Wimbledon 2024 Women’s Singles Final: ಚೊಚ್ಚಲ ವಿಂಬಲ್ಡನ್‌ ಗೆದ್ದ ಬಾರ್ಬೊರಾ ಕ್ರೆಜ್ಸಿಕೋವಾ..!

|

Updated on: Jul 13, 2024 | 10:01 PM

Wimbledon 2024 Women's Singles Final: ಶನಿವಾರ ನಡೆದ ವಿಂಬಲ್ಡನ್‌ ಮಹಿಳಾ ಸಿಂಗಲ್ಸ್ ಫೈನಲ್‌ ಪಂದ್ಯದಲ್ಲಿ ಇಟಲಿಯ ಜಾಸ್ಮಿನ್ ಪಾವೊಲಿನಿ ಅವರನ್ನು 6-2, 2-6, 6-4 ಸೆಟ್‌ಗಳಿಂದ ಸೋಲಿಸಿದ ಜೆಕ್ ಗಣರಾಜ್ಯದ ಬಾರ್ಬೊರಾ ಕ್ರೆಜ್ಸಿಕೋವಾ ಚೊಚ್ಚಲ ವಿಂಬಲ್ಡನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ಇತ್ತ ಮೊದಲ ಗ್ರ್ಯಾಂಡ್​ಸ್ಲಾಮ್ ಸಿಂಗಲ್ಸ್ ಪ್ರಶಸ್ತಿ ಗೆದ್ದ ಮೊದಲ ಇಟಾಲಿಯನ್ ಎಂಬ ದಾಖಲೆ ನಿರ್ಮಿಸುವಲ್ಲಿ ಪಾವೊಲಿನಿ ಎಡವಿದರು.

1 / 6
ಶನಿವಾರ ನಡೆದ ವಿಂಬಲ್ಡನ್‌ ಮಹಿಳಾ ಸಿಂಗಲ್ಸ್ ಫೈನಲ್‌ ಪಂದ್ಯದಲ್ಲಿ ಇಟಲಿಯ ಜಾಸ್ಮಿನ್ ಪಾವೊಲಿನಿ ಅವರನ್ನು 6-2, 2-6, 6-4 ಸೆಟ್‌ಗಳಿಂದ ಸೋಲಿಸಿದ ಜೆಕ್ ಗಣರಾಜ್ಯದ ಬಾರ್ಬೊರಾ ಕ್ರೆಜ್ಸಿಕೋವಾ ಚೊಚ್ಚಲ ವಿಂಬಲ್ಡನ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.

2 / 6
ಈ ಮೂಲಕ ಕ್ರೆಜ್ಸಿಕೋವಾ ಅವರು ಓಪನ್ ಎರಾದಲ್ಲಿ ವಿಂಬಲ್ಡನ್‌ನಲ್ಲಿ ಮಹಿಳಾ ಪ್ರಶಸ್ತಿಯನ್ನು ಗೆದ್ದ ಜೆಕ್ ಗಣರಾಜ್ಯದ ನಾಲ್ಕನೇ ಆಟಗಾರ್ತಿ ಎನಿಸಿಕೊಂಡಿದ್ದಾರೆ. ಅವರಿಗಿಂತ ಮೊದಲು, ಯಾನಾ ನೊವೊಟ್ನಾ, ಪೆಟ್ರಾ ಕ್ವಿಟೋವಾ ಮತ್ತು ಕಳೆದ ವರ್ಷದ ಚಾಂಪಿಯನ್ ಮಾರ್ಕೆಟಾ ವೊಂಡ್ರೊಸೊವಾ ಈ ಪ್ರಶಸ್ತಿಯನ್ನು ಗೆದ್ದಿದ್ದರು. ಕ್ರೆಜ್ಸಿಕೋವಾ ಈಗ ಸಿಂಗಲ್ಸ್ ಮತ್ತು ಡಬಲ್ಸ್ ಎರಡರಲ್ಲೂ ವಿಂಬಲ್ಡನ್ ಚಾಂಪಿಯನ್ ಆಗಿದ್ದಾರೆ.

3 / 6
ಇತ್ತ ಮೊದಲ ಗ್ರ್ಯಾಂಡ್​ಸ್ಲಾಮ್ ಸಿಂಗಲ್ಸ್ ಪ್ರಶಸ್ತಿ ಗೆದ್ದ ಮೊದಲ ಇಟಾಲಿಯನ್ ಎಂಬ ದಾಖಲೆ ನಿರ್ಮಿಸುವಲ್ಲಿ ಪಾವೊಲಿನಿ ಎಡವಿದರು. ಈ ವರ್ಷದ ಆರಂಭದಲ್ಲಿ, ಫ್ರೆಂಚ್ ಓಪನ್ ಫೈನಲ್‌ನಲ್ಲಿ ಪಾವೊಲಿನಿ ವಿಶ್ವದ ನಂಬರ್ ಒನ್ ಆಟಗಾರ್ತಿ ಇಗಾ ಸ್ವಿಯಾಟೆಕ್ ವಿರುದ್ಧ ಸೋತಿದ್ದರು.

4 / 6
ಇದೀಗ ವಿಂಬಲ್ಡನ್‌ ಫೈನಲ್ ಪಂದ್ಯದಲ್ಲಿ ಕ್ರೆಜ್ಸಿಕೋವಾ ವಿರುದ್ಧ ಕಠಿಣ ಹೋರಾಟ ನೀಡಿದ ಪಾವೊಲಿನಿಗೆ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಗೆಲುವು ದಾಖಲಿಸಲು ಸಾಧ್ಯವಾಗಲಿಲ್ಲ. ಆದಾಗ್ಯೂ ಪಾವೊಲಿನಿ ವಿಂಬಲ್ಡನ್ ಫೈನಲ್ ತಲುಪಿದ ಮೊದಲ ಇಟಾಲಿಯನ್ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

5 / 6
ಒಂದು ಗಂಟೆ 56 ನಿಮಿಷಗಳ ಕಾಲ ನಡೆದ ಈ ಪಂದ್ಯದಲ್ಲಿ ಕ್ರೆಜ್ಸಿಕೋವಾ ಮೊದಲ ಸೆಟ್ ಅನ್ನು ಸುಲಭವಾಗಿ ಗೆದ್ದುಕೊಂಡರು. ಆದಾಗ್ಯೂ, ಜಾಸ್ಮಿನ್ ಬಲವಾದ ಪುನರಾಗಮನವನ್ನು ಮಾಡಿ ಪಂದ್ಯವನ್ನು ನಿರ್ಣಾಯಕ ಸೆಟ್‌ಗೆ ಕೊಂಡೊಯ್ದರು. ಮೂರನೇ ಹಾಗೂ ಕೊನೆಯ ಸೆಟ್‌ನಲ್ಲಿ ಕ್ರೆಜ್ಸಿಕೋವಾ ದಿಟ್ಟ ಪ್ರದರ್ಶನ ನೀಡಿ ಜಯಗಳಿಸಿದರು.

6 / 6
ಇದೀಗ ವಿಂಬಲ್ಡನ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಳ್ಳುವ ಮೂಲಕ ಕ್ರೆಜ್ಸಿಕೋವಾ ಎರಡನೇ ಬಾರಿಗೆ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿಯನ್ನು ತಮ್ಮ ಖಾತೆಗೆ ಹಾಕಿಕೊಂಡಿದ್ದಾರೆ. ಇದಕ್ಕೂ ಮುನ್ನ ಅವರು 2021ರಲ್ಲಿ ಫ್ರೆಂಚ್ ಓಪನ್ ಪ್ರಶಸ್ತಿ ಗೆದ್ದಿದ್ದರು. ಇತ್ತ ಎರಡನೇ ಬಾರಿಗೆ ಗ್ರ್ಯಾಂಡ್ ಸ್ಲಾಮ್ ಫೈನಲ್ ತಲುಪಿದ್ದ ಜಾಸ್ಮಿನ್, ಕಳೆದ ಬಾರಿಯಂತೆ ಈ ಬಾರಿಯೂ ಅವರು ಖಾಲಿ ಕೈಯಲ್ಲಿ ಹಿಂದಿರುಗಬೇಕಾಯಿತು.

Published On - 9:54 pm, Sat, 13 July 24