- Kannada News Photo gallery Yash and Srinidhi Shetty travel in private jet for KGF Chapter 2 movie promotion
ಭರ್ಜರಿ ಆಗಿದೆ ‘ಕೆಜಿಎಫ್: ಚಾಪ್ಟರ್ 2’ ಪ್ರಚಾರ; ಖಾಸಗಿ ವಿಮಾನದಲ್ಲಿ ರಾಕಿ ಭಾಯ್ ಟೀಮ್
‘ಕೆಜಿಎಫ್ 2’ ಚಿತ್ರದ ಬಿಡುಗಡೆಗೆ ದಿನಗಣನೆ ಆರಂಭ ಆಗಿದೆ. ಹಲವು ರಾಜ್ಯಗಳಿಗೆ ತೆರಳಿ ಸಿನಿಮಾದ ಪ್ರಚಾರ ಮಾಡಲಾಗುತ್ತಿದೆ. ಯಶ್ ಮತ್ತು ಅವರ ತಂಡದವರು ಖಾಸಗಿ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.
Updated on: Mar 31, 2022 | 4:57 PM

Yash and Srinidhi Shetty travel in private jet for KGF Chapter 2 movie promotion

Yash and Srinidhi Shetty travel in private jet for KGF Chapter 2 movie promotion

ಬೇರೆ ಬೇರೆ ರಾಜ್ಯಗಳಿಗೆ ತೆರಳಿ ಪ್ರಚಾರ ಮಾಡಲಾಗುತ್ತಿದೆ. ವಿವಿಧ ಮಾಧ್ಯಮಗಳಿಗೆ ಸಂದರ್ಶನ ನೀಡಲು ಕಲಾವಿದರು ಮತ್ತು ತಂತ್ರಜ್ಞರು ತೆರಳುತ್ತಿದ್ದಾರೆ. ಖಾಸಗಿ ವಿಮಾನದಲ್ಲಿ ಪ್ರಯಾಣ ಮಾಡುತ್ತಿರುವ ಫೋಟೋವನ್ನು ಚಿತ್ರತಂಡ ಹಂಚಿಕೊಂಡಿದೆ.

ನಟಿ ಶ್ರೀನಿಧಿ ಶೆಟ್ಟಿ ಅವರು ಈ ಸಿನಿಮಾದಲ್ಲಿ ಯಶ್ಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಅವರು ಕೂಡ ಚಿತ್ರದ ಪ್ರಚಾರ ಕಾರ್ಯದಲ್ಲಿ ಭಾಗಿ ಆಗಿದ್ದಾರೆ. ಕನ್ನಡ, ಹಿಂದಿ, ತಮಿಳು, ಮಲಯಾಳಂ ಹಾಗೂ ತೆಲುಗು ಭಾಷೆಗಳಲ್ಲಿ ‘ಕೆಜಿಎಫ್: ಚಾಪ್ಟರ್ 2’ ಬಿಡುಗಡೆ ಆಗಲಿದೆ.

ಏ.14ರಂದು ‘ಕೆಜಿಎಫ್: ಚಾಪ್ಟರ್ 2’ ಸಿನಿಮಾ ವಿಶ್ವಾದ್ಯಂತ ಬಿಡುಗಡೆ ಆಗಲಿದೆ. ವಿಜಯ್ ಕಿರಗಂದೂರು ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಸಂಜಯ್ ದತ್, ರವೀನಾ ಟಂಡನ್ ಮುಂತಾದ ಸ್ಟಾರ್ ಕಲಾವಿದರು ಬಣ್ಣ ಹಚ್ಚಿದ್ದಾರೆ.



















