ಉತ್ತರ ಪ್ರದೇಶದ ಇನ್ನೂ 13 ಶಾಸಕರು ಬಿಜೆಪಿ ತೊರೆದು ಸಮಾಜವಾದಿ ಪಕ್ಷ ಸೇರ್ತಾರೆ; ಶರದ್ ಪವಾರ್
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ಸಚಿವ ಹಾಗೂ ಮೂವರು ಶಾಸಕರು ರಾಜೀನಾಮೆ ನೀಡಿದ ಬೆನ್ನಲ್ಲೇ ಸದ್ಯದಲ್ಲೇ ಉತ್ತರ ಪ್ರದೇಶದ 13 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೊಸ ಬಾಂಬ್ ಹಾಕಿದ್ದಾರೆ.
ಮುಂಬೈ: ಉತ್ತರಪ್ರದೇಶದ ವಿಧಾನಸಭಾ ಚುನಾವಣೆಗೆ ಒಂದೇ ತಿಂಗಳು ಬಾಕಿ ಇರುವಾಗ ಯೋಗಿ ಆದಿತ್ಯನಾಥ್ ಸರ್ಕಾರದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ ನೀಡಿದ್ದಾರೆ. ಅದರ ಬೆನ್ನಲ್ಲೇ ಬಿಜೆಪಿಯ ಮೂವರು ಶಾಸಕರು ಕೂಡ ರಾಜೀನಾಮೆ ನೀಡುವ ಮೂಲಕ ಬಿಜೆಪಿಗೆ ಶಾಕ್ ನೀಡಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಎನ್‌ಸಿಪಿ ಮುಖ್ಯಸ್ಥ ಉತ್ತರ ಪ್ರದೇಶದ 13 ಬಿಜೆಪಿ ಶಾಸಕರು ಸದ್ಯದಲ್ಲೇ ರಾಜೀನಾಮೆ ನೀಡಿ, ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಹಾಗೇ, ಗೋವಾ ವಿಧಾನಸಭಾ ಚುನಾವಣೆಯಲ್ಲಿ ಎನ್‌ಸಿಪಿ ಜೊತೆ ಟಿಎಂಸಿ, ಕಾಂಗ್ರೆಸ್ ಕೈ ಜೋಡಿಸಿ, ಚುನಾವಣೆಯನ್ನು ಎದುರಿಸಲಿದೆ ಎಂದು ಶರದ್ ಪವಾರ್ ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್, ಎನ್‌ಸಿಪಿ, ಕಾಂಗ್ರೆಸ್ ಮೂರೂ ಪಕ್ಷಗಳು ಈ ಬಗ್ಗೆ ಚರ್ಚೆ ನಡೆಸುತ್ತಿವೆ. ಈ ಬಗ್ಗೆ ಸದ್ಯದಲ್ಲೇ ನಿರ್ಧಾರ ಘೋಷಿಸಲಾಗುವುದು ಎಂದಿದ್ದಾರೆ. ಗೋವಾದಲ್ಲಿ ಫೆ. 14ರಂದು ನಡೆಯಲಿದೆ.
ಸದ್ಯದಲ್ಲೇ ಉತ್ತರ ಪ್ರದೇಶದ 13 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಮಂಗಳವಾರ ಹೇಳಿದ್ದಾರೆ. ಉತ್ತರ ಪ್ರದೇಶದ ಕಾರ್ಮಿಕ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಅವರು ಸಂಪುಟ ಮತ್ತು ಆಡಳಿತಾರೂಢ ಬಿಜೆಪಿಗೆ ರಾಜೀನಾಮೆ ನೀಡಿ ಮಂಗಳವಾರ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾದ ಬೆನ್ನಲ್ಲೇ ಶರದ್ ಪವಾರ್ ಅವರ ಹೇಳಿಕೆ ಸಂಚಲನ ಸೃಷ್ಟಿಸಿದೆ.
ತಮ್ಮ ಪಕ್ಷವು ಅಖಿಲೇಶ್ ಯಾದವ್ ಅವರ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ. ಉತ್ತರ ಪ್ರದೇಶದ ಜನರು ಬದಲಾವಣೆಯನ್ನು ಬಯಸುತ್ತಿದ್ದಾರೆ. ರಾಜ್ಯದಲ್ಲಿ ಬದಲಾವಣೆಯನ್ನು ನಾವು ಖಂಡಿತವಾಗಿ ನೋಡುತ್ತೇವೆ ಎಂದು ಪವಾರ್ ಮುಂಬೈನಲ್ಲಿ ಹೇಳಿದ್ದಾರೆ.
13 MLAs are going to join Samajwadi Party (SP): NCP chief Sharad Pawar on Uttar Pradesh minister Swami Prasad Maury resigning and joining SP pic.twitter.com/ZZJnAQRvba
— ANI (@ANI) January 11, 2022
ಉತ್ತರ ಪ್ರದೇಶದಲ್ಲಿ ಫೆಬ್ರವರಿ 10ರಿಂದ ಮಾರ್ಚ್ 7ರವರೆಗೆ 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಕೆಲವೇ ದಿನಗಳಲ್ಲಿ 13 ಬಿಜೆಪಿ ಶಾಸಕರು ಸಮಾಜವಾದಿ ಪಕ್ಷ ಸೇರಲಿದ್ದಾರೆ ಎಂದು ಶರದ್ ಪವಾರ್ ಹೇಳಿದ್ದಾರೆ. ಉತ್ತರ ಪ್ರದೇಶದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ ನೀಡಿ ಎಸ್‌ಪಿ ಸೇರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶರದ್ ಪವಾರ್, 13 ಶಾಸಕರು ಸಮಾಜವಾದಿ ಪಕ್ಷ (ಎಸ್‌ಪಿ) ಸೇರಲಿದ್ದಾರೆ.
ಉತ್ತರ ಪ್ರದೇಶದಲ್ಲಿ ನಾವು ಸಮಾಜವಾದಿ ಪಕ್ಷ ಮತ್ತು ಇತರ ಸಣ್ಣ ಪಕ್ಷಗಳೊಂದಿಗೆ ಚುನಾವಣೆ ಎದುರಿಸಲಿದ್ದೇವೆ ಎಂದು ಶರದ್ ಪವಾರ್ ಹೇಳಿದ್ದಾರೆ. ರಾಜ್ಯದ ಇತರ ಮೂವರು ಬಿಜೆಪಿ ಶಾಸಕರು ಇದನ್ನು ಅನುಸರಿಸಿ ಪಕ್ಷವನ್ನು ತೊರೆದಿದ್ದಾರೆ. ಇದರಲ್ಲಿ ತಿಲ್ಹಾರ್ ಶಾಸಕ ರೋಷನ್ ಲಾಲ್ ವರ್ಮಾ, ಬಿಲ್ಹೌರ್ ಶಾಸಕ ಭಗವತಿ ಪ್ರಸಾದ್ ಸಾಗರ್ ಮತ್ತು ತಿಂದವಾರಿ ಶಾಸಕ ಬ್ರಜೇಶ್ ಪ್ರಜಾಪತಿ ಸೇರಿದ್ದಾರೆ.
ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯು ಫೆಬ್ರವರಿ 7 ರಿಂದ ಏಳು ಹಂತಗಳಲ್ಲಿ ನಡೆಯಲಿದೆ. ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.
Published On - 6:30 pm, Tue, 11 January 22