‘ರಾಕಿಂಗ್ ಸ್ಟಾರ್’ ಯಶ್ ಹುಟ್ಟುಹಬ್ಬಕ್ಕೆ ರಾಜ್ಯಾದ್ಯಂತ ರಾರಾಜಿಸುತ್ತಿರುವ ಬಿಲ್ಬೋರ್ಡ್
ಈ ವರ್ಷ ಜನವರಿ 8ರಂದು ಯಶ್ ಅವರು 40ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ನೂರಾರು ಬಿಲ್ಬೋರ್ಡ್ ರಾರಾಜಿಸುತ್ತಿವೆ. ಆ ಮೂಲಕ ಯಶ್ ಅವರಿಗೆ ಸ್ನೇಹಿತರು ಹುಟ್ಟುಹಬ್ಬದ ಶುಭ ಕೋರುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾದಿಂದ ಅಭಿಮಾನಿಗಳಿಗೆ ಟೀಸರ್ ಗಿಫ್ಟ್ ಸಿಗುವ ಸಾಧ್ಯತೆ ಇದೆ.
Updated on: Jan 05, 2026 | 9:20 PM

ಖ್ಯಾತ ನಟ ಯಶ್ ಅವರಿಗೆ ಜನವರಿ 8ರಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅಭಿಮಾನಿಗಳು ಭರ್ಜರಿಯಾಗಿ ಸೆಲೆಬ್ರೇಟ್ ಮಾಡಲು ಸಜ್ಜಾಗಿದ್ದಾರೆ. ಅದಕ್ಕೆ ಸಾಕ್ಷಿಯೇ ಈ ಫೋಟೋಗಳು.

ಯಶ್ ಅವರ ಸ್ನೇಹಿತರು ರಾಜ್ಯದ ಹಲವು ಕಡೆಗಳಲ್ಲಿ ಬಿಲ್ಬೋರ್ಡ್ ಮೂಲಕ ಹುಟ್ಟುಹಬ್ಬಕ್ಕೆ ಶುಭ ಕೋರಿದ್ದಾರೆ. ಬೆಂಗಳೂರಿನಲ್ಲೇ ನೂರಾರು ದೊಡ್ಡ ದೊಡ್ಡ ಬಿಲ್ಬೋರ್ಡ್ ರಾರಾಜಿಸುತ್ತಿವೆ.

‘ಟಾಕ್ಸಿಕ್’ ಸಿನಿಮಾದ ಕೆಲಸಗಳಲ್ಲಿ ಯಶ್ ಅವರು ಬ್ಯುಸಿ ಆಗಿದ್ದಾರೆ. ಈ ಸಿನಿಮಾದ ಮೇಲೆ ಅಭಿಮಾನಿಗಳಿಗೆ ಸಖತ್ ನಿರೀಕ್ಷೆ ಇದೆ. ಮಾರ್ಚ್ 19ರಂದು ‘ಟಾಕ್ಸಿಕ್’ ಚಿತ್ರ ರಿಲೀಸ್ ಆಗಲಿದೆ.

ಈ ಬಾರಿಯೂ ಕೂಡ ಫ್ಯಾನ್ಸ್ ಜೊತೆ ಯಶ್ ಅವರು ಜನ್ಮದಿನ ಆಚರಣೆ ಮಾಡುವುದಿಲ್ಲ. ಮೂಲಗಳ ಪ್ರಕಾರ, ‘ಟಾಕ್ಸಿಕ್’ ಸಿನಿಮಾದ ಟೀಸರ್ ಮೂಲಕ ಅವರು ಅಭಿಮಾನಿಗಳಿಗೆ ದರ್ಶನ ನೀಡಲಿದ್ದಾರೆ.

ಯಶ್ ಅವರು ಪ್ಯಾನ್ ಇಂಡಿಯಾ ಸ್ಟಾರ್. ದೇಶಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಈ ಬಾರಿ ಯಶ್ ಅವರು 40ನೇ ವಸಂತಕ್ಕೆ ಕಾಲಿಡುತ್ತಿದ್ದು, ಕಾಮನ್ ಡಿಪಿ ಬಿಡುಗಡೆ ಆಗುತ್ತಿದೆ.

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್ ಇಂಟರ್ನೆಟ್) ಸಂಸ್ಥೆಯಲ್ಲಿ ಕಂಟೆಂಟ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್ ಸಾಹಿತ್ಯದ ವಿದ್ಯಾರ್ಥಿ.
Read More



