ಯೋಗರಾಜ್ ಭಟ್ ನಿರ್ದೇಶನದ ‘ಗಾಳಿಪಟ’ ಸಿನಿಮಾ ಹಿಟ್ ಆಗಿತ್ತು. ಈ ಸಿನಿಮಾವನ್ನು ನೋಡಿ ಸಾಕಷ್ಟು ಮಂದಿ ಮೆಚ್ಚಿಕೊಂಡಿದ್ದರು.
ಈಗ ಯೋಗರಾಜ್ ಭಟ್ ‘ಗಾಳಿಪಟ 2’ ಸಿನಿಮಾ ಕೈಗೆತ್ತಿಕೊಂಡು ಅದರ ಶೂಟಿಂಗ್ ಪೂರ್ಣಗೊಳಿಸಿದ್ದಾರೆ. ಈ ಮೂಲಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಅವರು ಚಾಲನೆ ನೀಡಲಿದ್ದಾರೆ.
‘ಗಾಳಿಪಟ 2’ ಚಿತ್ರದಲ್ಲಿ ಗಣೇಶ್, ಅನಂತ್ ನಾಗ್, ದಿಗಂತ್, ಪವನ್ ಕುಮಾರ್ ಮೊದಲಾದವರು ನಟಿಸುತ್ತಿದ್ದಾರೆ.
‘ಗಾಳಿಪಟ 2’ ಚಿತ್ರದ ಶೂಟಿಂಗ್ ಪೂರ್ಣಗೊಂಡಿದ್ದು, ಇದರ ಫೋಟೋಗಳನ್ನು ಚಿತ್ರತಂಡ ಹಂಚಿಕೊಂಡಿದೆ.
ಶೀಘ್ರವೇ ಚಿತ್ರವನ್ನು ತೆರೆಮೇಲೆ ತರುವ ಆಲೋಚನೆ ಚಿತ್ರತಂಡದ್ದು.