
ಎಲ್ಲೆಡೆ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಕೂಡ ಸಡಗರದಿಂದ ಹಬ್ಬ ಆಚರಿಸುತ್ತಿದ್ದಾರೆ. ಅವರ ಕುಟುಂಬದ ದೀಪಾವಳಿ ಆಚರಣೆಯ ಝಲಕ್ ಈ ಫೋಟೋಗಳಲ್ಲಿದೆ.

ಯಶ್ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಕುಟುಂಬದವರ ಜೊತೆ ಅವರು ಹೆಚ್ಚು ಕಾಲ ಕಳೆಯುತ್ತಾರೆ. ಹಬ್ಬದ ಸಮಯವನ್ನು ಅವರು ಪತ್ನಿ ಮತ್ತು ಮಕ್ಕಳ ಜೊತೆ ಎಂಜಾಯ್ ಮಾಡುತ್ತಿದ್ದಾರೆ.

ಯಶ್ ಮತ್ತು ರಾಧಿಕಾ ಪಂಡಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಅನೇಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಮನೆಯಲ್ಲಿ ದೀಪಾವಳಿ ಸಡಗರ ಹೇಗಿದೆ ಎಂಬುದನ್ನು ಅವರು ಈ ಫೋಟೋಗಳ ಮೂಲಕ ಅಭಿಮಾನಿಗಳಿಗೆ ತೋರಿಸಿದ್ದಾರೆ.

ಮಕ್ಕಳಾದ ಆಯ್ರಾ ಹಾಗೂ ಯಥರ್ವ್ ಸಾಂಪ್ರದಾಯಿಕ ಬಟ್ಟೆ ಧರಿಸಿ ಮಿಂಚಿದ್ದಾರೆ. ಅಪ್ಪ-ಅಮ್ಮನ ಜೊತೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಫೋಟೋಗಳಿಗೆ ಅಭಿಮಾನಿಗಳು ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಬೆಳಕಿನ ಹಬ್ಬದ ಪ್ರಯುಕ್ತ ಯಶ್-ರಾಧಿಕಾ ನಿವಾಸ ವಿದ್ಯುತ್ ದೀಪಗಳಿಂದ ಅಲಂಕಾರಗೊಂಡಿದೆ. ರಾಧಿಕಾ ಪಂಡಿತ್ ಅವರು ಖುಷಿಖುಷಿಯಾಗಿ ಹಬ್ಬ ಆಚರಿಸುತ್ತಿದ್ದಾರೆ. ಅಭಿಮಾನಿಗಳಿಗೆ ಅವರು ಹಬ್ಬದ ಶುಭಾಶಯ ತಿಳಿಸಿದ್ದಾರೆ.