ಅನ್ನಭಾಗ್ಯ ಯೋಜನೆ ಜಾರಿಯಾಗಿ 10 ವರ್ಷ ಪೂರೈಕೆ: ಟ್ವೀಟ್​ ಮೂಲಕ ಸಂತಸ ವ್ಯಕ್ತಪಡಿಸಿದ ಸಿಎಂ ಸಿದ್ಧರಾಮಯ್ಯ

| Updated By: ಗಂಗಾಧರ​ ಬ. ಸಾಬೋಜಿ

Updated on: Jul 10, 2023 | 4:31 PM

ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಆರಂಭವಾದ ಕಾಂಗ್ರೆಸ್​ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿಗೆ ಬಂದು ಇದೀಗ 10 ವರ್ಷಗಳಾಗಿವೆ. ಈ ಕುರಿತಾಗಿ ಸಿಎಂ ಸಿದ್ಧರಾಮಯ್ಯ ಟ್ವೀಟ್​ ಮಾಡುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಅನ್ನಭಾಗ್ಯ ಯೋಜನೆ ಜಾರಿಯಾಗಿ 10 ವರ್ಷ ಪೂರೈಕೆ: ಟ್ವೀಟ್​ ಮೂಲಕ ಸಂತಸ ವ್ಯಕ್ತಪಡಿಸಿದ ಸಿಎಂ ಸಿದ್ಧರಾಮಯ್ಯ
ಸಿಎಂ ಸಿದ್ಧರಾಮಯ್ಯ
Follow us on

ಬೆಂಗಳೂರು: ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಆರಂಭವಾದ ಕಾಂಗ್ರೆಸ್​ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ (Annabhagya Yojana) ಜಾರಿಗೆ ಬಂದು ಇದೀಗ 10 ವರ್ಷಗಳಾಗಿವೆ. ಬಡಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು 10 ಜುಲೈ 2013 ರಂದು ಜಾರಿಗೊಳಿಸಿ, ನಾಡಿನ ಹಸಿದವರಿಗೆ ನೆಮ್ಮದಿಯ ಅನ್ನ ನೀಡಿದ್ದೆ ಎಂದು ಸಿಎಂ ಸಿದ್ಧರಾಮಯ್ಯ ಟ್ವೀಟ್​ ಮಾಡಿದ್ದಾರೆ.

ನಾನು ನನ್ನ ಬದುಕಿನಲ್ಲಿ ಅನುಭವಿಸಿದ ಹಸಿವು, ಬಡತನದ ಅನುಭವದಿಂದಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮರುಗಳಿಗೆಯಲ್ಲಿಯೇ ‘ಅನ್ನಭಾಗ್ಯ’ ಯೋಜನೆಯನ್ನು ಜಾರಿಗೆ ತರುವ ನಿರ್ಧಾರ ಕೈಗೊಂಡಿದ್ದೆ.

ಇದನ್ನೂ ಓದಿ: ಜೈನಮುನಿ ಕಾಮಕುಮಾರನಂದಿ ಮಹಾರಾಜರ ಹತ್ಯೆ: ಸ್ಥಳಕ್ಕೆ ಗೃಹ ಸಚಿವ ಡಾ ಜಿ ಪರಮೇಶ್ವರ್​ ಭೇಟಿ

ನಮ್ಮ ಈ ಯೋಜನೆಯನ್ನು ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಹಲವು ಆರ್ಥಿಕ- ಸಾಮಾಜಿಕ ಸಂಸ್ಥೆಗಳು ಮತ್ತು ಸರ್ಕಾರಗಳು ಶ್ಲಾಘಿಸಿವೆ ಎಂದು ಹೇಳಲು ಹೆಮ್ಮೆಯೆನಿಸುತ್ತದೆ. ನಾಡಿನ ಜನತೆ ವಿಶ್ವಾಸವಿರಿಸಿ ನೀಡಿದ್ದ ರಾಜಕೀಯ ಅಧಿಕಾರವನ್ನು ಕರ್ನಾಟಕವನ್ನು ಹಸಿವು ಮುಕ್ತಗೊಳಿಸಲು ಸದ್ಬಳಕೆ ಮಾಡಿಕೊಂಡ ಸಂತೃಪ್ತಿ ನನ್ನದು ಎಂದಿದ್ದಾರೆ.

ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ 170 ರೂ.

ಹಸಿವಿನ ಬೇನೆ ನಾಡಿನ ಬಡಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಇಂದಿನಿಂದ ‘ಅನ್ನಭಾಗ್ಯ’ ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ರೂ. 170 ನೀಡಲಿದ್ದೇವೆ.

ಇದನ್ನೂ ಓದಿ: ಹಣಕಾಸಿನ ವ್ಯವಹಾರವೇ ಆಗಿದ್ದರೂ ಮುನಿಗಳ ಹತ್ಯೆ ಏಕೆ ಆಯ್ತು: ಮಾಜಿ ಸಿಎಂ ಬೊಮ್ಮಾಯಿ ಪ್ರಶ್ನೆ

ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲಿಗೆ ನೀಡುವ ಹಣವನ್ನು ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು ನಾಡ ಬಾಂಧವರಲ್ಲಿ ಮನವಿ ಮಾಡುತ್ತೇನೆ. ಹಸಿವಿನ ಸಂಕಟ ಅನುಭವಿಸಿದವರಿಗೆ ಮಾತ್ರ ಅರಿವಿರಲು ಸಾಧ್ಯ. ಹಸಿವುಮುಕ್ತ ಕರ್ನಾಟಕ ನಿರ್ಮಾಣದ ನಮ್ಮ ಪ್ರಯತ್ನಕ್ಕೆ ನಿಮ್ಮ ಸಹಕಾರವಿರಲಿ ಎಂದು ಟ್ವೀಟ್​ ಮಾಡಿದ್ದಾರೆ.

ಲೋಡಿಂಗ್ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

ಅನ್ನಭಾಗ್ಯ ಯೋಜನೆ ಹತ್ತು ವರ್ಷ ಪೂರೈಸಿದ ಹಿನ್ನೆಲೆ ಬೆಂಗಳೂರಿನ ಫ್ರೀಡಂಪಾರ್ಕ್​​ನಲ್ಲಿ ಲೋಡಿಂಗ್ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ ಮಾಡಲಾಯಿತು. ಆಹಾರ ಖಾತೆ ಸಚಿವ ಕೆ.ಹೆಚ್​.ಮುನಿಯಪ್ಪ ಸಮಾವೇಶ ಭೇಟಿ ನಿಡಿದ್ದು, ಸಚಿವರ ಮುಂದೆ ಕಾರ್ಮಿಕರು ತಮ್ಮ ಬೇಡಿಕೆಗಳನ್ನ ಹೇಳಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.