ಸೋನಿಯಾ ವಿರುದ್ಧ FIR: ಗೃಹ ಸಚಿವ ಬೊಮ್ಮಾಯಿ ಏನಂದ್ರು?

ಮೈಸೂರು: ಪ್ರಧಾನಿ ಮೋದಿ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್‌ಐಆರ್ ದಾಖಲು ವಿಚಾರದಲ್ಲಿ ಕಾಂಗ್ರೆಸ್‌ನವರು ದಿನಕ್ಕೊಂದು ಬೇಡಿಕೆಯನ್ನು ಇಡುತ್ತಾರೆ. ಯಾರೇ ದೂರು ನೀಡಿದರೂ FIR ದಾಖಲಿಸುವ ಕಾನೂನು ಇದೆ. ಸುಪ್ರೀಂಕೋರ್ಟ್ ಆದೇಶದಂತೆ ಅಧಿಕಾರಿಗಳು ಕೆಲಸ ಮಾಡಿದ್ದಾರೆ ಎಂದು ಮೈಸೂರಿನಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

ದೇಶದ ಕಾನೂನು ಎಲ್ಲರಿಗೂ ಒಂದೇ
ತನಿಖೆಯಲ್ಲಿ ಏನು ಮಾಡಬೇಕೊ ಅದನ್ನು ಪೊಲೀಸ್ ಅಧಿಕಾರಿಗಳು ಮಾಡುತ್ತಾರೆ. ಕಾಂಗ್ರೆಸ್‌ನವರು ಅರ್ನಬ್ ಗೋಸ್ವಾಮಿ ವಿರುದ್ಧ FIR ಹಾಕಿಸಿದರು. ದೇಶದಾದ್ಯಂತ 1500ಕ್ಕೂ ಹೆಚ್ಚು FIR ದಾಖಲು ಮಾಡಿದ್ದಾರೆ. ಆಗ ಈ ನಿಲುವು, ನ್ಯಾಯ ಕಾಂಗ್ರೆಸ್‌ನವರಿಗೆ ಗೊತ್ತಿರಲಿಲ್ಲವೇ? ಈ ದೇಶದ ಕಾನೂನು ಎಲ್ಲರಿಗೂ ಅನ್ವಯವಾಗುತ್ತದೆ. ಹೀಗಾಗಿ ಕಾನೂನು ತನ್ನ ಕೆಲಸವನ್ನು ಮಾಡುತ್ತಾ ಇರುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

Related Posts :

Category:

error: Content is protected !!