
‘ರಾಕಿಂಗ್ ಸ್ಟಾರ್’ ಯಶ್ ಹಾಗೂ ರಾಧಿಕಾ ಪಂಡಿತ್ ದಂಪತಿಯ ಮುದ್ದಿನ ಪುತ್ರ ಯಥರ್ವ್ ತುಂಬಾ ಚೂಟಿ. ಆತನ ಫೋಟೋಗಳನ್ನು ಈ ದಂಪತಿ ಆಗಾಗ ಶೇರ್ ಮಾಡಿಕೊಳ್ಳುತ್ತಾರೆ. ಅವು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತವೆ.

ಯಥರ್ವ್ನ 3ನೇ ವರ್ಷದ ಹುಟ್ಟುಹಬ್ಬವನ್ನು ರಾಧಿಕಾ ಮತ್ತು ಯಶ್ ದಂಪತಿ ಸಂಭ್ರಮದಿಂದ ಆಚರಿಸಿದ್ದಾರೆ. ಮುದ್ದು ಮಗನಿಗೆ ಇಬ್ಬರೂ ಮನಸಾರೆ ಹಾರೈಸಿದ್ದಾರೆ. ಅಭಿಮಾನಿಗಳು ಕೂಡ ಈ ಪುಟಾಣಿಗೆ ಬರ್ತ್ಡೇ ವಿಶ್ ಮಾಡಿದ್ದಾರೆ.

ಯಶ್ ಅವರು ಪಕ್ಕಾ ಫ್ಯಾಮಿಲಿ ಮ್ಯಾನ್. ಸಿನಿಮಾ ಕೆಲಸಗಳ ಬಿಡುವಿನಲ್ಲಿ ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಮಕ್ಕಳ ಜೊತೆ ಹೆಚ್ಚು ಕಾಲ ಕಳೆಯುತ್ತಾರೆ.

ಯಶ್ ಮತ್ತು ರಾಧಿಕಾ ಅವರು ಹಂಚಿಕೊಂಡಿರುವ ಈ ಫೋಟೋಗಳಿಗೆ ಫ್ಯಾನ್ಸ್ ಬಗೆಬಗೆಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ಲಕ್ಷಾಂತರ ಅಭಿಮಾನಿಗಳು ಲೈಕ್ ಮಾಡಿದ್ದಾರೆ.

‘ಕೆಜಿಎಫ್: ಚಾಪ್ಟರ್ 2’ ಭಾರಿ ಯಶಸ್ಸು ಕಂಡ ಬಳಿಕ ಯಶ್ ಹೊಸ ಸಿನಿಮಾ ಇನ್ನೂ ಒಪ್ಪಿಕೊಂಡಿಲ್ಲ. ಅವರು ಸಹಿ ಮಾಡಲಿರುವ ಮುಂದಿನ ಪ್ರಾಜೆಕ್ಟ್ ಯಾವುದು ಎಂಬುದನ್ನು ತಿಳಿದುಕೊಳ್ಳಲು ಅಭಿಮಾನಿಗಳು ಕಾದಿದ್ದಾರೆ.
Published On - 10:22 pm, Sun, 30 October 22