Ekka Movie: ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿದ ‘ಎಕ್ಕ’ ಸಿನಿಮಾ ತಂಡ

Updated on: Jul 11, 2025 | 9:36 PM

‘ಎಕ್ಕ’ ಸಿನಿಮಾದ ಬಿಡುಗಡೆ ಹೊಸ್ತಿಲಿನಲ್ಲಿ ಯುವ ರಾಜ್​ಕುಮಾರ್ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ನಿರ್ಮಾಪಕರಾದ ಕಾರ್ತಿಕ್ ಗೌಡ, ಜಯಣ್ಣ, ಯೋಗಿ ಜಿ. ರಾಜ್ ಮುಂತಾದವರು ಕೂಡ ಈ ವೇಳೆ ಜೊತೆಗಿದ್ದರು. ಶೀಘ್ರದಲ್ಲೇ ರಿಲೀಸ್ ಆಗಲಿರುವ ಈ ಸಿನಿಮಾಗೆ ಸಿದ್ದರಾಮಯ್ಯ ಅವರು ಶುಭ ಕೋರಿದ್ದಾರೆ.

1 / 5
ಯುವ ರಾಜ್​ಕುಮಾರ್ ನಟನೆಯ ‘ಎಕ್ಕ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇಂದು (ಜುಲೈ 11) ಈ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಅದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಚಿತ್ರತಂಡದವರು ಭೇಟಿ ಮಾಡಿದ್ದಾರೆ.

ಯುವ ರಾಜ್​ಕುಮಾರ್ ನಟನೆಯ ‘ಎಕ್ಕ’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಇಂದು (ಜುಲೈ 11) ಈ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಅದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರನ್ನು ಚಿತ್ರತಂಡದವರು ಭೇಟಿ ಮಾಡಿದ್ದಾರೆ.

2 / 5

ಸಿನಿಮಾದ ನಾಯಕ ನಟ ಯುವ ರಾಜ್​ಕುಮಾರ ಸೇರಿದಂತೆ ‘ಎಕ್ಕ’ ಚಿತ್ರತಂಡದ ಪ್ರಮುಖರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಕಾವೇರಿ ನಿವಾಸದಲ್ಲಿ ಈ ಭೇಟಿ ನಡೆದಿದೆ. ಆ ಸಂದರ್ಭದ ಫೋಟೋಗಳು ಇಲ್ಲಿವೆ.

3 / 5

‘ಎಕ್ಕ’ ಚಿತ್ರತಂಡಕ್ಕೆ ಸಿಎಂ ಸಿದ್ದರಾಮಯ್ಯ ಅವರು ಶುಭ ಕೋರಿದ್ದಾರೆ. ಜುಲೈ 18ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ರೋಹಿತ್ ಪದಕಿ ಅವರು ನಿರ್ದೇಶನ ಮಾಡಿದ್ದಾರೆ. ಅದ್ದೂರಿಯಾಗಿ ‘ಎಕ್ಕ’ ಸಿನಿಮಾ ನಿರ್ಮಾಣ ಆಗಿದೆ.

4 / 5

ಡಾ. ರಾಜ್​ಕುಮಾರ್ ಮೊಮ್ಮಗ ಯುವ ರಾಜ್​ಕುಮಾರ್ ಅವರು ನಟಿಸಿರುವ ಎರಡನೇ ಸಿನಿಮಾ ಇದು. ಅಶ್ವಿನಿ ಪುನೀತ್ ರಾಜ್​ಕುಮಾರ್, ಕಾರ್ತಿಕ್ ಗೌಡ, ಜಯಣ್ಣ ಅವರು ಒಟ್ಟಾಗಿ ‘ಎಕ್ಕ’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ.

5 / 5

‘ಎಕ್ಕ’ ಸಿನಿಮಾದ ‘ಬ್ಯಾಂಗಲ್ ಬಂಗಾರಿ’ ಹಾಡು ಈಗಾಗಲೇ ಸೂಪರ್ ಹಿಟ್ ಆಗಿದೆ. ಟ್ರೇಲರ್ ಕೂಡ ಸದ್ದು ಮಾಡುತ್ತಿದೆ. ತುಂಬಾ ಮಾಸ್ ಆಗಿ ಈ ಸಿನಿಮಾ ಮೂಡಿಬಂದಿದೆ ಎಂಬುದು ಟ್ರೇಲರ್ ಮೂಲಕ ಗೊತ್ತಾಗುತ್ತಿದೆ.

ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Loading...
Unable to load recommendations.
Follow Us