ಪಶ್ಚಿಮ ಬಂಗಾಳಕ್ಕೆ 1000 ಕೋಟಿ ನೆರವು ಘೋಷಿಸಿದ ಪ್ರಧಾನಿ ಮೋದಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸೂಪರ್​ ಸೈಕ್ಲೋನ್ ಅಂಫಾನ್‌ ಅಟ್ಟಹಾಸದ ಹಿನ್ನೆಲೆ ಇಂದು ವೈಮಾನಿಕ ಸಮೀಕ್ಷೆ ನಡೆಸಿದ, ಪ್ರಧಾನಿ ಮೋದಿ ಪಶ್ಚಿಮ ಬಂಗಾಳಕ್ಕೆ 1 ಸಾವಿರ ಕೋಟಿ ನೆರವು ಘೋಷಿಸಿದ್ದಾರೆ. ಮೃತರ ಕುಟುಂಬಕ್ಕೆ ಕೇಂದ್ರದಿಂದ 2 ಲಕ್ಷ ರೂ. ಪರಿಹಾರವನ್ನೂ ಪ್ರಕಟಿಸಿದ್ದಾರೆ. ಸೈಕ್ಲೋನ್‌ನಲ್ಲಿ ಗಾಯಗೊಂಡವರಿಗೆ ₹ 50 ಸಾವಿರ ಪರಿಹಾರ ಘೋಷಿಸಿದ್ದಾರೆ.

ಮಮತಾ ಬ್ಯಾನರ್ಜಿಗೆ ಧೈರ್ಯ ತುಂಬಿದ ಪ್ರಧಾನಿ ಮೋದಿ 
ಇದೇ ವೇಳೆ, ಸೂಪರ್ ಸೈಕ್ಲೋನ್ ಸಂಕಷ್ಟ ಕಾಲದಲ್ಲಿ ನಿಮ್ಮೊಂದಿಗೆ ನಾವಿದ್ದೇವೆ. ಇಡೀ ದೇಶವೇ ಇದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಪ್ರಧಾನಿ ಮೋದಿ ಧೈರ್ಯ ತುಂಬಿದ್ದಾರೆ.

Related Tags:

Related Posts :

Category: