Sara Ali Khan: ಪ್ರಕೃತಿ-ಪ್ರಾಣಿಗಳ ಜೊತೆ ಕಳೆದು ಹೋದ ಸಾರಾ ಅಲಿ ಖಾನ್
ಸಾರಾ ಅಲಿ ಖಾನ್ ಅವರು ಕಾಶ್ಮೀರದ ಕಡೆಗಳಲ್ಲಿ ಸುತ್ತಾಟ ನಡೆಸಿದ್ದಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Updated on: Jul 20, 2023 | 1:18 PM

ನಟಿ ಸಾರಾ ಅಲಿ ಖಾನ್ ಅವರು ಸಮಯ ಸಿಕ್ಕಾಗಲೆಲ್ಲ ಸುತ್ತಾಟಕ್ಕೆ ತೆರಳುತ್ತಾರೆ. ದೇಶ ವಿದೇಶ ಸುತ್ತುತ್ತಾರೆ. ಪ್ರಕೃತಿ ಮಧ್ಯೆ ಕಳೆದು ಹೋಗಲು ಸಾರಾ ಅಲಿ ಖಾನ್ ಇಷ್ಟಪಡುತ್ತಾರೆ.

ಈಗ ಸಾರಾ ಅಲಿ ಖಾನ್ ಅವರು ಕಾಶ್ಮೀರದ ಕಡೆಗಳಲ್ಲಿ ಸುತ್ತಾಟ ನಡೆಸಿದ್ದಾರೆ. ಇದರ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಕುರಿಮರಿಯ ಜೊತೆ ಕುಳಿತಿರುವ ಫೋಟೋನ ಸಾರಾ ಅಲಿ ಖಾನ್ ಪೋಸ್ಟ್ ಮಾಡಿದ್ದಾರೆ. ಈ ಫೋಟೋ ಫ್ಯಾನ್ಸ್ಗೆ ಇಷ್ಟವಾಗಿದೆ.

ಸಾರಾ ಅಲಿ ಖಾನ್ ಅವರು ಈ ಮೊದಲು ಕೂಡ ಈ ರೀತಿ ಅನೇಕ ಕಡೆಗಳಲ್ಲಿ ಸುತ್ತಾಟ ನಡೆಸಿದ್ದಿದೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ.

ಸೈಫ್ ಅಲಿ ಖಾನ್ ಮಗಳು ಎನ್ನುವ ಕಾರಣಕ್ಕೆ ಸಾರಾ ಅಲಿ ಖಾನ್ಗೆ ಬೇಡಿಕೆ ಸೃಷ್ಟಿ ಆಗಿದೆ. ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ.

ಇತ್ತೀಚೆಗೆ ಸಾರಾ ಅಲಿ ಖಾನ್ ನಟನೆಯ ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾ ಗೆಲುವು ಕಂಡಿತು. ಇದೇ ಖುಷಿಯಲ್ಲಿ ಅವರು ಗುಡ್ಡ-ಬೆಟ್ಟದಲ್ಲಿ ಸುತ್ತಾಟ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.
Read More




