್ರಿ. ತಿಪಟೂರು, ಗುಬ್ಬಿ ಮುಖಾಂತರ, ತುಮಕೂರು ನಗರ,ತುಮಕೂರು ಗ್ರಾಮಾಂತರವಾಗಿ ಹರಿದು ಕುಣಿಗಲ್ ಗೆ ಹೊಗುವ ಕೆನಾಲ್.

7 / 12
ತುಮಕೂರಿಗೆ 25.31 ಟಿಎಂಸಿ ನೀರು ಹಂಚಿಕೆ ಮಾಡಲು ನಿಗದಿಯಾಗಿತ್ತು. ಆದರೇ ಸರಿಯಾದ ಪ್ರಮಾಣದಲ್ಲಿ ನೀರು ಹಂಚಿಕೆಯಾಗಿಲ್ಲ. ಜೊತೆಗೆ ಜಿಲ್ಲೆಯ ಟೇಲ್ ಎಂಡ್ ನಲ್ಲಿರುವ ಕುಣಿಗಲ್ ಗೆ ನೀರು ಇಲ್ಲದಂತಾಗಿತ್ತು. ಕುಣಿಗಲ್ ಗೆ ಅಗತ್ಯವಾದದ್ದು 3 ಟಿಎಂಸಿ ನೀರು. ಹೀಗಾಗಿ ಕುಣಿಗಲ್ ಗೆ ಅಗತ್ಯ ನೀರು ಸಂಪರ್ಕ ಕಲ್ಪಿಸಲು ಈ ಎಕ್ಸ್ ಪ್ರೆಸ್ ಲಿಂಕಿಂಗ್ ಕೊನಾಲ್ ಯೋಜನೆ ತರಲಾಯ್ತು.

8 / 12
ಲಿಂಕಿಂಗ್ ಕ್ಯಾನಾಲ್ ಮುಖಾಂತರ ಕುಣಿಗಲ್ ಗೆ ಪೈಪ್​ ಲೇನ್ ನಲ್ಲಿ ನೀರು ಬಿಡುವ ಯೋಜನೆ ಇದ್ದಾಗಿದ್ದು,
ಗುಬ್ಬಿಯ ಸಂಕಾಪುರದಿಂದ ಆರಂಭವಾಗುತ್ತದೆ. ಕುಣಿಗಲ್ ಕೆರೆಗೆ ತಲುಪಲು ಸಿದ್ಧಗೊಂಡ ಯೋಜನೆ ಇದಾಗಿದೆ.

ಲಿಂಕಿಂಗ್ ಕ್ಯಾನಾಲ್ ಮುಖಾಂತರ ಕುಣಿಗಲ್ ಗೆ ಪೈಪ್​ ಲೇನ್ ನಲ್ಲಿ ನೀರು ಬಿಡುವ ಯೋಜನೆ ಇದ್ದಾಗಿದ್ದು, ಗುಬ್ಬಿಯ ಸಂಕಾಪುರದಿಂದ ಆರಂಭವಾಗುತ್ತದೆ. ಕುಣಿಗಲ್ ಕೆರೆಗೆ ತಲುಪಲು ಸಿದ್ಧಗೊಂಡ ಯೋಜನೆ ಇದಾಗಿದೆ.

9 / 12
ಯೋಜನೆ ಮರುಜೀವ ಸಿಗುತ್ತಿದ್ದಂತೆಯೇ ತುಮಕೂರು ಭಾಗದಲ್ಲಿ ವಿರೋಧ ವ್ಯಕ್ತವಾಯಿತು. ಒಂದೆಡೆ ಶ್ರೀರಂಗ ಯೋಜನೆ ಪೂರ್ಣವಾಗುವ ಹಂತದಲ್ಲಿದ್ದರೆ ಮತ್ತೊಂದೆಡೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕಡಪ ಬಳಿಯ ಡಿ ರಾಂಪುರ ಸಮೀಪ ಲಿಂಕ್ ಕೆನಾಲ್ ಕಾಮಗಾರಿ ಶುರುವಾಯ್ತು. ಇದರಿಂದಾಗಿ ನಮಗೆ ಹಂಚಿಕೆಯಾಗಿರುವ ನೀರೇ ಪೂರ್ಣ ಪ್ರಮಾಣದಲ್ಲಿ ತಲುಪುತ್ತಿಲ್ಲ. ಹೀಗಿರುವಾಗ ಎಕ್ಸ್ ಪ್ರೆಸ್​ ಕೆನಾಲ್ ಯೋಜನೆ ಮೂಲಕ ನಮ್ಮ ಪಾಲಿನ ನೀರನ್ನು ಮಾಗಡಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ. ಇದರಿಂದ ನಮಗೆ ಅನ್ಯಾಯವಾಗುತ್ತದೆ ಎಂಬ ಕೂಗು ಎದ್ದಿದೆ.

10 / 12
ಕಾವೇರಿ ನ್ಯಾಯಾಧೀಕರಣದ ಆದೇಶದಂತೆ ಹೇಮಾವತಿ ನಾಲಾ ವಲಯ ಮತ್ತು ತುಮಕೂರಿಗೆ ಒಟ್ಟು 25.31 ಟಿಎಂಸಿ ನೀರು ನಿಗದಿಯಾಗಿದೆ. ಅದರಂತೆ ನಾಲಾ ವಲಯದಲ್ಲಿರುವ ಹಾಸನ, ಮಂಡ್ಯ,  ತುಮಕೂರು ಹಾಗೂ ರಾಮನಗರ ಜಿಲ್ಲೆಗಳ 14 ತಾಲೂಕುಗಳಿಗೆ ನೀರು ಹಂಚಿಕೆಯಾಯಾಗಿದೆ. ಇದರಲ್ಲಿ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ 66 ಕೆರೆಗಳಿಗೆ ನೀರು ತುಂಬಿಸುವುದು ಸಹ ಸೇರಿದೆ. ಹೇಮಾವತಿ ನೀರಿಗಾಗಿ ತಾಲೂಕಿನಲ್ಲಿ ಹಿರಿಯ ರಾಜಕಾರಣಿ ದಿವಂಗತ ಟಿಎ ರಂಗಯ್ಯಸೇರಿದಂತೆ ಇಂದಿನ ರಾಜಕಾರಣಿಗಳವರೆಗೆ ನಡೆಸಿದ ಪ್ರಯತ್ನದ ಫಲವಾಗಿ ದಶಕಗಳ ಕನಸು ನನಸಾಯಿತು.

11 / 12
2016ರಲ್ಲಿ ಶಂಕುಸ್ಥಾಪನೆ: ಜಲಸಂಪನ್ಮೂಲ ಇಲಾಖೆಯ ಕಾವೇರಿ ನೀರಾವರಿ ನಿಗಮದ ವತಿಯಿಂದ ಕುಣಿಗಲ್ ತಾಲೂಕಿನಲ್ಲಿ ಹುತ್ರಿದುರ್ಗ ಹೋಬಳಿ ಹಾಗೂ ಮಾಗಡಿ ತಾಲೂಕು ಒಳಗೊಂಡಂತೆ 83 ಕೆರೆಗಳಿಗೆ ಹೇಮಾವತಿ ನೀರು ತುಂಬಿಸುವ 327 ಕೋಟಿ ಮೊತ್ತದ ಶ್ರೀರಂಗ ಏತ ನೀರಾವತಿ ಯೋಜನೆ ಗೆ 2016ರಲ್ಲಿ ಚಾಲನೆ ಸಿಕಿತ್ತು.

12 / 12

Published On - 5:22 pm, Sat, 31 May 25

ಜಗದೀಶ ಬಿ.
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
Follow Us
ರಿಷಬ್ ಶೆಟ್ಟಿ ಹೊಸ ಸಿನಿಮಾನಲ್ಲಿ ನಟಿಸಲು ನೂಕು ನುಗ್ಗಲು: ವಿಡಿಯೋ ನೋಡಿ

ಕಾಂಗ್ರೆಸ್ ಸೇವಾದಳದಿಂದ ಎಡವಟ್ಟು: ಉಲ್ಟಾ ಧ್ವಜ ನೀಡಿ ಅಧಿಕಾರ ಹಸ್ತಾಂತರ

ಉಪ್ಪಿನ ಕೇಕ್ ತಿಂದ ಶಾಸ್ತ್ರಿ, ಅದ್ಭುತ ನಟನೆ ಎಂದ ಕಿಚ್ಚ: ವಿಡಿಯೋ ನೋಡಿ

ಗಣಪತಿ ಮೂರ್ತಿ ಮೆರವಣಿಗೆಯಲ್ಲಿ ರಾರಾಜಿಸಿದ ಪೈಲಟ್ ಸ್ಮಿತ್ ಮಚ್ಚರ್ ಫೋಟೋ!

ಶೌಚಾಲಯಕ್ಕೂ ಜಾತಿ ಕೇಳಿದ ಅಧಿಕಾರಿಗಳು: ಪ್ರಜಾಸೇವಾಯಲ್ಲಿ ಕಣ್ಣೀರಿಟ್ಟ ಮಹಿಳೆ

ನೆಲಮಂಗಲ ಭಾಗದಲ್ಲಿ ಮಿತಿಮೀರಿದ ಕಳ್ಳರ ಹಾವಳಿ: ದೇವರನ್ನೂ ಬಿಡದ ಖದೀಮರು

ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲೇ ಕಿತ್ತಾಡಿಕೊಂಡ ಬಿಜೆಪಿ ಮುಖಂಡರು

ಗದಗ ಸರ್ಕಾರಿ ಶಾಲಾ ವಿದ್ಯಾರ್ಥಿಗಳ ಆವಿಷ್ಕಾರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ದಸರಾ ಸಮಿತಿಯಿಂದ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ

SIR ಗೊಂದಲ: ಜೀವಂತ ವ್ಯಕ್ತಿಗಳ ಮರಣ ಪತ್ರ ಪ್ರದರ್ಶಿಸಿದ ಯತ್ನಾಳ್