ಚಳಿಗಾಲದಲ್ಲಿ ಬಿಪಿ ಕಂಟ್ರೋಲ್ ಮಾಡಬೇಕಾ?; ಈ ಹಣ್ಣುಗಳನ್ನು ತಿನ್ನಿ
ಚಳಿಗಾಲದಲ್ಲಿ ಆರೋಗ್ಯ ಹದಗೆಡುವುದು ಸಾಮಾನ್ಯ. ಅದರಲ್ಲೂ ಬಿಪಿ, ಮಧುಮೇಹ, ಹೃದಯದ ತೊಂದರೆ, ಅಸ್ತಮಾ ಮುಂತಾದ ಆರೋಗ್ಯ ಸಮಸ್ಯೆಗಳು ಇರುವವರಿಗೆ ಚಳಿಗಾಲದಲ್ಲಿ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಸವಾಲಿನ ಕೆಲಸ. ನಿಮ್ಮ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುವ 8 ಹಣ್ಣುಗಳಿವು.
Updated on: Jan 15, 2024 | 6:05 PM

ಚಳಿಗಾಲದಲ್ಲಿ ನಿಮ್ಮ ಹೃದಯದ ಆರೋಗ್ಯ ಕಾಪಾಡುವ, ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುವ 8 ಹಣ್ಣುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಸೇಬು ಹಣ್ಣು ಕರಗುವ ಫೈಬರ್‌ನ ಉತ್ತಮ ಮೂಲವಾಗಿದ್ದು, ಇದು ಉತ್ತಮ ಹೃದಯದ ಆರೋಗ್ಯ ಮತ್ತು ರಕ್ತದೊತ್ತಡ ನಿಯಂತ್ರಣಕ್ಕೆ ಕೊಡುಗೆ ನೀಡುತ್ತದೆ.

ಬಾಳೆಹಣ್ಣಿನಲ್ಲಿ ಪೊಟ್ಯಾಸಿಯಮ್ ಸಮೃದ್ಧವಾಗಿದೆ, ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಬೆರಿ ಹಣ್ಣುಗಳು ವಿಟಮಿನ್ ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ. ಇದು ರಕ್ತದೊತ್ತಡವನ್ನು ನೈಸರ್ಗಿಕವಾಗಿ ನಿರ್ವಹಿಸಲು ಸಹಾಯ ಮಾಡುತ್ತದೆ.

ದ್ರಾಕ್ಷಿ ಹಣ್ಣುಗಳು ರಕ್ತದೊತ್ತಡ ನಿಯಂತ್ರಣಕ್ಕೆ ಸಂಬಂಧಿಸಿರುವ ನೈಸರ್ಗಿಕ ಸಂಯುಕ್ತಗಳನ್ನು ಹೊಂದಿರುತ್ತವೆ

ಕಿವಿ ಹಣ್ಣು ಪೊಟ್ಯಾಸಿಯಮ್ ಮತ್ತು ವಿಟಮಿನ್ ಕೆ ಸೇರಿದಂತೆ ಪೋಷಕಾಂಶಗಳಿಂದ ತುಂಬಿರುತ್ತದೆ. ಇವೆರಡೂ ರಕ್ತದೊತ್ತಡದ ಮಟ್ಟವನ್ನು ನಿಯಂತ್ರಿಸುತ್ತದೆ.

ಕಿತ್ತಳೆ ಹಣ್ಣಿನಲ್ಲಿ ವಿಟಮಿನ್ ಅಧಿಕವಾಗಿದ್ದು ಅದು ಆರೋಗ್ಯಕರ ರಕ್ತದೊತ್ತಡಕ್ಕೆ ಕೊಡುಗೆ ನೀಡುತ್ತದೆ.

ದಾಳಿಂಬೆಯು ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತದೆ. ಇದು ರಕ್ತದೊತ್ತಡದ ಮಟ್ಟವನ್ನು ಕಡಿಮೆ ಮಾಡುತ್ತದೆ.




