ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಮೈಸೂರಿನ ಜೆಎಸ್‌ಎಸ್ ಕಾನೂನು ಕಾಲೇಜಿನ ಮೂವರು ವಿದ್ಯಾರ್ಥಿಗಳು ಪ್ರಥಮ ಬಹುಮಾನ ಗಳಿಸಿದ್ದಾರೆ.
ಮೈಸೂರಿನ ಜೆಎಸ್‌ಎಸ್ ಕಾಲೇಜಿನ 3ನೇ ವರ್ಷದ ವಿದ್ಯಾರ್ಥಿನಿ ಯು ಜೆ ಶೀತಲ್, 2ನೇ ವರ್ಷದ ವಿದ್ಯಾರ್ಥಿಗಳಾದ ಅನನ್ಯ ಹಾಗೂ ರೋಹನ್ ವಿ ಗಂಗಡ್ಕರ್ ಅವರು ಪ್ರಥಮ ಸ್ಥಾನ ಪಡೆದಿದ್ದಾರೆ.
ಬೆಂಗಳೂರಿನ ಸೌಂದರ್ಯ ಕಾನೂನು ಕಾಲೇಜಿನಲ್ಲಿ 2023ರ ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯನ್ನ ಆಯೋಜಿಸಲಾಗಿತ್ತು.
ಇನ್ನು ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಆಕರ್ಷಕ ಟ್ರೋಫಿ ಹಾಗೂ 30 ಸಾವಿರ ನಗದು ಬಹುಮಾನ ವಿತರಿಸಲಾಯಿತು.
ಕರ್ನಾಟಕ ಕಾನೂನು ಪ್ರಾಧಿಕಾರದ ಮುಖ್ಯಸ್ಥರಾದ ನ್ಯಾ ಎಸ್ ಆರ್ ಬನ್ನೂರ್ ಮಠ್ ಹಾಗೂ ನಿವೃತ್ತ ನ್ಯಾಯಾಧೀಶರಾದ ಧರ್ಮಗೌಡರ್ ಅವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿದರು.
ಈ ಸ್ಪರ್ಧೆಯಲ್ಲಿ ದೇಶದ ವಿವಿಧ ರಾಜ್ಯದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
ಇನ್ನು ಈ ಹಿಂದೆ ಮಾರ್ಚ್ 2023 ರಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿಯೂ ಕೂಡ ಮೈಸೂರಿನ ಜೆಎಸ್‌ಎಸ್ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಬಹುಮಾನ ಪಡೆದಿದ್ದರು.