ಶಿವಣ್ಣನ ಮನೆಗೆ ಯಶ್-ರಾಧಿಕಾ ಪಂಡಿತ್ ಭೇಟಿ, ಇಲ್ಲಿವೆ ನೋಡಿ ಚಿತ್ರ
Yash and Radhika Pandit: ನಟ ಯಶ್ ಮತ್ತು ರಾಧಿಕಾ ಪಂಡಿತ್ ದಂಪತಿ ಇಂದು ಮಾನ್ಯತಾ ಟೆಕ್ಪಾರ್ಕ್ ಬಳಿ ಇರುವ ಶಿವರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದರು. ಶಿವಣ್ಣನ ಆರೋಗ್ಯ ವಿಚಾರಿಸಲೆಂದು ಈ ದಂಪತಿ ಇಂದು ಶಿವಣ್ಣನ ನಿವಾಸಕ್ಕೆ ಆಗಮಿಸಿದ್ದಾರೆ.
Updated on: Mar 18, 2025 | 6:57 PM

ಶಿವರಾಜ್ ಕುಮಾರ್ ನಿವಾಸಕ್ಕೆ ನಟ ಯಶ್ ಮತ್ತು ರಾಧಿಕಾ ಪಂಡಿತ್ ಅವರು ಇಂದು ಭೇಟಿ ನೀಡಿದ್ದಾರೆ. ಶಿವಣ್ಣ ಶಸ್ತ್ರಚಿಕಿತ್ಸೆ ಬಳಿಕ ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.

ಶಿವರಾಜ್ ಕುಮಾರ್ ಅವರ ಮಾನ್ಯತಾ ಟೆಕ್ಪಾರ್ಟ್ನ ನಿವಾಸಕ್ಕೆ ಯಶ್ ಮತ್ತು ರಾಧಿಕಾ ಪಂಡಿತ್ ಅವರು ಇಂದು ಸಂಜೆ 5 ಗಂಟೆ ಸುಮಾರಿಗೆ ಆಗಮಿಸಿದರು. ಹಲವು ಸಮಯ ಮನೆಯಲ್ಲಿದ್ದು ಮಾತು-ಕತೆ ನಡೆಸಿದ್ದಾರೆ.

ಶಿವರಾಜ್ ಕುಮಾರ್ ಅನಾರೋಗ್ಯಕ್ಕೆ ಒಳಗಾದ ಬಳಿಕ ಹಲವು ನಟ-ನಟಿಯರು ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. ಆದರೆ ಯಶ್ ಅವರು ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದ ಕಾರಣಕ್ಕೆ ಬರಲಾಗಿರಲಿಲ್ಲ.

ನಟ ಸುದೀಪ್ ಸೇರಿದಂತೆ ಹಲವು ನಟರು ಶಿವಣ್ಣನ ಮನೆಗೆ ಆಗಮಿಸಿದ್ದರು. ಶಿವರಾಜ್ ಕುಮಾರ್ ಅಮೆರಿಕಕ್ಕೆ ತೆರಳುವ ಮುಂಚೆ ಹಲವಾರು ನಟರು ಫೋನ್ ಮಾಡಿ ವಿಚಾರಿಸುತ್ತಿದ್ದಾರೆ. ಎಲ್ಲರಿಗೂ ನನ್ನ ಮೇಲೆ ಪ್ರೀತಿ ಇದೆ. ಎಲ್ಲರಿಗೂ ಈ ಬಗ್ಗೆ ಬೇಸರ ಇದೆ. ಯಶ್ಗೆ ಪಾಪ ನನಗೆ ಫೋನ್ ಮಾಡಿ ಮಾತನಾಡಲು ಸಹ ಬೇಸರ ಎಂದಿದ್ದರು.

ನಟ ಯಶ್ ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದರು. ಹಾಗಾಗಿ ಇಷ್ಟು ದಿನ ಶಿವಣ್ಣನ ಭೇಟಿಗೆ ಬರಲಾಗಿರಲಿಲ್ಲ. ಈಗ ಸಿನಿಮಾ ಚಿತ್ರೀಕರಣದಿಂದ ಬಿಡುವು ಮಾಡಿಕೊಂಡು ಶಿವಣ್ಣನ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.



















